ಪಟನಾ:ದೇಶಾದ್ಯಂತ ಕರೊನಾ ಅಬ್ಬರ ಹೆಚ್ಚಾಗಿದ್ದು, ಬಿಹಾರದ ಮುಖ್ಯ ಕಾರ್ಯದರ್ಶಿ ಅರುಣ್​ ಕುಮಾರ್​ ಸಿಂಗ್​ ಶುಕ್ರವಾರದಂದು ಸೋಂಕಿಗೆ ಬಲಿಯಾಗಿದ್ದಾರೆ.
ಹಿರಿಯ ಐಎಎಸ್​ ಅಧಿಕಾರಿಯಾಗಿದ್ದ ಅರುಣ್​ ಕುಮಾರ್​ ಸಿಂಗ್​ ಕಳೆದ ಕೆಲ ದಿನಗಳ ಹಿಂದೆ ಕರೊನಾ ಸೋಂಕಿಗೆ ತುತ್ತಾಗಿದ್ದರು. ಪಟನಾದ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಆರೋಗ್ಯ ಹೆಚ್ಚು ಹದಗೆಟ್ಟ ಹಿನ್ನೆಲೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಕ್ಯಾಬಿನೆಟ್​ನಲ್ಲಿದ್ದಾಗಲೇ ಮುಖ್ಯಮಂತ್ರಿ ನಿತೀಶ್​ ಕುಮಾರ್​ಗೆ ಈ ವಿಚಾರ ತಿಳಿದಿದ್ದು, ಹಿರಿಯ ಅಧಿಕಾರಿಯ ಸಾವಿಗೆ ಸಂತಾಪ ಸೂಚಿಸಿದ್ದಾರೆ.
ಅರುಣ್​ ಕುಮಾರ್ ಅವರು 1985ರ ಬ್ಯಾಚ್​ನ ಐಎಎಸ್​ ಅಧಿಕಾರಿಯಾಗಿದ್ದರು. 2021ರ ಫೆಬ್ರವರಿಯಲ್ಲಿ ಅವರನ್ನು ರಾಜ್ಯ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು.
ಅರುಣ್​ ಕುಮಾರ್ ಅವರ ಅಂತ್ಯ ಸಂಸ್ಕಾರವನ್ನು ರಾಜ್ಯ ಸರ್ಕಾರದ ಸಕಲ ಗೌರವದೊಂದಿಗೆ ನಡೆಸುವುದಾಗಿ ತಿಳಿಸಲಾಗಿದೆ. (ಏಜೆನ್ಸೀಸ್​)
ಕರೊನಾ ಗೆದ್ದ ರಾಯಚೂರಿನ 97 ವರ್ಷದ ವೃದ್ದೆ! ಆತ್ಮಸ್ಥೈರ್ಯ ಮುಖ್ಯವೆಂದ ವೈದ್ಯರು

ಆ್ಯಂಕರ್ ಅರುಣ ಬಡಿಗೇರ ತಂದೆ-ತಾಯಿಯನ್ನು ಬಲಿ ತೆಗೆದುಕೊಂಡ ಕರೊನಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + eighteen =
Remember me
