ಪಾಟ್ನಾ:ಬಿಹಾರದಲ್ಲಿ ಸೇತುವೆ ಕುಸಿತದ ಸರಣಿ ಮುಂದುವರಿದಿದೆ. ಕಳೆದ 15 ದಿನಗಳಲ್ಲಿ ಕನಿಷ್ಠ 10 ಸೇತುವೆಗಳು ನೀರು ಪಾಲಾಗಿದ್ದು, ಈ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಇಲಾಖೆಯ 16 ಎಂಜಿನಿಯರ್‌ಗಳನ್ನು ಅಮಾನತುಗೊಳಿಸಲಾಗಿದೆ. ಈ ಕುರಿತು ಜಲಸಂಪನ್ಮೂಲ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ:ಕಾಂಗ್ರೆಸ್​ ಸೇರ್ಪಡೆ ಬಳಿಕ ಸಂಸದ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬಿಆರ್​ಎಸ್ ಪಕ್ಷದ ಕೇಶವ್ ರಾವ್ !
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಬಿಹಾರ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಚೈತನ್ಯ ಪ್ರಸಾದ್, ರಾಜ್ಯ ಸರ್ಕಾರವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಸೇತುವೆ ನಿರ್ಮಾಣದ ಹೊಣೆ ಹೊತ್ತಿರುವ ಗುತ್ತಿಗೆದಾರರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಗುರುವಾರ (ಜುಲೈ 4) ರಂದು ಸರನ್‌ ಜಿಲ್ಲೆಯಲ್ಲಿ ನಿರ್ಮಿಸಲಾಗಿದ್ದ ಸೇತುವೆಯೊಂದು ಕುಸಿದು ಬಿದ್ದಿದೆ. ಇದು 24 ಗಂಟೆಯಲ್ಲಿ ಜಿಲ್ಲೆಯೊಂದರಲ್ಲಿ ಕುಸಿದು ಬಿದ್ದ 3ನೇ ಸೇತುವೆ ಆಗಿದೆ. ಅಲ್ಲದೇ ರಾಜ್ಯದಲ್ಲಿ ಕುಸಿದ 10ನೇ ಸೇತುವೆಯೂ ಆಗಿದೆ. ಈವರೆಗೆ ಸಿವಾನ್, ಸರನ್, ಮಧುಬನಿ, ಅರಾರಿಯಾ, ಪೂರ್ವ ಚಂಪಾರಣ್ ಮತ್ತು ಕಿಶನ್‌ಗಂಜ್ ಜಿಲ್ಲೆಗಳಲ್ಲಿ ಒಟ್ಟು 10 ಸೇತುವೆಗಳು ಕುಸಿದಿವೆ.
“ಬುಧವಾರ ನಡೆದ ಪರಿಶೀಲನಾ ಸಭೆಯ ನಂತರ ಮಾತನಾಡಿದ ಸಿಎಂ ನಿತೀಶ್ ಕುಮಾರ್, ಎಲ್ಲಾ ಹಳೆಯ ಸೇತುವೆಗಳ ಸಮೀಕ್ಷೆಯನ್ನು ನಡೆಸುವಂತೆ ಮತ್ತು ತಕ್ಷಣದ ದುರಸ್ತಿ ಅಗತ್ಯವಿರುವ ಸೇತುವೆಗಳನ್ನು ಗುರುತಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ” ಎಂದು ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಸುದ್ದಿಗಾರರಿಗೆ ತಿಳಿಸಿದರು, ತನಿಖೆ ನಡೆಯುತ್ತಿದೆ. ರಾಷ್ಟ್ರೀಯ ಜನತಾ ದಳದ ನಾಯಕ ತೇಜಸ್ವಿ ಯಾದವ್, ಜೂನ್ 18 ರಿಂದ ಬಿಹಾರದಲ್ಲಿ 12 ಸೇತುವೆಗಳು ಕುಸಿದಿವೆ ಎಂದು ಆರೋಪಿಸಿದ್ದಾರೆ.
ರಾಜಸ್ಥಾನ: ಪ್ರೇಮ ವಿವಾಹಕ್ಕೆ ವಿರೋಧ, ಕುಟುಂಬಸ್ಥರಿಂದ ಯುವತಿಯ ಬರ್ಬರ ಹತ್ಯೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + eighteen =
Remember me
