ಪಟನಾ:ದೂರು ನೀಡಲು ಬಂದ ಶಿಕ್ಷಕನಿಗೆ ಪೊಲೀಸ್​ ಅಧಿಕಾರಿಯೊಬ್ಬರು ಬೆದರಿಕೆ ಹಾಕಿರುವ ಆತಂಕಕಾರಿ ಘಟನೆ ಬಿಹಾರ ರಾಜಧಾನಿ ಪಟನಾದ ಜಮುಯಿ ಪೊಲೀಸ್​ ಠಾಣೆಯಲ್ಲಿ ನಡೆದಿದೆ.
ಒಂದು ಸೆಕೆಂಡ್​ನಲ್ಲಿ ನಿನ್ನನ್ನು ಭಯೋತ್ಪಾದಕ ಎಂದು ಘೋಷಿಸುತ್ತೇವೆ ಎಂದು ಪೊಲೀಸ್​ ಅಧಿಕಾರಿ ಶಿಕ್ಷಕನಿಗೆ ಬೆದರಿಕೆ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.
ಈ ಘಟನೆ ಎರಡ್ಮೂರು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೌಟುಂಬಿಕ ವಿವಾದವನ್ನು ಇತ್ಯರ್ಥ ಪಡಿಸಿಕೊಳ್ಳಲು ಶಿಕ್ಷಕ ಸೇರಿದಂತೆ ಆತನ ಇಡೀ ಕುಟುಂಬದ ಸದಸ್ಯರು ಪೊಲೀಸ್​ ಠಾಣೆಗೆ ಹೋಗಿದ್ದರು. ಈ ವೇಳೆ ರಾಜೇಶ್​ ಶರಣ್​ ಹೆಸರಿನ ಪೊಲೀಸ್​ ಅಧಿಕಾರಿ ಮತ್ತು ಮಫ್ತಿಯಲ್ಲಿದ್ದ ಇತರ ಪೊಲೀಸ್​ ಸಿಬ್ಬಂದಿ ಶಿಕ್ಷಕನ ಸುತ್ತ ಕುಳಿತಿದ್ದರು. ಈ ವೇಳೆ ತಾಳ್ಮೆ ಕಳೆದುಕೊಂಡು ದಿಢೀರನೇ ತಾನು ಕೂತಿದ್ದ ಕುರ್ಚಿಯಿಂದ ಎದ್ದ ರಾಜೇಶ್​ ಶರಣ್​, ಶಿಕ್ಷಕನಿಗೆ ಬೆರಳು ತೋರಿಸಿ ಬೆದರಿಕೆ ಹಾಕಿದರು.
ಇದನ್ನೂ ಓದಿ:ಚಿತ್ತಾಪುರ ತಹಸೀಲ್ದಾರ್ ಕಚೇರಿಯಲ್ಲಿ ಗುಂಡು ಹಾರಿಸಿಕೊಂಡು ಪ್ರಾಣ ಬಿಟ್ಟ ಪೊಲೀಸ್​ ಕಾನ್ಸ್​ಟೆಬಲ್​
ಜನರನ್ನು ಭಯೋತ್ಪಾದಕರು ಎಂದು ಘೋಷಿಸುವುದು ನಮ್ಮ ಕೆಲಸ. ಒಂದೇ ಸೆಕೆಂಡ್​ನಲ್ಲಿ ನಿನ್ನನ್ನು ಭಯೋತ್ಪಾದಕ ಎಂದು ಘೋಷಣೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿರುವುದು ವಿಡಿಯೋದಲ್ಲಿ. ಇಷ್ಟಾದರೂ ಅಲ್ಲಿದ್ದ ಜನರು ಪ್ರತಿರೋಧ ತೋರದೇ ಸುಮ್ಮನಿದ್ದರು. ಇದೀಗ ವಿಡಿಯೋ ವೈರಲ್​ ಆಗಿದ್ದು, ನೆಟ್ಟಿಗರು ಪೊಲೀಸ್​ ಅಧಿಕಾರಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ ಮತ್ತು ಕಠಿಣ ಕ್ರಮಕ್ಕೆ ಒತ್ತಾಯ ಮಾಡಿದ್ದಾರೆ.(ಏಜೆನ್ಸೀಸ್​)
ವಿಡಿಯೋ ಕೃಪೆ: ಎನ್​ಡಿಟಿವಿ ಟ್ವಿಟರ್​
#Watch| "तुम पर काल मंडरा रहा": बिहार के पुलिसवाले का टीचर को धमकी देने का VIDEO वायरलhttps://t.co/H6sTFrXNxOpic.twitter.com/oL9TyER4w6
— NDTV India (@ndtvindia)May 3, 2023

ಈಗ ರೀಲ್​​ಗಳನ್ನು ಕಸ್ಟ್​​ಮೈಸ್​ ಮಾಡಬಹುದು…! ಏನಿದು ಹೊಸ ಫೇಸ್​ಬುಕ್​ ಆಯ್ಕೆ?

Bajrang Dal Ban: ಕೆ. ಸುಧಾಕರ್ ನೇತೃತ್ವದಲ್ಲಿ ಬಜರಂಗದಳ, ಹಿಂದೂಪರ ಸಂಘಟನೆಗಳ ಪ್ರತಿಭಟನೆ!

ಗುರಿ ಇರಲಿ… ರಾಜ್ಯ ಚುನಾವಣೆಯನ್ನು ಮಹಾಭಾರತಕ್ಕೆ ಹೋಲಿಸಿದ ಪ್ರಿಯಾಂಕಾ ಗಾಂಧಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + nineteen =
Remember me
