ನವದೆಹಲಿ:ಬಿಹಾರ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವ ಕಸರತ್ತು ನಡೆಯುತ್ತಿದೆ. ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನವದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಶುರುವಾಗಿದೆ. ಏತನ್ಮಧ್ಯೆ, ಮಿತ್ರ ಪಕ್ಷ ಲೋಕಜನಶಕ್ತಿ ಪಾರ್ಟಿ (ಎಲ್​ಜೆಪಿ) ಬಿಹಾರದ ಮಟ್ಟಿಗೆ ಮೈತ್ರಿಕೂಟದಿಂದ ಹೊರ ನಡೆದಿರುವುದು ಮೈತ್ರಿಕೂಟಕ್ಕೆ ಸವಾಲಾಗಿ ಪರಿಣಮಿಸಿದೆ.
ಚುನಾವಣಾ ಸಮಿತಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್ ನಡ್ಡಾ ಮತ್ತು ಇತರೆ ಹಿರಿಯ ಪದಾಧಿಕಾರಿಗಳು ಉಪಸ್ಥಿತರಿದ್ದಾರೆ. ಸಭೆ ಮುಂದುವರಿದಿದ್ದು, ತಡರಾತ್ರಿವರೆಗೂ ನಡೆಯಬಹುದು ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ:ಎನ್​ಡಿಎಯಿಂದ ಎಲ್​ಜೆಪಿ ಔಟ್: ನಿತೀಶ್ ವಿರುದ್ಧ ತೊಡೆ ತಟ್ಟಿದ ಪಾಸ್ವಾನ್​
ಇದಕ್ಕೂ ಮೊದಲು ಇಂದು ಬೆಳಗ್ಗೆ ಜೆಡಿಯು ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿ ಪ್ರಮುಖ ನಾಯಕರು ಸುದೀರ್ಘ ಸಭೆ ನಡೆಸಿದ್ದರು. ಬಳಿಕ, ನಿತೀಶ್ ಕುಮಾರ್ ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದ್ದರು. (ಏಜೆನ್ಸೀಸ್)
ಬಿಹಾರ ಚುನಾವಣೆ | ಎಲ್​ಜೆಪಿ ಇಲ್ಲದ ಎನ್​ಡಿಎಯಲ್ಲಿ 50:50 ಸೀಟು ಹಂಚಿಕೆ ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 8 =
Remember me
