ಗುರುಗ್ರಾಮ:ಕಾರ್​ ಪಾರ್ಕಿಂಗ್ ವಿಚಾರವಾಗಿ ಶುರುವಾದ ಗಲಾಟೆ ವ್ಯಕ್ತಿಯೊಬ್ಬರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಹರಿಯಾಣದ ಗುರುಗ್ರಾಮದ ಬಲಿವಾಸ್ ಗ್ರಾಮದಲ್ಲಿ ನಡೆದಿದೆ.
ಘಟನೆಯಲ್ಲಿ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಕಾನೂನು ಸುವ್ಯವಸ್ಥೆ ಕುರಿತು ಹಲವಾರು ಪ್ರಶ್ನೆಗಳು ಎದ್ದಿವೆ.
#Gurugramमें कॉलेज छात्रों की Birthday Party में लाठी डंडों से हमला, बर्थडे पार्टी बनी मौत की पार्टी, हमले का LIVE वीडियो#GurugramNews#BirthdayParty#LiveCCTV#GurgaonNews#FarmHousepic.twitter.com/BAzBZejgIu
ಇದನ್ನೂ ಓದಿ:ಬಿಗ್​ಬಾಸ್​ ಮುಂದಿನ ಆವೃತ್ತಿಗೆ ಈಕೆ ಫಿಕ್ಸ್​; ಈ ಸ್ಫರ್ಧಿಗಾಗಿ ಹೆಚ್ಚಾಯ್ತು ಡಿಮ್ಯಾಂಡ್
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಬಲಿವಾಸ್ ಗ್ರಾಮದಲ್ಲಿರುವ ಫಾರ್ಮ್​ ಹೌಸ್​ನಲ್ಲಿ ಬರ್ತ್​ಡೇ ಪಾರ್ಟಿ ಮಾಡಲು ಕೆಲವು ಯುವಕರು ಆಗಮಿಸಿದ್ದರು. ಈ ವೇಳೆ ಕಾರು ನಿಲ್ಲಿಸುವ ವಿಚಾರವಾಗಿ ಯುವಕರು ಹಾಗೂ ಗ್ರಾಮಸ್ಥರ ನಡುವೆ ಗಲಾಟೆಯಾಗಿದ್ದು, ರಾತ್ರಿ 11:30ರ ಸುಮಾರಿಗೆ ಪಾನಮತ್ತರಾಗಿದ್ದ ಉದ್ರಿಕ್ತ ಗುಂಪೊಂದು ಫಾರ್ಮ್​ಹೌಸ್​ಗೆ ನುಗ್ಗಿ ದಾಂಧಲೆ ಮಾಡಿದೆ. ಈ ವೇಳೆ ಅದನ್ನು ತಡೆಯಲು ಹೋದ ವಾಚ್​ಮ್ಯಾನ್​ ಪ್ರವೀಣ್​ ಮೇಲೆ ಮಾರಣಾಂತಿಕ ಹಲ್ಲೆಯಾಗಿದ್ದು, ಆತ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರಯಲ್ಲಿ ಮೃತಪಟ್ಟಿದ್ದಾನೆ.
ಘಟನೆಯಲ್ಲಿ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಈ ಪೈಕಿ ಗಜೇಂದರ್​ ಎಂಬುವವನ ಸ್ಥಿತಿ ಚಿಂತಾಜನಕವಾಗಿದೆ. ಆತನನ್ನು ಏಮ್ಸ್​ಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ. ಘಟನೆ ಸಂಬಂಧ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಇನ್ನುಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 1 =
Remember me
