ಪೆರಿಂಥಲಮನ್ನ:ಕೇರಳದ ಮಲ್ಲಪುರಂ ಜಿಲ್ಲೆಯ ಪೆರಿಂಥಲಮನ್ನದಲ್ಲಿರುವ ಎಂಇಎಸ್​ ಅಕಾಡೆಮಿ ಆಫ್​ ಮೆಡಿಕಲ್​ ಸೈನ್ಸ್​ ಕಾಲೇಜಿನ ಅಂತಿಮ ವರ್ಷದ ಎಂಬಿಬಿಎಸ್​ ವಿದ್ಯಾರ್ಥಿನಿ ಭೀಕರ ರಸ್ತೆ ಅಪಘಾತದಲ್ಲಿ ದುರಂತ ಸಾವಿಗೀಡಾಗಿದ್ದಾಳೆ. ಈ ವರ್ಷ ಎಂಬಿಬಿಎಸ್​ ಮುಗಿಸಿ ಜನರ ಸೇವೆ ಸಜ್ಜಾಗುವ ಆಸೆಯಲ್ಲಿದ್ದ ವಿದ್ಯಾರ್ಥಿನಿ ಅಕಾಲಿಕ ಮರಣ ಹೊಂದಿದ್ದಾಳೆ.
ಮೃತಳನ್ನು ಅಲ್ಫೋನ್ಸಾ (22) ಎಂದು ಗುರುತಿಸಲಾಗಿದೆ. ಸೋಮವಾರ ಬೆಳಗ್ಗೆ 6.50ರ ಸುಮಾರಿಗೆ ಥಿರುಕಾಡ್​ನಲ್ಲಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಬೈಕ್​ ಅಪಘಾತದಲ್ಲಿ ಮೃತಪಟ್ಟಳು. ಆಕೆಯ ಜತೆಯಿದ್ದ ತ್ರಿಸ್ಸೂರ್​ ಮೂಲದ ಸಹಪ್ರಯಾಣಿಕ ಅಶ್ವಿನ್​ (22) ಗಂಭೀರವಾಗಿ ಗಾಯಗೊಂಡಿದ್ದ ಸ್ಥಳೀಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ​
ಇದನ್ನೂ ಓದಿ:ನಿಧಿಗಾಗಿ ಅಮಾವಾಸ್ಯೆಯಂದು ಬಾಣಂತಿ ಹತ್ಯೆ?! ಮನೆಯಿಂದ ಅನತಿ ದೂರದಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ
ಕಾಲೇಜಿಗೆ ತೆರಳುತ್ತಿದ್ದಾಗ ಅಲ್ಫೋನ್ಸಾ ಹಾಗೂ ಅಶ್ವಿನ್ ಪ್ರಯಾಣಿಸುತ್ತಿದ್ದ ಬೈಕ್ ಮತ್ತೊಂದು ಬೈಕ್‌ಗೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಪೆರಿಂಥಲಮನ್ನ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಅಲ್ಫೋನ್ಸಾಳ ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ಮಗಳನ್ನು ಕಳೆದುಕೊಂಡ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.
ಘಟನೆ ಸಂಬಂಧ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.(ಏಜೆನ್ಸೀಸ್​)
ಹಿಂದುತ್ವದ ಬಗ್ಗೆ ಅವಹೇಳನ; ನಟ ಚೇತನ್ ಬಂಧನ

ಮೊಬೈಲ್​ನಲ್ಲಿ ಮಾತನಾಡ್ತಿದ್ದ ಮಹಿಳೆಗೆ ಮುತ್ತಿಟ್ಟು ಪರಾರಿಯಾಗಿದ್ದ ನಟೋರಿಯಸ್​ ಸೀರಿಯಲ್​ ಕಿಸ್ಸರ್ ಅಂದರ್​!

ಇದು ನನ್ನ ಕೊನೆಯ ವಿವಾಹ..92ನೇ ವಯಸ್ಸಿನಲ್ಲಿ 5ನೇ ಮದುವೆಯಾದ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:6 + 3 =
Remember me
