ನವದೆಹಲಿ:ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಮಧ್ಯಪ್ರದೇಶದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಆಡಳಿತರೂಢ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್​ ಆರೋಪ ಪ್ರತ್ಯಾರೋಪಗಳಲ್ಲಿ ತೊಡಗಿವೆ.
ಸಾಗರ್​ ಜಿಲ್ಲೆಯಲ್ಲಿ ದಲಿತ ವ್ಯಕ್ತಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಮುಗಿಬಿದ್ದಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಂದಿನ ಚುನಾವಣೆಯಲ್ಲಿ ನಿಮಗೆ ಸೋಲು ಕಟ್ಟಿಟ್ಟ ಬುತ್ತಿ ಎಂದು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಭವಿಷ್ಯ ನುಡಿದಿದ್ದಾರೆ.
ಮಧ್ಯಪ್ರದೇಶದ ಸಾಗರ್​ ಜಿಲ್ಲೆಯಲ್ಲಿ ಕಿಡಿಗೇಡಿಗಳು ದಲಿತ ಸಮುದಾಯಕ್ಕೆ ಸೇರಿದ ಯುವಕನನ್ನು ಹೊಡೆದು ಕೊಂದಿದ್ದಾರೆ. ರಕ್ಷಣೆಗೆ ಧಾವಿಸಿದ ಆತನ ತಾಯಿಯ ಜೊತೆ ದುರುಳರು ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಸಾಗರ್​ ಜಿಲ್ಲೆಯಲ್ಲಿ ಸಂತ ರವಿದಾಸ್​ ಅವರ ದೇವಾಲಯವನ್ನು ಕಟ್ಟುತ್ತೇವೆ ಎಂದು ಹೇಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರೇ ಮಧ್ಯಪ್ರದೇಶದಲ್ಲಿ ದಲಿತರು ಹಾಗೂ ಆದಿವಾಸಿಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯದ ಕುರಿತು ಯಾಕೆ ಮೌನ ವಹಿಸಿದ್ದೀರ ಎಂದು ಪ್ರಶ್ನಿಸಿದ್ದಾರೆ.
मध्य प्रदेश के सागर ज़िले में एक दलित युवक की पीट-पीट कर हत्या कर दी गई। गुंडों ने उसकी मॉं को भी नहीं बख़्शा।सागर में संत रविदास मंदिर बनवाने का ढोंग रचने वाले प्रधानमंत्री जी मध्य प्रदेश में लगातार होते दलित व आदिवासी उत्पीड़न एवं अन्याय पर चूँ तक नहीं करते। मध्यप्रदेश के…
ಇದನ್ನೂ ಓದಿ:ಮುಂಬೈನ ಹೋಟೆಲ್​ ಗ್ಯಾಲಕ್ಸಿಯಲ್ಲಿ ಅಗ್ನಿ ಅವಘಡ; ಮೂರು ಮಂದಿ ಮೃತ್ಯು
ಇತ್ತ ಮಧ್ಯಪ್ರದೇಶದ ಮುಖ್ಯಮಂತ್ರಿಗಳು ಕ್ಯಾಮರಾ ಮುಂದೆ ಹಿಂದುಳಿದವರ ಪಾದಗಳನ್ನು ತೊಳೆಯುವ ಮೂಲಕ ತಮ್ಮ ಸರ್ಕಾರದ ವೈಫಲ್ಯಗಳನ್ನು ಮರೆಮಾಚಲು ಯತ್ನಿಸುತ್ತಿದ್ದಾರೆ. ಆದರೆ, ಬಿಜೆಪಿ ಮಧ್ಯಪ್ರದೇಶವನ್ನು ದಲಿತರ ಮೇಲಿನ ದೌರ್ಜನ್ಯದ ಪ್ರಯೋಗಾಲಯವನ್ನಾಗಿ ಮಾಡಿದೆ. ದಲಿತರ ಮೇಲಿನ ಅಪರಾಧ ಪ್ರಕರಣಗಳು ರಾಷ್ಟ್ರೀಯ ಸರಾಸರಿಗಿಂತ ಮೂರು ಪಟ್ಟು ಹೆಚ್ಚಿದೆ ಎಂದು ಆರೋಪಿಸಿದ್ದಾರೆ.
ಪ್ರಧಾನಿ ಮೋದಿ ಅವರೇ, ಮುಂದಿನ ಕೆಲ ತಿಂಗಳ ನಂತರ ಸಮಾಜದ ವಂಚಿತ ಹಾಗೂ ಶೋಷಿತ ವರ್ಗಗಳಿಂದ ನಿಮಗೆ ತಕ್ಕ ಉತ್ತರ ಸಿಗಲಿದೆ. ಈ ಬಾರಿ ಮಧ್ಯಪ್ರದೇಶದ ಜನರು ಬಿಜೆಪಿಯ ಬಲೆಗೆ ಬೀಳುವುದು ಅಸಾಧ್ಯ ನಿಮಗೆ ಸೋಲು ಕಟ್ಟಿಟ್ಟ ಬುತ್ತಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭವಿಷ್ಯ ನುಡಿದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 1 =
Remember me
