ಭುವನೇಶ್ವರ:ಹಾವು ಕಡಿತಕ್ಕೆ ಒಳಗಾಗಿದ್ದರೂ ದ್ವಿತೀಯ ಪಿಯು ಪರೀಕ್ಷೆ ಎದುರಿಸಿದ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯ ನಡುವೆಯೇ ಅಸ್ವಸ್ಥಗೊಂಡ ಘಟನೆ ಒಡಿಶಾದ ಕಿಯೊಂಜರ್​ ಜಿಲ್ಲೆಯಲ್ಲಿ ಕಳೆದ ಶನಿವಾರ ನಡೆದಿದೆ.
ವಿದ್ಯಾರ್ಥಿನಿಯನ್ನು ಲಿಪ್ಸಾ ರಾಣಿ ಸಾಹೋ ಎಂದು ಗುರುತಿಸಲಾಗಿದೆ. ಈಕೆ ದಾಧಿಬಾಬನ್ಪುರ್​ ಗ್ರಾಮದ ನಿವಾಸಿ. ದ್ವಿತೀಯ ಪಿಯುಸಿಯ ವಾರ್ಷಿಕ ಪರೀಕ್ಷೆಯನ್ನು ಎದುರಿಸಲು ಆನಂದಪುರ್​ ಕಾಲೇಜಿಗೆ ತೆರಳುವಾಗ ಹಾವು ಕಡಿದಿದೆ. ಆದಾಗ್ಯೂ ಲಿಪ್ಸಾ ಕಾಲೇಜಿಗೆ ತೆರಳಿ ಪರೀಕ್ಷೆ ಬರೆಯುತ್ತಿರುವ ನಡುವೆಯೇ ಆಕೆಯ ಆರೋಗ್ಯದಲ್ಲಿ ಏರುಪೇರಾಗಿದೆ.
ಇದನ್ನೂ ಓದಿ:ನ್ಯಾಯದೇವತೆ: ಹೆಂಡತಿಯ ಸ್ವಯಾರ್ಜಿತ ಆಸ್ತಿಯಲ್ಲಿ ಆಕೆ ಬದುಕಿರುವಾಗ ಗಂಡನಿಗೆ ಹಕ್ಕು ಇರುತ್ತದೆಯೇ?
ಸುಸ್ತಾಗುತ್ತಿದೆ ಎಂದು ಲಿಪ್ಸಾ ಹೇಳಿಕೊಂಡಾಗ ಆಕೆಯನ್ನು ತಕ್ಷಣ ಆನಂದಪುರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ.
ಲಿಪ್ಸಾ ಪರೀಕ್ಷೆಗೆ ಹಾಜರಾಗಲು ಮನೆಯಿಂದ ಹೊರಡುವ ಮುನ್ನ ಹಿತ್ತಲಿಗೆ ಹೋಗಿದ್ದಳು. ಈ ವೇಳೆ ಆಕೆಗೆ ಕಪ್ಪು ಬಣ್ಣದ ಹಾವು ಕಡಿದಿತ್ತು. ಆದಾಗ್ಯೂ, ಆಕೆ ಪರೀಕ್ಷೆಗೆ ಬಂದಿದ್ದಳು. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಲಿಪ್ಸಾಳ ಸಂಬಂಧಿಕರೊಬ್ಬರು ಸ್ಥಳೀಯ ಮಾಧ್ಯಮಕ್ಕೆ ತಿಳಿಸಿದ್ದಾರೆ.(ಏಜೆನ್ಸೀಸ್​)
ವಿದ್ಯಾರ್ಥಿನಿಯರ ಮೈ-ಕೈ ಮುಟ್ಟಿ ಅನುಚಿತ ವರ್ತನೆ: ತುಮಕೂರಲ್ಲಿ ಕಾಮುಕ ಶಿಕ್ಷಕನ ಬಂಧನ

ಮಾಡಾಳ್​ ವಿರೂಪಾಕ್ಷಪ್ಪಗೆ ಲೋಕಾಯುಕ್ತ ಅಧಿಕಾರಿಗಳ ಡ್ರಿಲ್! ಉತ್ತರಿಸಲು ತಡಬಡಾಯಿಸುತ್ತಿರುವ ಶಾಸಕ

ಪ್ರಕೃತಿ ಮಾತೆಗೆ ಬಂಗಾರದ ಕೊಡುಗೆ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + sixteen =
Remember me
