ನವದೆಹಲಿ:ಬಿಲ್ಕಿಸ್​ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣ ಹಾಗೂ ಆಕೆಯ ಕುಟುಂಬದ 14 ಸದಸ್ಯರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಆರೋಪಿಗಳಿಗೆ ಕ್ಷಮಾದಾನ ನೀಡಿರುವ ಕುರಿತು ಮೂಲ ದಾಖಲಾತಿಗಳನ್ನು ಅಕ್ಟೋಬರ್​ 16ರ ಒಳಗಾಗಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್​ ಗುಜರಾತ್​ ಹಾಗೂ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.
ಪ್ರಕರಣದ 11 ಆರೋಪಿಗಳಿಗೆ ಕ್ಷಮಾದಾನ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಹಾಗೂ ಉಜ್ಜಲ್ ಭುಯಾನ್ ಅವರಿದ್ದ ದ್ವಿಸದಸ್ಯ ಪೀಠವು ವಾದ-ಪ್ರತಿವಾದವನ್ನು ಸುದೀರ್ಘವಾಗಿ ಆಲಿಸಿದ ಬಳಿಕ ಆದೇಶವನ್ನು ಕಾಯ್ದಿರಿಸಿದೆ.
ಆರೋಪಿಗಳನ್ನು ಬಿಡುಗಡೆಗೊಳಿಸುವ ಮುನ್ನ ಅಪರಾಧದ ಸ್ವರೂಪವನ್ನು, ಅದು ಸಮಾಜದ ಮೇಲೆ ಬೀರುವ ಪರಿಣಾಮವನ್ನು ಸರ್ಕಾರ ಪರಿಗಣಿಸಬೇಕಿತ್ತು. ಅಪರಾಧಿಗಳು 14 ಮಂದಿಯನ್ನು ಹತ್ಯೆ ಮಾಡಿದ್ದಲ್ಲದೆ ಬಿಲ್ಕಿಸ್‌ ಅವರ ಮೂರು ವರ್ಷದ ಪುತ್ರಿಯ ತಲೆಯನ್ನು ಬಂಡೆಗೆ ಅಪ್ಪಳಿಸಿ ಸಾಯಿಸಿದ್ದರು. ಆಗ ಬಿಲ್ಕಿಸ್‌ ವಯಸ್ಸು 21 ಆಗಿತ್ತು ಹಾಗೂ ಆಕೆ ಐದು ತಿಂಗಳ ಗರ್ಭಿಣಿಯಾಗಿದ್ದರು.
ಈ ಅಪರಾಧಗಳು ಘನಘೋರ. ಒಂದು ನಿರ್ದಿಷ್ಟ ಅವಧಿಯ ತನಕ ಶಿಕ್ಷೆ ಅನುಭವಿಸಿದ ನಂತರ ಶಿಕ್ಷೆ ಕಡಿತಗೊಳಿಸಲು ಕೋರಲು ಅಪರಾಧಿಗಳಿಗೆ ಹಕ್ಕಿದೆ. ಆದರೆ, ಇಲ್ಲಿ ಸರ್ಕಾರ ಕಡೆಗಣಿಸಿದ ಅಂಶಗಳು ಮುಖ್ಯವಾಗಿವೆ. ಅಪರಾಧಿಗಳು ಜೈಲಿನಲ್ಲಿರುವಾಗಲೂ ಅವರಿಗೆ ಪೆರೋಲ್‌ ಮೇಲೆ ಬಿಡುಗಡೆ ದೊರೆಯುತ್ತಿತ್ತು. ಆದರೆ, ಕ್ಷಮಾದಾನಕ್ಕೆ ಅರ್ಹವಾದ ಪ್ರಕರಣ ಇದಲ್ಲ, ಅವರನ್ನು ವಾಪಸ್‌ ಜೈಲಿಗೆ ಕಳಿಸಬೇಕೆಂದು ಬಲ್ಕಿಸ್ ಬಾನೊ ಪರ ವಕೀಲರು ವಾದ ಮಂಡಿಸಿದ್ದಾರೆ.
ಇದನ್ನೂ ಓದಿ:VIDEO| ಭಾರತ-ಅಫ್ಘಾನಿಸ್ತಾನ ಪಂದ್ಯದ ವೇಳೆ ಅಭಿಮಾನಿಗಳ ನಡುವೆ ಹೊಡೆದಾಟ; ವಿಭಿನ್ನ ಅನುಭವ ಎಂದ ನೆಟ್ಟಿಗರು
2002ರಲ್ಲಿ ಗೋದ್ರಾ ರೈಲು ದುರಂತದ ಬಳಿಕ ಸಂಭವಿಸಿದ ಕೋಮು ಗಲಭೆಯಲ್ಲಿ ಬಿಲ್ಕಿಸ್​ ಬಾನೊ ಮೇಲೆ ಪ್ರಕರಣದ 11 ಆರೋಪಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಆಕೆಯ ಕುಟುಂಬದ 14 ಸದಸ್ಯರನ್ನು ಹತ್ಯೆಗೈದು ಶಿಕ್ಷೆಗೆ ಗುರಿಯಾಗಿದ್ದರು. ಕಳೆದ ವರ್ಷ ಸ್ವಾತಂತ್ರ್ಯ ದಿನೋತ್ಸವದ ಪ್ರಯುಕ್ತ ಕ್ಷಮಾದಾನದ ಆಧಾರದ ಮೇಲೆ ಪ್ರಕರಣದ 11 ಆರೋಪಿಗಳನ್ನು ಬಿಡುಗಡೆ ಮಾಡಲಾಗಿತ್ತು.
ಬಿಲ್ಕಿಸ್​ ಬಾನೊ ಪ್ರಕರಣದ 11 ಆರೋಪಿಗಳ ಬಿಡುಗಡೆಯನ್ನು ಪ್ರಶ್ನಿಸಿ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ, ಸಿಪಿಐ (ಎಂ) ನಾಯಕಿ ಸುಭಾಷಿಣಿ ಅಲಿ, ಪತ್ರಕರ್ತೆ ರೇವತಿ ಲಾಲ್, ಲಖನೌ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ರೂಪ್ ರೇಖಾ ವರ್ಮಾ ಸೇರಿದಂತೆ ಹಲವರು ಸುಪ್ರೀಂ ಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × three =
Remember me
