ಪಟನಾ:ಆಡಳಿತಾರೂಢ ಜೆಡಿಯು ಮತ್ತು ಬಿಜೆಪಿ, ಬಿಹಾರ ವಿಧಾನಸಭೆ ಚುನಾವಣೆಗೆ ಸೀಟು ಹಂಚಿಕೆ ಅಂತಿಮಗೊಳಿಸಿವೆ. ಶೀಘ್ರದಲ್ಲೇ ಈ ಬಗ್ಗೆ ಅಧಿಕೃತ ಘೋಷಣೆಯೂ ಆಗಲಿದೆ. ಎನ್​ಡಿಎ ಮೈತ್ರಿಕೂಟದಿಂದ ಲೋಕಜನಶಕ್ತಿ ಪಕ್ಷ (ಎಲ್​ಜೆಪಿ) ಬಿಹಾರದ ಮಟ್ಟಿಗೆ ಹೊರ ಹೋಗಿದ್ದು, ಒಂಟಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದೆ.
ಹೀಗಾಗಿ, 243 ವಿಧಾನಸಭಾ ಕ್ಷೇತ್ರಗಳಲ್ಲಿ 50-50 ಲೆಕ್ಕಾಚಾರದಂತೆ ಜೆಡಿಯುಗೆ 122 ಹಾಗೂ ಬಿಜೆಪಿಗೆ 121 ಸ್ಥಾನಗಳು ಸಿಗಲಿವೆ. ಜಿತನ್ ರಾಮ್ ಮಾಂಜಿಯವರ ಹಿಂದುಸ್ತಾನಿ ಅವಾಮ್ ಮೋರ್ಚಾಗೆ ಜೆಡಿಯು ಕೋಟಾದಿಂದ ಕ್ಷೇತ್ರಗಳು ಸಿಗಲಿವೆ. ಮತ್ತೊಂದು ಮಿತ್ರ ಪಕ್ಷ ಎಲ್​ಜೆಪಿಗೆ ಬಿಜೆಪಿ ಕೆಲ ಕ್ಷೇತ್ರಗಳನ್ನು ಬಿಟ್ಟುಕೊಡಲಿದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ:ಕೇಂದ್ರ ಸಚಿವ ರಾಮ್​ ವಿಲಾಸ್ ಪಾಸ್ವಾನ್​ ಆರೋಗ್ಯ ತುಸು ಗಂಭೀರ; ಸಭೆ ಮುಂದೂಡಿಕೆ
ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವು ನಾಯಕರು ಕೇಂದ್ರ ಚುನಾವಣಾ ಸಮಿತಿ ಜತೆ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಭಾನುವಾರ ಸಂಜೆ ಸಭೆ ನಡೆಸಿದ್ದರು. ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ, ಗೃಹ ಸಚಿವ ಅಮಿತ್ ಷಾ, ಬಿಹಾರ ಉಪಮುಖ್ಯಮಂತ್ರಿ ಸುಶೀಲ್ ಮೋದಿ, ಗೃಹ ಇಲಾಖೆ ರಾಜ್ಯ ಸಚಿವ ನಿತ್ಯಾನಂದ್ ರೈ ಮತ್ತು ಬಿಹಾರದ ಉಸ್ತುವಾರಿ ಭೂಪೇಂದರ್ ಯಾದವ್ ಸಭೆಯಲ್ಲಿ ಇದ್ದರು ಎಂದು ಪಕ್ಷದ ಮೂಲಗಳು ತಿಳಿಸಿವೆ.
ಎನ್​ಡಿಎಯಿಂದ ಎಲ್​ಜೆಪಿ ಔಟ್: ನಿತೀಶ್ ವಿರುದ್ಧ ತೊಡೆ ತಟ್ಟಿದ ಪಾಸ್ವಾನ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 10 =
Remember me
