ಕರೂರು:ತಮಿಳುನಾಡಿನ ಕರೂರು ಜಿಲ್ಲೆಯ ಅರವಕುರುಚಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡಿನ ಬಿಜೆಪಿ ಉಪಾಧ್ಯಕ್ಷ ಕೆ ಅಣ್ಣಾಮಲೈ ಅವರಿಗೆ ಸೋಲುಂಟಾಗಿದೆ.
ಅವರು ಡಿಎಂಕೆಯ ಇಲಂಗೋ ಆರ್ ಅವರ ವಿರುದ್ಧ ಪರಾಭವಗೊಂಡಿದ್ದಾರೆ. ಸದ್ಯದ ಮಾಹಿತಿ ಪ್ರಕಾರ 6 ಸಾವಿರ ಮತಗಳ ಅಂತರದಿಂದ ಸೋಲುಂಡಿದ್ದಾರೆ. ಅಣ್ಣಾಮಲೈ ಅವರು ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಾಗಿ ಕೆಲಸ ಮಾಡಿ, ನಂತರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ, ಬಿಜೆಪಿ ಸೇರಿದ್ದರು.
ಅವರ ಸ್ಪರ್ಧೆ ತಮಿಳುನಾಡು ಸೇರಿದಂತೆ ಕರ್ನಾಟಕದಲ್ಲೂ ಸಾಕಷ್ಟು ಕುತೂಹಲ ಕೆರಳಿಸಿತ್ತು. ಆರಂಭದ ಹಲವು ಸುತ್ತಿನ ಮತ ಎಣಿಕೆಯಲ್ಲಿ ಅಣ್ಣಾಮಲೈ ಅವರು ಇಲಂಗೋ ಅವರ ಸನಿಹದಲ್ಲೇ ಇದ್ದರು. ಆದರೆ ಅಂತಿಮ ಸುತ್ತಿನಲ್ಲಿ ಮತಗಳ ಅಂತರ ದೂರ ಹೋಯಿತು. ಆದರೂ ಇದೇ ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿ ಪ್ರಮುಖ ಅಭ್ಯರ್ಥಿಗೆ ಪ್ರಬಲ ಸ್ಪರ್ಧೆಯೊಡ್ಡಿ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ. ಇಲಂಗೋ 94 ಸಾವಿರ ಮತಗಳನ್ನು ಪಡೆದರೇ, ಅಣ್ಣಾಮಲೈ ಅವರು 88 ಸಾವಿರ ಮತಗಳನ್ನು ಪಡೆದಿದ್ದಾರೆ.
ಇನ್ನು ತಮಿಳುನಾಡು ವಿಧಾನಸಭೆ ಚುನಾವಣೆ ಫಲಿತಾಂಶ ಬಹುತೇಕ ಅಂತಿಮಗೊಂಡಿದ್ದು ಡಿಎಂಕೆ 153 ಸ್ಥಾನಗಳನ್ನು ಪಡೆದು ಸರ್ಕಾರ ರಚಿಸುವ ಹಂತದಲ್ಲಿದೆ. ಆಡಳಿತಾರೂಢ ಎಐಎಡಿಎಂಕೆಯನ್ನು ತಮಿಳುನಾಡಿನ ಜನ ದಿಕ್ಕರಿಸಿದ್ದು, 80 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ. ಇದರಲ್ಲಿ ಬಿಜೆಪಿಯ ನಾಲ್ಕು ಸ್ಥಾನಗಳೂ ಸೇರಿವೆ.
ಎಂಎಂಎನ್​ ಪಕ್ಷದ ಕಮಲ್ ಹಾಸನ್ ಗೆಲುವು ದಾಖಲಿಸಿದ್ದಾರೆ. ಬಿಜೆಪಿಯಿಂದ ಸ್ಪರ್ಧಿಸಿದ್ದ ಖುಸ್ಬೂ ಸೋಲುಂಡಿದ್ದಾರೆ.
ತಿರುಪತಿ ಲೋಕಸಭೆ ಉಪಚುನಾವಣೆ ಫಲಿತಾಂಶ: ಕೆ ರತ್ನಪ್ರಭಾಗೆ ಸೋಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − five =
Remember me
