ಜೈಪುರ:ಭಾರತ ಮತ್ತು ಅಮೆರಿಕ ಸೇನೆಗಳ ನಡುವಿನ 20ನೇ ಆವೃತ್ತಿಯ ಸೇನಾ ಜಂಟಿ ಸಮರಾಭ್ಯಾಸ ‘ಯುದ್ಧ್ ಅಭ್ಯಾಸ 2024’ ರಾಜಸ್ಥಾನದ ಪಶ್ಚಿಮ ವಲಯದಲ್ಲಿರುವ ಮಹಾನ್ ಫೀಲ್ಡ್ ಫೈರಿಂಗ್ ರೇಂಜಸ್​ನಲ್ಲಿ ಸೋಮವಾರ ಪ್ರಾರಂಭವಾಗಿದೆ.
ಇದನ್ನೂ ಓದಿ:Mpox Case ಭಾರತದಲ್ಲಿ ಎಂಪಾಕ್ಸ್ ಪ್ರಕರಣ ದೃಢ; ಕೇಂದ್ರದ ಸ್ಪಷ್ಟನೆ ಏನು?
ಭಾರತ ಮತ್ತು ಅಮೆರಿಕದ ಒಟ್ಟು 1,200 ಸೈನಿಕರು ಈ ಅಭ್ಯಾಸದಲ್ಲಿ ಭಾಗವಹಿಸುತ್ತಿದ್ದಾರೆ. ಸೋಮವಾರ ಬೆಳಗ್ಗೆ 10:30ರ ಸುಮಾರಿಗೆ ಪಥಸಂಚಲನದೊಂದಿಗೆ ಸೇನಾ ಸಮರಾಭ್ಯಾಸ ಆರಂಭಗೊಂಡಿತು. ಈ ಆವೃತ್ತಿಯು ಸೈನ್ಯದ ಶಕ್ತಿಯನ್ನು ಸೂಚಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

600 ಸಿಬ್ಬಂದಿಯನ್ನು ಒಳಗೊಂಡಿರುವ ಭಾರತೀಯ ಸೇನಾ ತುಕಡಿಯನ್ನು ರಜಪೂತ್ ರೆಜಿಮೆಂಟ್‍ನ ಬೆಟಾಲಿಯನ್ ಮತ್ತು ಇತರ ಶಸ್ತ್ರಾಸ್ತ್ರ ಪಡೆಗಳ ಸಿಬ್ಬಂದಿ ಭಾಗವಹಿಸಲಿದ್ದಾರೆ.
ಈ ಸಮಾರಭ್ಯಾಸ ಎರಡೂ ರಾಷ್ಟ್ರಗಳ ಸೇನೆಗಳ ನಡುವೆ ರಕ್ಷಣಾ ಸಹಕಾರ ಹೆಚ್ಚಸಲಿದೆ. ಉಭಯ ದೇಶಗಳ ನಡುವಿನ ಯುದ್ಧತಾಂತ್ರಿಕ ಸಹಭಾಗಿತ್ವ ವೃದ್ಧಿಗೆ ಸಹಕಾರಿಯಾಗಲಿದೆ. ಯುದ್ಧದ ಹೊಸ ತಂತ್ರಗಳನ್ನು ಅರಿಯಲು ನೆರವಾಗುತ್ತದೆ ಎಂಬುದನ್ನು ರಕ್ಷಣಾ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಅಮಿತಾಭ್ ಶರ್ಮಾ ಹೇಳಿದ್ದಾರೆ.
Exercise#YudhAbhyas2024
The 20th edition of the Bilateral Joint Military Exercise#YudhAbhyasbetween#India&#USA, commenced with the opening ceremony at Mahajan Field Firing Ranges,#Rajasthan. The opening ceremony was attended by Brigadier General Thomas Burke, Deputy…pic.twitter.com/TnPIpTzSUi
— ADG PI – INDIAN ARMY (@adgpi)September 9, 2024

“ವಿಶ್ವಸಂಸ್ಥೆಯ ಆದೇಶದ ಅಡಿಯಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳನ್ನು ಕೈಗೊಳ್ಳಲು ಎರಡೂ ಕಡೆಯ ಜಂಟಿ ಮಿಲಿಟರಿ ಸಾಮರ್ಥ್ಯವನ್ನು ಹೆಚ್ಚಿಸುವುದು ಈ ಅಭ್ಯಾಸದ ಗುರಿಯಾಗಿದೆ. ಎರಡೂ ದೇಶಗಳ ಸೈನಿಕರು ಜಂಟಿ ಕಾರ್ಯಾಚರಣೆಗಳನ್ನು ನಡೆಸಲು ತಂತ್ರಗಳನ್ನು ಪರಸ್ಪರ ಹಂಚಿಕೊಳ್ಳಲಿದ್ದಾರೆ. ಇದರಿಂದಾಗಿ ಎರಡು ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಸಂಬಂಧ ಮತ್ತಷ್ಟು ವೃದ್ಧಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಮರಾಭ್ಯಾಸ ಸೆಪ್ಟೆಂಬರ್ 22 ರವರೆಗೆ ಮುಂದುವರಿಯುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜಸ್ಥಾನದಲ್ಲಿ ಭಾರತ ಮತ್ತು ಫ್ರಾನ್ಸ್​ನ ವಾಯುಪಡೆಗಳು 2021ರಲ್ಲಿ ಐದು ದಿನಗಳ ಜಂಟಿ ಸಮರಾಭ್ಯಾಸ ನಡೆಸಿದ್ದವು.
ಕರ್ನಾಟಕಕ್ಕೆ ಗಣೇಶ ಹಬ್ಬದ ಗಿಫ್ಟ್ ನೀಡಿದ ಕೇಂದ್ರ ಸರ್ಕಾರ; ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲು ಸಂಚಾರಕ್ಕೆ ಅಸ್ತು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 15 =
Remember me
