ಪಾಟ್ನಾ:ಅಪ್ರಾಪ್ತ ವಯಸ್ಸಿನ ಬಾಲಕಿಯೊಂದಿಗೆ ಶಿಕ್ಷಕನೊಬ್ಬ ಸರಸದ ವೇಳೆ ಸಿಕ್ಕಿ ಬಿದ್ದಿದ್ದು, ಇಬ್ಬರನ್ನು ವಿವಸ್ತ್ರಗೊಳಿಸಿ ಥಳಿಸಿರುವ ಘಟನೆ ಬಿಹಾರದ ಪಾಟ್ನಾ ಬಳಿಯ ಬೇಗುಸರಾಯ್ ಎಂಬಲ್ಲಿ ನಡೆದಿದೆ.ಇದನ್ನೂ ಓದಿ:ಮುತ್ತು ತಂದ ಆಪತ್ತು: ಪತಿಯ ನಾಲಿಗೆಯನ್ನೇ ಕಚ್ಚಿ ಗಾಯಗೊಳಿಸಿದ ಹೆಂಡತಿಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಮೂವರು ವ್ಯಕ್ತಿಗಳು ಅಪ್ರಾಪ್ತ ವಯಸ್ಕ ಬಾಲಕಿ ಮತ್ತು ಪುರುಷನ ಮೇಲೆ ಹಲ್ಲೆ ನಡೆಸಿ ವಿವಸ್ತ್ರಗೊಳಿಸುತ್ತಿರುವುದನ್ನು ದೃಶ್ಯದಲ್ಲಿ ತೋರಿಸಲಾಗಿದೆ. ವ್ಯಕ್ತಿಯನ್ನು ಸಂಗೀತ ಶಿಕ್ಷಕ(40) ಎಂದು ಗುರುತಿಸಲಾಗಿದೆ.ಸಂತ್ರಸ್ತ ಬಾಲಕಿ ನೀಡಿದ ಹೇಳಿಕೆ ಆಧರಿಸಿ ಪೊಲೀಸರು ಸಂಗೀತ ಶಿಕ್ಷಕನನ್ನು ಬಂಧಿಸಿದ್ದು, ಪೋಕ್ಸೊ ಕಾಯ್ದೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯಿದೆ, ಮಾಹಿತಿ ತಂತ್ರಜ್ಞಾನ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇನ್ನು, ಅಪ್ರಾಪ್ತ ವಯಸ್ಕ ಮತ್ತು ಆರೋಪಿಗಳ ಮೇಲೆ ಹಲ್ಲೆ ನಡೆಸಿದ ಮೂವರು ವ್ಯಕ್ತಿಗಳನ್ನು ಬಂಧಿಸಲು ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಪೊಲೀಸರು ವೀಡಿಯೊವನ್ನು ಪರಿಶೀಲಿಸುತ್ತಿದ್ದು, ಪ್ರಕರಣದ ತನಿಖೆಗಾಗಿ ಹಿರಿಯ ಮಹಿಳಾ ಪೊಲೀಸ್ ಅಧಿಕಾರಿಯ ನೇತೃತ್ವದಲ್ಲಿ ತಂಡವನ್ನು ರಚಿಸಲಾಗಿದೆ. ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆಯನ್ನು ಸಹ ನಡೆಸಲಾಗುತ್ತಿದೆ. ಆಕೆಯ ಹೇಳಿಕೆಯನ್ನು ಸಹ ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:8 − three =
Remember me
