ನವದೆಹಲಿ:ಮುಂಬರುವ ಮಧ್ಯಪ್ರದೇಶ, ಛತ್ತೀಸ್​ಗಢ ವಿಧಾನಸಭೆ ಚುನಾವಣೆಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರ ಹಿರಿಯ ನಾಯಕರನ್ನೊಳಗೊಂಡ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಬುಧವಾರ ಸಭೆ ನಡೆಸಿದ್ದು, ಚುನಾವಣೆ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದೆ.
ಪ್ರಸಕ್ತ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಎರಡೂ ರಾಜ್ಯಗಳ ನಾಯಕತ್ವ ವರಿಷ್ಠರಿಗೆ ವರದಿ ನೀಡಿದ್ದು, ಈ ಬಗ್ಗೆ ಚುನಾವಣಾ ಸಮಿತಿ ಸದಸ್ಯರು ಅವಲೋಕನ ನಡೆಸಿದ್ದಾರೆ. ಸಾಮಾನ್ಯವಾಗಿ ಕೇಂದ್ರ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದ ನಂತರ ಬಿಜೆಪಿ ಚುನಾವಣಾ ಸಮಿತಿ ಸಭೆ ಸೇರುತ್ತದೆ. ಆದರೆ, ಈ ಬಾರಿ ಚುನಾವಣೆಗೆ ಕೆಲ ತಿಂಗಳ ಮುನ್ನವೇ ಸಭೆ ನಡೆಸಿರುವುದನ್ನು ಗಮನಿಸಿದರೆ ಈ ರಾಜ್ಯಗಳ ಫಲಿತಾಂಶ ಮುಂದಿನ ಲೋಕಸಭೆ ಚುನಾವಣೆಗೆ ಅತ್ಯಂತ ಮಹತ್ವ ಎಂದು ಪರಿಗಣಿಸಿರುವುದು ಸ್ಪಷ್ಟವಾಗುತ್ತದೆ. ವರ್ಷಾಂತ್ಯದ ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಲೋಕಸಭೆ ಚುನಾವಣೆಗೆ ದಿಕ್ಸೂಚಿಯಾಗಲಿದೆ. ಈ ಚುನಾವಣೆಗಳು ಲೋಕಸಭೆ ಚುನಾವಣೆಗೆ ಮುನ್ನ ನಡೆಯಲಿರುವ ಕೊನೆಯ ಸುತ್ತಿನ ವಿಧಾನಸಭೆ ಚುನಾವಣೆಗಳಾಗಿವೆ.
ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಸಚಿವ ರಾಜನಾಥ್ ಸಿಂಗ್, ಅಮಿತ್ ಷಾ ಇತರ ಸಿಇಸಿ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಛತ್ತೀಸ್​ಗಢದ ಮಾಜಿ ಸಿಎಂ ರಮಣ್ ಸಿಂಗ್, ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸೇರಿ ರಾಜ್ಯದ ಇತರೆ ನಾಯಕರು ಚರ್ಚೆಯಲ್ಲಿ ಭಾಗವಹಿಸಿದ್ದರು. ಚುನಾವಣೆಯಲ್ಲಿ ಪಕ್ಷ ಪ್ರಬಲ ವಿರೋಧ ಎದುರಿಸುತ್ತಿ ರುವ ಸ್ಥಾನಗಳ ಮೇಲೆ ಗಮನ ಕೇಂದ್ರೀಕರಿಸಿದ್ದು, ಅಭ್ಯರ್ಥಿಗಳ ಆಯ್ಕೆ ಸೇರಿ ಒಟ್ಟಾರೆ ಕಾರ್ಯತಂತ್ರವನ್ನು ಬಿಗಿಗೊಳಿಸಬೇಕೆಂಬ ಸಂದೇಶ ವನ್ನು ಸಭೆ ಮೂಲಕ ರವಾನಿಸಲಾಗಿದೆ. ಛತ್ತೀಸ್​ಗಢ, ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂ ರಾಜ್ಯಗಳಲ್ಲಿ ನವೆಂಬರ್-ಡಿಸೆಂಬರ್​ನಲ್ಲಿ ಚುನಾವಣೆ ನಡೆಯಲಿದೆ. ಸದ್ಯ ಬಿಜೆಪಿ ಮಧ್ಯಪ್ರದೇಶದಲ್ಲಿ ಅಧಿಕಾರ ದಲ್ಲಿದ್ದು, ರಾಜಸ್ಥಾನ ಮತ್ತು ಛತ್ತೀಸ್​ಗಢದಲ್ಲಿ ಕಾಂಗ್ರೆಸ್ ಸರ್ಕಾರವಿದೆ. ತೆಲಂಗಾಣದಲ್ಲಿ ಚಂದ್ರಶೇಖರ್ ರಾವ್ ನೇತೃತ್ವದ ಸರ್ಕಾರವಿದೆ.
