ನವದೆಹಲಿ:ಹೈದರಾಬಾದ್ ಮೂಲದ ಟ್ರಾನ್ಸ್​ಟ್ರಾಯ್ ಇಂಡಿಯಾ ಲಿಮಿಟೆಡ್ ಮತ್ತು ಇದರ ನಿರ್ದೇಶಕರ ವಿರುದ್ಧ -ಠಿ; 7,926 ಕೋಟಿ ಮೊತ್ತದ ಬ್ಯಾಂಕ್ ವಂಚನೆ ಪ್ರಕರಣ ದಾಖಲಾಗಿದೆ. ಇದು ಬ್ಯಾಂಕಿಂಗ್ ವಂಚನೆಯ ದೊಡ್ಡ ಪ್ರಕರಣ ಎಂದು ಸಿಬಿಐ ಹೇಳಿದೆ. ಟ್ರಾನ್ಸ್​ಟ್ರಾಯ್ ಇಂಡಿಯಾ ಸಂಸ್ಥೆ ಮತ್ತು ಅದರ ನಿರ್ದೇಶಕರಿಗೆ ಸಂಬಂಧಿತ ಹೈದರಾಬಾದ್, ಗುಂಟೂರಿನ ಸ್ಥಳಗಳಲ್ಲಿ ಸಿಬಿಐ ಶೋಧ ಕಾರ್ಯ ನಡೆಸಿದ್ದು, ಅನೇಕ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದೆ.
ಈ ಕಂಪನಿಗೆ ಸಾಲ ನೀಡಿ ವಂಚನೆಗೆ ಒಳಗಾಗಿರುವ ಬ್ಯಾಂಕ್​ಗಳು ಕೆನರಾ ಬ್ಯಾಂಕ್ ನೇತೃತ್ವದಲ್ಲಿ ನೀಡಿರುವ ದೂರಿನ ಆಧಾರದ ಮೇಲೆ ಟ್ರಾನ್ಸ್​ಟ್ರಾಯ್ ಇಂಡಿಯಾ ಸಂಸ್ಥೆಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಚೆರುಕುರಿ ಶ್ರೀಧರ್, ಹೆಚ್ಚುವರಿ ನಿರ್ದೇಶಕರಾದ ರಾಯಪತಿ ಸಾಂಬಶಿವ ರಾವ್ ಮತ್ತು ಅಕ್ಕಿನೇನಿ ಸತೀಶ್ ವಿರುದ್ಧ ಎಫ್​ಎಫ್​ಆರ್ ದಾಖಲಾಗಿದೆ. ಸುಳ್ಳು ದಾಖಲೆ, ನಕಲಿ ಲೆಕ್ಕಪತ್ರ ತೋರಿಸಿ ಅನೇಕ ಬ್ಯಾಂಕ್​ಗಳಿಂದ ದೊಡ್ಡ ಮೊತ್ತದ ಸಾಲ ಪಡೆದಿರುವ ಆರೋಪ ಇವರ ಮೇಲಿದೆ ಎಂದು ಸಿಬಿಐ ವಕ್ತಾರ ಆರ್.ಕೆ. ಗೌರ್ ಹೇಳಿದ್ದಾರೆ.
ಇದನ್ನೂ ಓದಿ:ಡಿ. 21ರಂದು ಆಗಸ ನೋಡಲು ಸಜ್ಜಾಗಿ: ಗೋಚರಿಸಲಿದೆ ಈ ಶತಮಾನದ ಕೌತುಕಮಯ ದೃಶ್ಯ
ಲಂಡನ್​ನಲ್ಲಿ ಬಂಧನದಲ್ಲಿರುವ ವಜ್ರೋದ್ಯಮಿ ನೀರವ್ ಮೋದಿ ವಿರುದ್ಧ 6 ಸಾವಿರ ಕೋಟಿ ರೂ. ಮತ್ತು ಈತನ ಸಂಬಂಧಿ ಮೆಹುಲ್ ಚೋಕ್ಸಿ ವಿರುದ್ಧ 7,080.86 ಕೋಟಿ ರೂ. ಮೊತ್ತದ ಬ್ಯಾಂಕ್ ವಂಚನೆಯ ಪ್ರಕರಣ ದಾಖಲಾಗಿರುವುದು ಈವರೆಗಿನ ದೊಡ್ಡ ಮೊತ್ತವಾಗಿತ್ತು ಎಂದು ಸಿಬಿಐ ಹೇಳಿದೆ.

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:18 − eight =
Remember me
