ನವದೆಹಲಿ:ಬಿಜೆಪಿ ಪಕ್ಷದಲ್ಲಿ ಬುಧವಾರದಂದು ನಾಟಕೀಯ ಬೆಳವಣಿಗೆಯೊಂದು ನಡೆದಿದೆ. ಶಾಹೀನ್​ಬಾಗ್​ ಪ್ರತಿಭಟನೆ ವೇಳೆ ಗುಂಡು ಹಾರಿಸಿ ಜೈ ಸೇರಿದ್ದ ವ್ಯಕ್ತಿಯನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದ್ದು, ಕೆಲವೇ ಗಂಟೆಗಳಲ್ಲಿ ಆತನನ್ನು ಉಚ್ಛಾಟನೆ ಮಾಡಲಾಗಿದೆ.
ಇದನ್ನೂ ಓದಿ:ಮಗನ ಹೆಂಡತಿಗೆ ಮಾವ ಹೀಗಾ ಮಾಡೋದು?! ತನಿಖೆಯಲ್ಲಿ ಬಯಲಾಯಿತು ಮಾವನ ನಿಜ ಬಣ್ಣ
ಫೆಬ್ರವರಿಯಲ್ಲಿ ಶಾಹೀನ್​ಬಾಗ್​ನಲ್ಲಿ ಸಿಎಎ ವಿರೋಧಿಸಿ ನಡೆಸಲಾಗುತ್ತಿದ್ದ ಪ್ರತಿಭಟನೆಯಲ್ಲಿ ಕಪಿಲ್​ ಗುರ್ಜರ್​ ಹೆಸರಿನ ವ್ಯಕ್ತಿ ಗುಂಡು ಹಾರಿಸಿದ್ದ. ಅದಕ್ಕಾಗಿ ಆತನನ್ನು ದೆಹಲಿ ಪೊಲೀಸರು ಬಂಧಿಸಿದ್ದರು. ನಂತರ ಆತ ಜಾಮೀನಿನ ಮೇಲೆ ಹೊರಬಂದಿದ್ದ. ಅದೇ ವ್ಯಕ್ತಿ ಇಂದು ಗಾಜಿಯಾಬಾದ್​ ಜಿಲ್ಲಾ ಬಿಜೆಪಿ ನಾಯಕರ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದಾನೆ.
ಇದನ್ನೂ ಓದಿ:ಬೆಳ್ತಂಗಡಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಎಸ್‌ಡಿಪಿಐ ಬೆಂಬಲಿಗರು
ಕಪಿಲ್​ ಬಿಜೆಪಿ ಸೇರಿದ ಕೆಲವೇ ಗಂಟೆಗಳಲ್ಲಿ ಆತನನ್ನು ಪಕ್ಷದಿಂದ ಉಚ್ಛಾಟನೆ ಮಾಡಿರುವುದಾಗಿ ಪಕ್ಷ ಹೇಳಿಕೊಂಡಿದೆ. ಮೇಲ್ದರ್ಜೆಯ ನಾಯಕರು ಗಾಜಿಯಾಬಾದ್​ನ ನಾಯಕರಿಗೆ ಕಪಿಲ್​ ಪಕ್ಷ ಸೇರಿದ್ದರ ಕುರಿತಾಗಿ ತರಾಟೆ ತೆಗೆದುಕೊಂಡಿದ್ದು, ಅದೇ ಹಿನ್ನೆಲೆಯಲ್ಲಿ ಆತನನ್ನು ಪಕ್ಷದಿಂದ ತೆಗೆದಿರುವುದಾಗಿ ಹೇಳಲಾಗಿದೆ. ಕಪಿಲ್​ನ ಬಗ್ಗೆ ತಿಳಿಯದೆಯೇ ಆತನನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದು, ತಪ್ಪಾಗಿರುವುದಾಗಿ ಜಿಲ್ಲಾ ನಾಯಕರು ಮೇಲಿನ ನಾಯಕರಿಗೆ ತಿಳಿಸಿದ್ದಾರೆ ಎನ್ನಲಾಗಿದೆ. (ಏಜೆನ್ಸೀಸ್​)
ಸರ್ಪೈಸ್​ ನೀಡಲು ಮನೆಗೆ ಬಂದ ಗಂಡನಿಗೆ ಕಾದಿತ್ತು ಬಿಗ್​ ಶಾಕ್​! ಹೆಂಡತಿಯ ಇನ್ನೊಂದು ರೂಪ ನೋಡಿದ ಗಂಡ ಮಾಡಿದ್ದೇನು?

ಹೆಂಡತಿಯ ಸೀಮಂತಕ್ಕೆ ಸಿದ್ಧತೆ ನಡೆಸುತ್ತಿದ್ದ ಗಂಡ ರಸ್ತೆಯಲ್ಲೇ ಬಲಿಯಾದ! ಮಗನ ಜತೆ ತಾಯಿಯೂ ದುರ್ಮರಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × four =
Remember me
