ಬಿಹಾರ:ಮಕ್ಕಳಿಬ್ಬರು ಪ್ರೀತಿಸುತ್ತಿರುವ ವಿಷಯ ತಿಳಿದ ದಂಪತಿ ತಮ್ಮ ಮಕ್ಕಳನ್ನು ಅಮಾನುಷವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಬಿಹಾರದ ಹಾಜಿಪುರದಲ್ಲಿ ನಡೆದಿದೆ. 16 ಮತ್ತು 18 ವರ್ಷದ ಹೆಣ್ಣು ಮಕ್ಕಳಿಬ್ಬರು ಮರ್ಯಾದಾ ಹತ್ಯೆಗೊಳಗಾದವರು.
ಹೆಣ್ಣು ಮಕ್ಕಳಿಬ್ಬರು ಮನೆಯಲ್ಲಿ ಮಲಗಿದ್ದಾಗ ಹತ್ಯೆ ಮಾಡಿರುವದಾಗಿ ತಾಯಿ ರಿಂಕು ದೇವಿ ಒಪ್ಪಿಕೊಂಡಿದ್ದಾರೆ. ಮಕ್ಕಳಿಬ್ಬರ ಹತ್ಯೆಯಲ್ಲಿ ಭಾಗಿಯಾಗಿದ್ದ ತಂದೆ ನರೇಶ್ ಬೈತಾ ತಲಮರೆಸಿಕೊಂಡಿದ್ದು, ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಇದನ್ನೂ ಓದಿ:19 ವರ್ಷದ ಬಿ.ಟೆಕ್ ವಿದ್ಯಾರ್ಥಿನಿಗೆ ಕಾಲೇಜು ಕೊಠಡಿಯಲ್ಲೇ ಗರ್ಭಪಾತ!
ಮಕ್ಕಳಿಬ್ಬರು ಬೇರೆ ಬೇರೆ ಜಾತಿಯ ಯುವಕರೊಂದಿಗೆ ಸಂಬಂಧ ಹೊಂದಿದ್ದರು. ಆಗಾಗ ಮನೆಯಲ್ಲಿ ಹೇಳದೆ ಯುವಕರೊಂದಿಗೆ ಸುತ್ತಾಡಲು ಹೋಗುತ್ತಿದ್ದರು. ಇದರಿಂದ ಕೋಪಗೊಂಡು ಮಕ್ಕಳನ್ನು ಹತ್ಯೆ ಮಾಡಿರುವುದಾಗಿ ಆರೋಪಿ ತಾಯಿ ರಿಂಕು ದೇಪಿ ಪ್ರಾಥಮಿಕ ತನಿಖೆಯ ವೇಳೆ ಪೊಲೀಸರಲ್ಲಿ ಹೇಳಿಕೊಂಡಿದ್ದಾಳೆ.
ತನಿಖೆಯ ವೇಳೆ ತಂದೆ-ತಾಯಿ ಇಬ್ಬರೂ ಕೊಲೆಯಲ್ಲಿ ಭಾಗಿಯಾಗಿರುವುದು ಗೊತ್ತಾಗಿದೆ. ಮಕ್ಕಳಿಬ್ಬರನ್ನು ಪತಿಯೇ ಹತ್ಯೆ ಮಾಡಿದ್ದು ಎಂದು ತಾಯಿ ಆರಂಭದಲ್ಲಿ ಹೇಳಿಕೊಂಡಿದ್ದಳು. ವಿವಿಧ ಆಯಾಮಗಳಲ್ಲಿ ಪ್ರಶ್ನಿಸಿದಾಗ ಇಬ್ಬರೂ ಸೇರಿ ಕೊಲೆ ಮಾಡಿರುವುದನ್ನು ರಿಂಕು ದೇವಿ ಒಪ್ಪಿಕೊಂಡಿದ್ದಾರೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಓಂ ಪ್ರಕಾಶ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಇದನ್ನೂ ಓದಿ:ಸಿರಿವಂತ ಅವಿವಾಹಿತನ ಸೋಗು ಹಾಕಿ ಮ್ಯಾಟ್ರಿಮೋನಿ ತಾಣಗಳಲ್ಲಿ ಯುವತಿಯರಿಗೆ ವಂಚನೆ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + six =
Remember me