ಎನ್​ಸಿಪಿ ನಾಯಕ ಶರದ್ ಪವಾರ್​ಗೆ ಕೇಂದ್ರ ಸಚಿವ ಸ್ಥಾನದ ಆಫರ್ ನೀಡಲಾಗಿತ್ತೆಂದು ಅವರ ಸೋದರ ಬಂಧು ಹಾಗೂ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿದ್ದಾರೆಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಯೊಬ್ಬರು ತಿಳಿಸಿದ್ದಾರೆ. ಶರದ್ ಜೊತೆಗಿನ ‘ರಹಸ್ಯ’ ಮಾತುಕತೆ ವೇಳೆ ಅಜಿತ್ ಈ ಆಫರ್ ಇಟ್ಟಿದ್ದು ಶರದ್ ಸ್ಪಷ್ಟವಾಗಿ ತಿರಸ್ಕರಿಸಿದರೆಂದು ಹೆಸರು ಹೇಳಲು ಬಯಸದ ಮಾಜಿ ಸಿಎಂ ಹೇಳಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡುವುದಾದರೆ ಶರದ್​ಗೆ ಕೇಂದ್ರ ಕೃಷಿ ಸಚಿವ ಹುದ್ದೆ ಅಥವಾ ನೀತಿ ಆಯೋಗದ ಅಧ್ಯಕ್ಷ ಸ್ಥಾನ ಮತ್ತು ಅವರ ಪುತ್ರಿ ಸುಪ್ರಿಯಾ ಸುಲೆಗೆ ಕೇಂದ್ರದಲ್ಲಿ ಹಾಗೂ ರಾಜ್ಯ ಎನ್​ಸಿಪಿ ಮುಖ್ಯಸ್ಥ ಜಯಂತ್ ಪಾಟೀಲ್​ರಿಗೆ ಮಹಾರಾಷ್ಟ್ರ ಸರ್ಕಾರದಲ್ಲಿ ಸಚಿವ ಸ್ಥಾನಗಳ ಕೊಡುಗೆ ಮುಂದೊಡ್ಡಲಾಗಿತ್ತು. ಅವೆಲ್ಲವನ್ನೂ ಶರದ್ ತಿರಸ್ಕರಿಸಿದ್ದಾರೆ.
ರಾಷ್ಟ್ರೀಯ ಜನತಾಂತ್ರಿಕ ಮೈತ್ರಿಕೂಟವನ್ನು (ಎನ್​ಡಿಎ) ಮತ್ತೆ ಸೇರುವ ಬಗ್ಗೆ ತೆಲುಗು ದೇಶಂ ಪಕ್ಷ (ಟಿಡಿಪಿ) ಅಧ್ಯಕ್ಷ, ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಇನ್ನೂ ಯಾವುದೇ ಸ್ಪಷ್ಟ ನಿರ್ಧಾರಕ್ಕೆ ಬಂದಿಲ್ಲ. ಎನ್​ಡಿಎ ಸೇರುವ ಕುರಿತು ಸುದ್ದಿಗಾರರು ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ‘ಅದಕ್ಕೆ ಇದು ಸೂಕ್ತ ಸಮಯವಲ್ಲ’ ಎಂದು ಹೇಳಿ ಜಾರಿಕೊಂಡರು. ಎನ್​ಡಿಎ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದ ನಾಯ್ಡು, ಕೇಂದ್ರ ಸರ್ಕಾರ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡದಿರುವುದನ್ನು ಪ್ರತಿಭಟಿಸಿ ಕೂಟದಿಂದ ಹೊರಬಂದಿದ್ದರು.
