ಇತ್ತೀಚೆಗೆ ದೇಶದಲ್ಲಿ ಸರ್ಕಾರಿ ನೇಮಕಾತಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳು ವ್ಯಾಪಕವಾಗಿ ಹೆಚ್ಚುತ್ತಿದ್ದು, ಅಪಾರ ಕನಸು ಹೊತ್ತು, ನ್ಯಾಯಯುತವಾಗಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಇದರಿಂದ ಭಾರೀ ಅನ್ಯಾಯ ಉಂಟಾಗುತ್ತಿದೆ. ರಾಜ್ಯದಲ್ಲಿಯೂ ಇಂತಹ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಇಂದು (ಜು.24) ಬಿಹಾರ ಸರ್ಕಾರ ವಿಧಾನಸಭೆಯಲ್ಲಿ ಮಸೂದೆಯನ್ನು ಅಂಗೀಕರಿಸಿದೆ.
ಇದನ್ನೂ ಓದಿ:ಕಾಂಗ್ರೆಸ್ ದಲಿತ ವಿರೋಧ ನೀತಿ ಅನುಸರಿಸುತ್ತಿದೆ; ಗೋಪಾಲ ಘಟಕಾಂಬಳೆ ಆರೋಪ
ಬಿಹಾರ ಸಾರ್ವಜನಿಕ ಪರೀಕ್ಷೆಗಳ (PE) (ಅನ್ಯಾಯ ವಿಧಾನಗಳ ತಡೆ) ಮಸೂದೆ 2024 ಅನ್ನು ರಾಜ್ಯ ಸಂಸದೀಯ ವ್ಯವಹಾರಗಳ ಸಚಿವ ವಿಜಯ್ ಕುಮಾರ್ ಚೌಧರಿ ಮಂಡಿಸಿದ್ದು, ಪ್ರತಿಪಕ್ಷಗಳ ನಾಯಕರು ಹೊರಹೋಗುವ ಮಧ್ಯೆಯೂ ಮಸೂದೆ ಬಗ್ಗೆ ಧ್ವನಿ ಎತ್ತಿರುವುದು ಗಮನಾರ್ಹ. ನೀಟ್​ 2024ರ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದದ ಕೇಂದ್ರಬಿಂದುವಾಗಿರುವ ರಾಜ್ಯದಲ್ಲಿ ಪ್ರಶ್ನೆ ಪತ್ರಿಕೆಗಳ ಸೋರಿಕೆ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ದುಷ್ಕೃತ್ಯಗಳನ್ನು ತಡೆಯುವ ಗುರಿಯನ್ನು ಈ ಹೊಸ ಶಾಸನ ಹೊಂದಿದೆ.
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾದ ಅಪರಾಧಿಗಳಿಗೆ ಮೂರರಿಂದ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 10 ಲಕ್ಷ ರೂ.ಗಳ ದಂಡ ಸೇರಿದಂತೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಮಸೂದೆಯಲ್ಲಿ ತಿಳಿಸಲಾಗಿದೆ,(ಏಜೆನ್ಸೀಸ್).
ನಿಮ್ಮ ಕರಿಯರ್​ನಲ್ಲಿ ಇದೊಂದೇ ಬಾಕಿ! ವಿರಾಟ್​ ಕೊಹ್ಲಿಗೆ ವಿಶೇಷ ಆಹ್ವಾನ ಕೊಟ್ಟ ಪಾಕ್​ ಮಾಜಿ ಕ್ರಿಕೆಟಿಗ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + two =
Remember me
