ಭೋಪಾಲ್:ಮುಂದಿನ ಕೆಲವೇ ದಿನಗಳಲ್ಲಿ ರಾಜ್ಯ ವಿಧಾನಸಬೆ ಚುನಾವಣೆ ನಡೆಯಲಿರುವ ಮಧ್ಯಪ್ರದೇಶದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಕಾಂಗ್ರೆಸ್​ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತಮ್ಮ ವಾಗ್ದಾಳಿಯನ್ನು ಮುಂದುವರೆಸಿದ್ದಾರೆ.
ಮಧ್ಯಪ್ರದೇಶದ ಸಿಯೋನಿ ಜಿಲ್ಲೆಯಲ್ಲಿ ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಜನರು ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವ ಗ್ಯಾರಂಟಿ ಕೊಟ್ಟಿದ್ದಾರೆ ಎಂದು ಕಾಂಗ್ರೆಸ್​ ಘೋಷಣೆಗಳ ಕುರಿತು ಪರೋಕ್ಷವಾಗಿ ವ್ಯಂಗ್ಯವಾಡಿದ್ದಾರೆ.
ಕೇವಲ 5-10 ಜನರನ್ನು ಪ್ರಶ್ನಿಸಿ ರಾಜಕೀಯದಲ್ಲಿ ಲೆಕ್ಕಾಚಾರ ಹಾಕಿಕೊಂಡು ಗ್ಯಾಂಗ್​ ಒಂದು ಮಾತನಾಡುತ್ತಿದೆ. ಅವರು ಒಮ್ಮೆ ಮಧ್ಯಪ್ರದೇಶಕ್ಕೆ ಬಂದು ನೋಡಿದರೆ ಯಾರು ಗೆಲ್ಲುತ್ತಾರೆ ಎಂಬುದು ಅವರಿಗೆ ಸ್ಪಷ್ಟವಾಗುತ್ತದೆ. 30 ವರ್ಷಗಳ ನಂತರ ಪ್ರಧಾನಿ ಒಬ್ಬರು ಸಿಯೋನ್​ ಜಿಲ್ಲೆಗೆ ಬಂದಿದ್ದು, ಆ ಅವಕಾಶ ನನಗೆ ಸಿಕ್ಕಿರುವುದು ಬಹಳ ಸಂತೋಷವಾಗಿದೆ.
#WATCH| In Seoni, Madhya Pradesh: Prime Minister Narendra Modi says "I say this clearly that there is a gang in politics that does some calculations and makes up their mind by questioning just 5-10 people. They should come and see here, it is clear who is winning. Our member of…pic.twitter.com/QYAet4tvpb
ಜನರ ಈಗಾಗಲೇ ನನಗೆ ಬಿಜೆಪಿಯನ್ನು ಗೆಲ್ಲಿಸುವ ಗ್ಯಾರಂಟಿಯನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ನಮ್ಮ ಪಕ್ಷದ ಉತ್ತಮ ಆಡಳಿತ ಹಾಗೂ ಅಭಿವೃದ್ದಿ ಕಾರ್ಯಗಳನ್ನು ಕಂಡು ಜನರು ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಬೇಕೆಂದು ನಿಶ್ಚಯಿಸಿದ್ದಾರೆ. ಬಿಜೆಪಿ ಎಂದರೆ ಭರವಸೆ, ವಿಶ್ವಾಸ ಎಂದು ಜನರಿಗೆ ಈಗಾಗಲೇ ಅರ್ಥವಾಗಿದೆ. ಮಧ್ಯಪ್ರದೇಶದಲ್ಲಿ ಬಿಜೆಪಿಯ ಗೆಲುವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸಿಯೋನಿಯಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
#WATCH| In Seoni, Madhya Pradesh: Prime Minister Narendra Modi says "It is the guarantee of the people that BJP is going to win (Assembly elections). Our Madhya Pradesh needs continuity in good governance and development. The entire state says 'BJP hai toh bharosa hai, BJP hai…pic.twitter.com/pAvnVY1LNh
ಇತ್ತ ಪ್ರಧಾನಿ ಮೋದಿ ಆರೋಪಕ್ಕೆ ಪ್ರತಿಕ್ರಿಯಿಸಿರುವ ಮಧ್ಯಪ್ರದೇಶ ಮಾಜಿ ಸಿಎಂ ಕಮಲ್​ನಾಥ್​ ಜನತೆಯ ಮೇಲೆ ನಮಗೆ ಸಂಪೂರ್ಣ ವಿಶ್ವಾಸವಿದ್ದು, ರಾಜ್ಯದ ಭವಿಷ್ಯವನ್ನು ಸುರಕ್ಷಿತವಾಗಿಡುವುದನ್ನು ಅವರು ಖಚಿತಪಡಿಸುತ್ತಾರೆ. ಬಿಜೆಪಿ ದುರಾಡಳಿತಕ್ಕೆ ಜನರು ಈ ಚುನಾವಣೆಯಲ್ಲಿ ಅಂತ್ಯ ಹಾಡಲು ನಿರ್ಧರಿಸಿದ್ದಾರೆ. ಕಾಂಗ್ರೆಸ್​ ಗೆಲುವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕಮಲ್​ನಾಥ್​ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಪಂಚರಾಜ್ಯ ಚುನಾವಣೆ ಮುಂಬರುವ ಲೋಕಸಭೆ ಎಲೆಕ್ಷನ್​ಗೆ ಸೆಮಿಫಿನಾಲೆ ಎಂದೇ ಹೇಳಲಾಗಿದೆ. 230 ಸದಸ್ಯಬಲದ ಮಧ್ಯಪ್ರದೇಶ ವಿಧಾನಸಭೆಗೆ ನವೆಂಬರ್ 17ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 3ಕ್ಕೆ ಫಲಿತಾಂಶ ಪ್ರಕಟವಾಗಲಿದೆ.
VIDEO | "I have full faith in the people of Madhya Pradesh, they will ensure that the future of the state is safe," says Madhya Pradesh Congress president@OfficeOfKNath.#AssemblyElectionsWithPTI#MadhyaPradeshElections2023pic.twitter.com/9gnAvr2gNV
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 20 =
Remember me
