ಕೋಲ್ಕತ್ತಾ:ಕೇಂದ್ರದ ಬಿಜೆಪಿ ಸರ್ಕಾರ ಮೋಸದ ನಡೆಗಳಿಂದ ತನ್ನ ಅಧಿಕಾರವನ್ನು ಉಳಿಸಿಕೊಳ್ಳುತ್ತಿದ್ದು, ಶೀಘ್ರದಲ್ಲೇ ಪತನವಾಗಲಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಭವಿಷ್ಯ ನುಡಿದಿದ್ದಾರೆ.
ಇದನ್ನೂ ಓದಿ:ರೀಲ್ಸ್​ಗಾಗಿ ಸುರಿವ ಮಳೆಯಲ್ಲಿ ಯುವಕರ ಬೈಕ್ ಸ್ಟಂಟ್.. ಕೊನೆಗೆ ಏನಾಯ್ತು?
ಕೋಲ್ಕತ್ತಾದಲ್ಲಿ ಭಾನುವಾರ ನಡೆದ ಟಿಎಂಸಿ ಶಾಹಿದ್​ ದಿವಸ್​ ಸಮಾವೇಶದಲ್ಲಿ ಮಾತನಾಡಿ, ಕೇಂದ್ರದ ಬಿಜೆಪಿ ಸರ್ಕಾರವು ಹಲವು ಅಡೆತಡೆಗಳ ನಡುವೆ ಅಧಿಕಾರ ಹಿಡಿದಿದೆ. ಆದರೆ ಇದು ಎಷ್ಟು ದಿನ ಅಧಿಕಾರದಲ್ಲಿ ಉಳಿಯಲು ಸಾಧ್ಯ ಎಂದು ಪ್ರಶ್ನಿಸಿದರು.
ಬಂಗಾಳದ ಜನರು ಬಿಜೆಪಿ ವಿರುದ್ಧ ಹೋರಾಡಿದರು. ಆ ಪಕ್ಷವನ್ನು ಹಿಂದಕ್ಕೆ ತಳ್ಳಿದರು. ದೆಹಲಿಯ ಗದ್ದುಗೆಯ ಮೇಲೆ ಕುಳಿತಿರುವ ದೊರೆಗಳು ಇನ್ನು ಕೆಲವೇ ದಿನಗಳು ಮಾತ್ರ ಅಧಿಕಾರದಲ್ಲಿ ಇರಲಿದ್ದಾರೆ. ಲೋಕಸಭೆಯಲ್ಲೂ ಇದನ್ನೇ ಹೇಳಿದ್ದೇನೆ. ಇಂದು ಮತ್ತೆ ಅದನ್ನೇ ಹೇಳುತ್ತಿದ್ದೇನೆ. ಕೇಂದ್ರ ಸರ್ಕಾರ ಪತನವಾಗುವುದು ನಿಶ್ಚಿತ ಎಂದರು.
ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಮಾತನಾಡಿ, ಬಿಜೆಪಿಯು ಬಂಗಾಳಕ್ಕೆ ನೆರವು ನಿಲ್ಲಿಸಿದ್ದು, ಇದಕ್ಕೆ ಪ್ರತಿಯಾಗಿ ಲೋಕಸಭೆ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಿದ್ದಾರೆ ಎಂದರು.
1993 ರಲ್ಲಿ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ 13 ಜನರ ನೆನಪಿಗಾಗಿ ಟಿಎಂಸಿ ಪ್ರತಿ ವರ್ಷ ಈ ಶಾಹಿದ್ ದಿವಸ್ (ಹುತಾತ್ಮರ ದಿನ) ಆಚರಿಸುತ್ತದೆ.
‘ನೀನಿಲ್ಲದ ಈ ಜಗತ್ತು ಸುಂದರವಲ್ಲ’: ನಟ ಸೋನುಸೂದ್ ಭಾವುಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
