ನವದೆಹಲಿ:ದೇಶಾದ್ಯಂತ 2024ರ ಲೋಕಸಭಾ ಚುನಾವಣೆ ಏಳು ಹಂತದಲ್ಲಿ ಚುನಾವಣೆಯ ಮತದಾನ ಮುಕ್ತಾಯವಾಗಿದೆ. ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶ ಇಂದು (ಜೂ.1) ಪ್ರಕಟವಾಗಿದೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ನಡುವೆ ನೆಕ್ ಟು ನೆಕ್ ಫೈಟ್ ಇದೆ ಎನ್ನುವುದ ಎಕ್ಸಿಟ್ ಪೋಲ್​ನಲ್ಲಿ ಬಯಲಾಗಿದೆ.
ಇದನ್ನೂ ಓದಿ:ಜನ್ಮ ದಿನದಂದೇ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ದಿನೇಶ್‌ ಕಾರ್ತಿಕ್‌!
2019ರಲ್ಲಿ ಪಶ್ಚಿಮ ಬಂಗಾಳದಲ್ಲಿ ಅಭೂತಪೂರ್ವ ಸಾಧನೆ ಮಾಡಿದ್ದ ಬಿಜೆಪಿ ಈ ಬಾರಿಯೂ ಅದೇ ಓಟವನ್ನು ಮುಂದುವರಿಸಿದೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಪಕ್ಷ, ತೃಣಮೂಲ ಕಾಂಗ್ರೆಸ್ ಓಟಕ್ಕೆ ಬ್ರೇಕ್ ಹಾಕಲಿದೆ ಎಂದು ಕೆಲವು ಸಮೀಕ್ಷೆಗಾರರು ಭವಿಷ್ಯ ನುಡಿದಿದ್ದಾರೆ.

ರಿಪಬ್ಲಿಕ್ ಭಾರತ್-ಮ್ಯಾಟ್ರಿಜ್ ಬಿಜೆಪಿ ಪಕ್ಷ 21-25 ಮತ್ತು ತೃಣಮೂಲ ಕಾಂಗ್ರೆಸ್‌ಗೆ 16-21 ಸ್ಥಾನ ಸಿಗಲಿದೆ ಎಂದು ಹೇಳಿದೆ. ಇಂಡಿಯಾ ನ್ಯೂಸ್ – ಡಿ-ಡೈನಾಮಿಕ್ಸ್ ಪ್ರಕಾರ, ಬಿಜೆಪಿ ಪಕ್ಷವು 21 ಸ್ಥಾನಗಳನ್ನು ಗೆಲ್ಲಲು ಸಿದ್ಧವಾಗಿದೆ. ಟಿಎಂಸಿ 19 ಸ್ಥಾನಗಳಿಗೆ ತೃಪ್ತಿ ಪಡೆದುಕೊಳ್ಳಲಿದೆ ಎಂದು ಹೇಳಿದೆ. ಕಳೆದ ಬಾರಿ ತೃಣಮೂಲ 22 ಕ್ಷೇತ್ರಗಳನ್ನು ಗೆದ್ದಿತ್ತು.
ಎಬಿಪಿ ಎಕ್ಸಿಟ್ ಪೋಲ್​ ಕೂಡ ಬಿಜೆಪಿ 23 ರಿಂದ 27 ಸ್ಥಾನ ಪಡೆಯುವ ಮೂಲಕ ಭರ್ಜರಿಯಾಗಿ ಜಯ ಸಾಧಿಸಲಿದೆ ಎಂದು ಹೇಳಿದೆ. ಇತ್ತ ಟಿಎಂಸಿಗೆ 13 ರಿಂದ 17 ಸ್ಥಾನ ಸಿಗಲಿದ್ದು INC+ ಗೆ 1 ರಿಂದ 3 ಸ್ಥಾನ ಸಿಗಲಿದೆ ಎನ್ನಲಾಗ್ತಿದೆ.
2019 ರ ಲೋಕಸಭಾ ಚುನಾವಣೆ ರಿಸಲ್ಟ್ ಏನಾಗಿತ್ತು?:2019 ರ ಲೋಕಸಭಾ ಚುನಾವಣೆಯಲ್ಲಿ, ಟಿಎಂಸಿ 22 ಸ್ಥಾನಗಳನ್ನು ಗೆದ್ದ ನಂತರ ಬಿಜೆಪಿ 18 ಸ್ಥಾನಗಳನ್ನು ಗೆಲ್ಲುವ ಮೂಲಕ ಬಂಗಾಳದಲ್ಲಿ ಸ್ಪಷ್ಟವಾದ ಪ್ರವೇಶವನ್ನು ಮಾಡಿತು. ಕಾಂಗ್ರೆಸ್‌ಗೆ ಕೇವಲ 2 ಸ್ಥಾನಗಳು ಲಭಿಸಿತ್ತು. ಬಿಜೆಪಿ 19 ರಿಂದ 23 ಸ್ಥಾನಗಳನ್ನು ಮತ್ತು ತೃಣಮೂಲ 19 ರಿಂದ 22 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ಕಾಂಗ್ರೆಸ್​ ಈ ಬಾರಿಯೂ 2 ಸ್ಥಾನ ಗೆಲ್ಲಬಹುದು ಎಂದು ಹೇಳಲಾಗಿದೆ.
ಬಿಜೆಪಿ ವಿರುದ್ಧ ಅಪಪ್ರಚಾರ ಆರೋಪ: ರಾಹುಲ್‌ ಗಾಂಧಿಗೆ ಬೆಂಗಳೂರು ಕೋರ್ಟ್‌ ಸಮನ್ಸ್‌!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × five =
Remember me
