ನವದೆಹಲಿ:ಈ ಹಿಂಧೆ ದೆಹಲಿ ಸರ್ಕಾರ ಜಾರಿಗೆ ತರಲು ಉದ್ಧೇಶಿಸಿದ್ದ ಅಬಕಾರಿ ನೀತಿಗೆ ಸಂಬಂಧಿಸಿದಂತೆ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವಶದಲ್ಲಿರುವ ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅಧಿಕಾರದಲ್ಲಿ ಮುಂದುವರೆಯಬಾರದು ಎಂದು ಬಿಜೆಪಿ ಒತ್ತಡ ಹೇರತೊಡಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿರುವ ವಿಡಿಯೋದಲ್ಲಿ ದೆಹಲಿ ಬಿಜೆಪಿ ಘಟಕದ ನಾಯಕರು ಹಾಗೂ ಕಾರ್ಯಕರ್ತರು ಸೆಕ್ರೆಟರಿಯೇಟ್‌ ಕಚೇರಿ ಬಳಿ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಪ್ರತಿಭಟನಾ ನಿರತರು ಪೊಲೀಸ್​ ಬ್ಯಾರಿಕೇಡ್​ಗಳನ್ನು ಭೇದಿಸಿ ಮುನ್ನುಗುತ್ತಿರುವುದನ್ನು ನೋಡಬಹುದಾಗಿದೆ. ಇ ವೇಳೆ ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.
#WATCH| Delhi: State BJP moves towards the Secretariat during their protest demanding the resignation of Delhi CM Arvind Kejriwal who is in ED custody in the Liquor Excise Policy case.pic.twitter.com/eGvy2kKfHJ
ಇದನ್ನೂ ಓದಿ:ಹೊತ್ತು ಊಟಕ್ಕಾಗಿ ಪರದಾಡಿದ ನಟ ಇಂದು ಒಟಿಟಿಯ ಸೂಪರ್​ಸ್ಟಾರ್​
ಇತ್ತ ಬಿಜೆಪಿಗೆ ಪ್ರತಿಯಾಗಿ ಆಮ್​ ಆದ್ಮಿ ಪಕ್ಷವು ಕೇಜ್ರಿವಾಲ್​ ಬಂಧನ ಖಂಡಿಸಿ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಮುಂಭಾಗ ಪ್ರತಿಭಟನೆ ನಡೆಸುತ್ತಿದೆ. ಕೇಜ್ರಿವಾಲ್‌ ಅವರನ್ನು ಅಬಕಾರಿ ನೀತಿ ಹೆಸರಿನಲ್ಲಿ ಅನಗತ್ಯವಾಗಿ ಸಿಲುಕಿಸಿ ಬಂಧಿಸಲಾಗಿದೆ. ಅವರ ಪಾತ್ರವೇನೂ ಇದರಲ್ಲಿ ಇಲ್ಲ. ಇದರ ಹಿಂದೆ ರಾಜಕೀಯ ಅಡಗಿದೆ. ಲೋಕಸಭೆ ಚುನಾವಣೆಯಲ್ಲಿ ಆಪ್‌ ಪ್ರಭಾವ ತಗ್ಗಿಸಲು ಕೇಜ್ರಿವಾಲ್‌ ಬಂಧನವಾಗಿರುವ ಅನುಮಾನಗಳಿದ್ದು. ಕೂಡಲೇ ಅವರನ್ನು ಬಿಡುಗಡೆ ಮಾಡಬೇಕು ಎಂದು ಆಪ್‌ ಮುಖಂಡರು ಆಗ್ರಹಿಸಿದ್ದಾರೆ.
ಈ ವೇಳೆ ಪ್ರತಿಭಟನಾ ನಿರತರು ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಪೊಲೀಸರು ಅವರನ್ನು ತಡೆದಿದ್ದಾರೆ. ಈ ವೇಳೆ ಆಪ್​ ಮುಖಂಡರು ಹಾಗೂ ಪೊಲೀಸರ ನಡುವೆ ಘರ್ಷಣೆ ಸಂಭವಿಸಿದ್ದು, ಎಎಪಿ ನಾಯಕರು ಘೇರಾವ್​ ಹಾಕಿದ್ದಾರೆ. ಪ್ರಧಾನಿ ನಿವಾಸ ಸೇರಿದಂತೆ ದೆಹಲಿಯ ಪ್ರಮುಖ ಭಾಗದಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದಾರೆ.
VIDEO | Visuals from Delhi's Patel Chowk as AAP workers and supporters protest against CM Arvind Kejriwal's arrest by ED.(Full video available on PTI Videos –https://t.co/n147TvqRQz)pic.twitter.com/448NGLdcHN

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 − 1 =
Remember me
