ದರ್ಭಂಗಾ (ಬಿಹಾರ):ದರ್ಭಂಗಾ ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳ ಪರವಾಗಿ ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ (ಸಿಟಿಇಟಿ)-2024 ಬರೆಯುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ 12 ಜನರನ್ನು ಬಿಹಾರ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಇದನ್ನೂ ಓದಿ:ಕಾಲೇಜು ಯುವತಿಯರಿಗೆ ಮರ್ಮಾಂಗ ತೋರಿಸಿ ಪರಾರಿಯಾಗಿದ್ದವನ ಹಡೆಮುರಿ ಕಟ್ಟಿದ ಪೊಲೀಸರು
ಲಹೇರಿಯಾಸರಾಯ್​ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧ ಕೇಂದ್ರಗಳಿಂದ ಒಂಬತ್ತು ಮಂದಿಯನ್ನು ಬಂಧಿಸಲಾಗಿದ್ದು, ಇಬ್ಬರನ್ನು ಸಾದರ್ ಪೊಲೀಸ್ ಠಾಣೆ ವ್ಯಾಪ್ತಿಯ ಕೇಂದ್ರದಿಂದ ಬಂಧಿಸಲಾಗಿದೆ. ಹಾಗೂ ಬಹದ್ದೂರ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕೇಂದ್ರದಿಂದ ಒಬ್ಬರನ್ನು ಬಂಧಿಸಲಾಗಿದೆ ಎಂದು ದರ್ಭಂಗಾ ಪೊಲೀಸ್​ ವರಿಷ್ಠಾಧಿಕಾರಿ ಜಗುನಾಥ ರೆಡ್ಡಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳ ಬಯೋಮೆಟ್ರಿಕ್ ಬೆರಳಚ್ಚನ್ನು ಸ್ಕ್ಯಾನ್ ಮಾಡಿದ ಸಂದರ್ಭ, ನಕಲಿ ಅಭ್ಯರ್ಥಿಗಳು ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪರೀಕ್ಷಾ ಮೇಲ್ವಿಚಾರಕರು ನೀಡಿದ ನೀಡಿದ ದೂರಿನ ಆಧಾರದ ಮೇಲೆ ಆರೋಪಿಗಳ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ. ಬಂಧಿತರು ಯಾವುದೇ ಅಂತರರಾಜ್ಯ ವಂಚನೆ ಸಿಂಡಿಕೇಟ್‌ಗೆ ಸಂಪರ್ಕ ಹೊಂದಿದ್ದಾರೆಯೇ ಎಂಬ ಬಗ್ಗೆಯೂ ಅವರು ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

ಕಾಶ್ಮೀರದಲ್ಲಿ ಸೇನಾ ವಾಹನದ ಮೇಲೆ ಉಗ್ರರ ದಾಳಿ; ನಾಲ್ವರು ಯೋಧರು ಹುತಾತ್ಮ, 6 ಮಂದಿಗೆ ಗಾಯ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + one =
Remember me