ನವದೆಹಲಿ:ಮಾಜಿ ಪ್ರಧಾನಿ, ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರ 5ನೇ ಪುಣ್ಯ ಸ್ಮರಣೆ ನಿಮಿತ್ತ ರಾಷ್ಟ್ರಪತಿ ದ್ರೌಪದಿ ಮುಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಮಂತ್ರಿ ನರೇಂದ್ರ ಮೋದಿ, ಹಿರಿಯ ಸಚಿವರಾದ ಅಮಿತ್ ಷಾ, ರಾಜನಾಥ ಸಿಂಗ್ ಸೇರಿ ಕೇಂದ್ರ ಸಂಪುಟದ ಅನೇಕ ಸದಸ್ಯರು, ಸ್ಪೀಕರ್ ಓಂ ಬಿರ್ಲಾ, ಎನ್​ಡಿಎ ಅಂಗಪಕ್ಷಗಳ ನಾಯಕರಾದ ಪ್ರಫುಲ್ ಪಟೇಲ್, ಎಂ.ತಂಬಿದೊರೈ, ಜಿತಿನ್ ರಾಂ ಮಾಂಝಿ ಮತ್ತಿತರ ಗಣ್ಯರು ದೆಹಲಿಯಲ್ಲಿರುವ ಸದೈವ್ ಅಟಲ್ ಸ್ಮಾರಕಕ್ಕೆ ತೆರಳಿ ನಮನ ಸಲ್ಲಿಸಿದರು. ಇದಕ್ಕೂ ಮುನ್ನ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ದೇಶಸೇವೆ ವಿಚಾರದಲ್ಲಿ ಅಟಲ್​ಜಿ ನಮಗೆಲ್ಲಾ ಸ್ಪೂರ್ತಿ. ಭಾರತದ ಪರಿವರ್ತನೆಗೆ ಶ್ರಮಿಸಿದ ಪ್ರವರ್ತಕರಾದ ಅಟಲ್​ಜಿ ಪಕ್ಷದ ಸರ್ವತೋಮುಖ ಬೆಳವಣಿಗೆಗೆ ಕಾರಣೀಕರ್ತರು. 6 ವರ್ಷಗಳ ಕಾಲ ಸಮ್ಮಿಶ್ರ ಸರ್ಕಾರವನ್ನು ಯಶಸ್ವಿಯಾಗಿ ಮುನ್ನಡೆಸಿ ಅನೇಕ ಸುಧಾರಣೆ ತಂದಿದ್ದಾರೆ ಎಂದರು. ಬಿಹಾರ ಸಿಎಂ ನಿತೀಶ್ ಕುಮಾರ್ ಅಟಲ್ ಸಮಾಧಿಗೆ ನಮನ ಸಲ್ಲಿಸಿದರು.
ನವದೆಹಲಿ: ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆ ಸಿದ್ಧತೆಗೆ ಕಾಂಗ್ರೆಸ್ ಪಕ್ಷ ಬುಧವಾರ ದೆಹಲಿಯಲ್ಲಿ ಮಹತ್ವದ ಸುದೀರ್ಘ ಸಭೆ ನಡೆಸಿತು. ಕಾಂಗ್ರೆಸ್ ಮತ್ತು ಆಮ್ ಆದ್ಮಿಯ (ಆಪ್) ಸಂಭಾವ್ಯ ಮೈತ್ರಿ ಕುರಿತ ಊಹಾಪೋಹಗಳ ನಡುವೆಯೇ ಕಾಂಗ್ರೆಸ್ ಪಕ್ಷ ಮಿತ್ರ ಪಕ್ಷಗಳಿಗೆ ಬಾಗಿಲು ಮುಕ್ತವಾಗಿಟ್ಟಿದೆ. ನಾಲ್ಕು ಗಂಟೆ ಕಾಲ ನಡೆದ ಸಭೆಯಲ್ಲಿ ಭಾಗವಹಿಸಿದ್ದ 40 ಮುಖಂಡರು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು. ದೆಹಲಿಯಲ್ಲಿ ಕಾಂಗ್ರೆಸ್ ಬಲಪಡಿಸುವ ವಿಚಾರವನ್ನು ಪ್ರಮುಖವಾಗಿ ರ್ಚಚಿಸಲಾಯಿತು ಎಂದು ಪಕ್ಷದ ಮುಖಂಡ ಅಲ್ಕಾ ಲಾಂಬಾ ಹೇಳಿದರು. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಂ. ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಸಂಸದ ರಾಹುಲ್ ಗಾಂಧಿ ಕೂಡ ಭಾಗವಹಿಸಿದ್ದರು.
2015ರ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಹಠಾತ್ತನೆ ಪ್ರತ್ಯಕ್ಷವಾದ ಆಪ್, ಕಾಂಗ್ರೆಸ್ ಪಕ್ಷವನ್ನು ಧೂಳೀಪಟ ಮಾಡಿದ್ದ ಆಘಾತದಿಂದ ಕಾಂಗ್ರೆಸ್ ಇನ್ನೂ ಚೇತರಿಸಿಕೊಂಡಿಲ್ಲ. ಇಂಥ ಸನ್ನಿವೇಶದಲ್ಲಿ ಆಪ್ ಜೊತೆ ಮೈತ್ರಿ ಮಾಡಿಕೊಳ್ಳುವ ವಿಚಾರದಲ್ಲಿ ಯಾವ ನಿಲುವು ತೆಗೆದುಕೊಳ್ಳಲಾಗುತ್ತದೆ ಎನ್ನುವ ಕುತೂಹಲ ಉಂಟಾಗಿದೆ. ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾ ಸಭೆ ನಡೆಸಿದಾಗ ಸೀಟು ಹಂಚಿಕೆ ಬಗ್ಗೆ ಚರ್ಚೆ ನಡೆಯಬಹುದು ಎಂದು ಆಪ್ ನಾಯಕ ಹಾಗೂ ದೆಹಲಿ ಸಚಿವ ಸೌರಭ್ ಭಾರದ್ವಾಜ್ ಹೇಳಿದ್ದಾರೆ.
