ನವದೆಹಲಿ:ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮಾ ಗಾಂಧಿಜೀಯವರಿಗೆ ಭಾರತದಲ್ಲಿ ಮದ್ಯ ನಿಷೇಧ ಮಾಡಬೇಕು ಎನ್ನುವುದು ಆಶಯವಾಗಿತ್ತು ಎಂದು ಬಿಹಾರದ ಮುಖ್ಯಮಂತ್ರಿ ನಿತೀಶ್​ ಕುಮಾರ್​ ಹೇಳಿದ್ದಾರೆ.
ನಿನ್ನೆ (ಫೆ.16) ದೆಹಲಿಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ನಿತೀಶ್​ ಕುಮಾರ್​ ಮದ್ಯಪಾನದಿಂದಾಗುವ ತೊಂದರೆಗಳ ಕುರಿತಾಗಿ ಮಾತನಾಡಿದ್ದಾರೆ. ಅದರಿಂದಾಗುವ ತೊಂದರೆಗಳನ್ನು ಪರಿಗಣಿಸಿಯೇ ತಮ್ಮ ರಾಜ್ಯದಲ್ಲಿ ಮದ್ಯ ನಿಷೇಧ ಮಾಡಿರುವುದಾಗಿ ತಿಳಿಸಿರುವ ಅವರು ಇಡೀ ದೇಶದಲ್ಲಿಯೇ ಮದ್ಯ ನಿಷೇಧವಾಗಬೇಕು ಎಂದು ಹೇಳಿದ್ದಾರೆ. ಪೂರ್ತಿ ಭಾರತದಲ್ಲಿ ಮದ್ಯ ನಿಷೇಧ ಮಾಡಬೇಕೆನ್ನುವುದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಆಶಯ ಕೂಡ ಆಗಿತ್ತು ಎಂದು ತಿಳಿಸಿದ್ದಾರೆ.
ಈ ಹಿಂದೆಯೇ ನಮ್ಮ ರಾಜ್ಯದಲ್ಲಿ ಮದ್ಯ ನಿಷೇಧ ಮಾಡುವ ಪ್ರಯತ್ನವನ್ನು ಮಾಜಿ ಮುಖ್ಯಮಂತ್ರಿಗಳು ಮಾಡಿದ್ದರು. ಆದರೆ ಅದು ಪೂರ್ಣ ಪ್ರಮಾಣದಲ್ಲಿ ಯಶಸ್ಸು ಕಂಡಿರಲಿಲ್ಲ. ನಾನು ಮದ್ಯ ನಿಷೇಧ ಮಾಡುವುದಕ್ಕೆ 2011ರಿಂದಲೇ ಪ್ರಯತ್ನಿಸಿದ್ದೇನೆ. ಅದು 2016ಕ್ಕೆ ಸಫಲವಾಯಿತು ಎಂದು ನಿತೀಶ್​ ಕುಮಾರ್​ ತಿಳಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − thirteen =
Remember me