ಮಧ್ಯಪ್ರದೇಶದಲ್ಲಿ ನಾವು ಚುನಾವಣೆಯಲ್ಲಿ ಗೆದ್ದರೆ ಬಜರಂಗದಳವನ್ನು ನಿಷೇಧಿಸುವುದಿಲ್ಲ ಎಂದು ಮಾಜಿ ಸಿಎಂ ಹಾಗೂ ಹಿರಿಯ ಕಾಂಗ್ರೆಸ್ಸಿಗ ದಿಗ್ವಿಜಯ್ ಸಿಂಗ್ ಹೇಳಿದ್ದು, ಬಜರಂಗದಳದಲ್ಲಿಯೂ ಒಳ್ಳೆಯ ಜನರು ಇರಬಹುದು, ಆದರೆ ನಾವು ಗಲಭೆ ಅಥವಾ ಹಿಂಸಾಚಾರದಲ್ಲಿ ಭಾಗಿಯಾಗಿರುವ ಯಾರನ್ನೂ ಬಿಡುವುದಿಲ್ಲ ಎಂದು ಹೇಳಿದ್ದಾರೆ. ದೇಶದಲ್ಲಿ ಶೇ.82ರಷ್ಚು ಮಂದಿ ಹಿಂದುಗಳಿರುವುದರಿಂದ ಇದು ಹಿಂದು ರಾಷ್ಟ್ರವೆಂದ ಮಧ್ಯಪ್ರದೇಶ ಮಾಜಿ ಸಿಎಂ ಹಾಗೂ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕಮಲ್​ನಾಥ್ ಹೇಳಿಕೆಯನ್ನು ಅವರು ಸಮರ್ಥಿಸಿಕೊಂಡಿದ್ದಾರೆ. ಇದು ಹಿಂದು ರಾಷ್ಟ್ರದ ಜತೆಗೆ ಎಲ್ಲ ಧರ್ವಿುಯರ ರಾಷ್ಟ್ರ ಕೂಡ ಆಗಿದೆ. ಮುಸ್ಲಿಮರು, ಕ್ರಿಶ್ಚಿಯನ್ನರು, ಸಿಖ್ಖರು, ಜೈನರು, ಬೌದ್ಧರು ಮತ್ತು ಎಲ್ಲ ಧರ್ಮದವರು ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದಾರೆ. ಕಮಲ್​ನಾಥ್ ಹೇಳಿಕೆ ತಿರುಚಲಾಗಿದೆ ಸಿಂಗ್ ಎಂದು ಹೇಳಿದ್ದಾರೆ.
ಮರುನಾಮಕರಣಕ್ಕೆ ಕಾಂಗ್ರೆಸ್ ಟೀಕೆ:ವಿಶ್ವ ವಿಖ್ಯಾತ ನೆಹರೂ ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯಕ್ಕೆ (ಎನ್​ಎಂಎಂಎಲ್) ಪ್ರಧಾನಮಂತ್ರಿ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ (ಪಿಎಂಎಂಎಲ್) ಎಂದು ಮರು ನಾಮಕರಣ ಮಾಡಿರುವುದಕ್ಕೆ ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ಮಾಡಿದೆ. ನೆಹರೂ ಹೆಸರನ್ನು ತೆಗೆದು ಹಾಕಿದರೂ ಸ್ವಾತಂತ್ರ್ಯ ಹೋರಾಟ ಮತ್ತು ರಾಷ್ಟ್ರದ ಪ್ರಜಾಪ್ರಭುತ್ವ, ಜಾತ್ಯತೀತತೆ, ವೈಜ್ಞಾನಿಕ ತಳಹದಿಗೆ ಅವರ ಅಗಾಧ ಕೊಡುಗೆಗಳನ್ನು ಅಳಿಸಿಹಾಕಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ. ಮೋದಿ ಭಯದ ಮನೋಭಾವ ಹೆಸರು ಬದಲಾವಣೆಗೆ ಕಾರಣ ಎಂದಿದ್ದಾರೆ.
ಗಾದೆಮಾತು ಪ್ರಕರಣ: ರಿಯಲ್ ಸ್ಟಾರ್ ಉಪೇಂದ್ರ ಕಡೆಯಿಂದ ಮಹತ್ವದ ಸೂಚನೆ

ಚಾಕೊಲೇಟ್ ಎಂದು ಜೀನ್ಸ್​ ಪ್ಯಾಂಟ್ ಬಟನ್ ಕೊಟ್ಟ ಅಕ್ಕ; ಉಸಿರುಗಟ್ಟಿ ಪ್ರಾಣಾಪಾಯಕ್ಕೆ ಸಿಲುಕಿತು 2 ತಿಂಗಳ ಮಗು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × five =
Remember me
