ಧರ್ಮಪುರಿ (ತಮಿಳುನಾಡು):ಲೋಕಸಭೆ ಚುನಾವಣೆ ಸೋಲಿನಿಂದ ಕೇಂದ್ರದ ಆಢಳಿತರೂಢ ಬಿಜೆಪಿ ಸರ್ಕಾರ ಪಾಠ ಕಲಿತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು, ರಾಜ್ಯದ ಪ್ರಮುಖ ಯೋಜನೆಗಳಿಗೆ ಹಣ ಮಂಜೂರು ಮಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ:30 ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್ ಜಪ್ತಿ, ಅಸ್ಸಾಂ ಪೊಲೀಸರಿಂದ ಇಬ್ಬರು ಪೆಡ್ಲರ್​ಗಳ ಬಂಧನ
‘ಮಕ್ಕಲುದನ್ ಮುದಲ್ವರ್’ (ಜನರೊಂದಿಗೆ ಸಿಎಂ) ಅನ್ನು ಗ್ರಾಮೀಣ ಪ್ರದೇಶಗಳಿಗೂ ವಿಸ್ತರಿಸುವ ಯೋಜನೆಗೆ ಚಾಲಿನ ನೀಡಿದ ಸ್ಟಾಲಿನ್ ಈ ಯೋಜನೆಯ ಮೂಲಕ ರಾಜ್ಯದ ಯಾರಿಗೂ ಯಾವುದೇ ಕುಂದುಕೊರತೆ ಉಂಟಾಗದಂತೆ ನೋಡಿಕೊಳ್ಳಲು ಸರ್ಕಾರ ಶ್ರಮಿಸುತ್ತದೆ ಎಂದು ತಿಳಿಸಿದ್ದಾರೆ.
ಜನರಿಗಾಗಿ ಇಂತಹ ಬದ್ಧತೆಯ ಕೆಲಸ ಮಾಡುತ್ತಿದುವುದರಿಂದ ವಿರೋಧ ಪಕ್ಷಗಳಿಗೆ ಅಸೂಯೆ ಮತ್ತು ಕಿರಿಕಿರಿ ಉಂಟಾಗುತ್ತಿದೆ ಮತ್ತು ಅದಕ್ಕಾಗಿಯೇ ಅವರು ‘ಅಪ್ರಚಾರ’ ಮೂಲಕ ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನಿಸುತ್ತಿದ್ದಾರೆ. “ಕೇಂದ್ರ ಬಿಜೆಪಿ ಸರ್ಕಾರ 2024ರ ಲೋಕಸಭೆ ಚುನಾವಣೆಯಲ್ಲಿ ಸೋಲು ಹಾಗೂ ರಾಜ್ಯದಲ್ಲಿ ಹಿಂದಿನ ಚುನಾವಣೆಯಲ್ಲಿ ಸೋಲುಗಳಿಂದ ಪಾಠ ಕಲಿತಿಲ್ಲ ಎಂದು ಸ್ಟಾಲಿನ್ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ರಾಜಧಾನಿ ಚೆನ್ನೈನಲ್ಲಿ ಮೆಟ್ರೋ ರೈಲು ಹಂತ-2 ಸೇರಿದಂತೆ ರಾಜ್ಯದ ಪ್ರಮುಖ ಯೋಜನೆಗಳಿಗೆ ಅನುದಾನ ನೀಡುವ ಮನಸ್ಸನ್ನು ಕೇಂದ್ರ ಬಿಜೆಪಿ ಸರ್ಕಾರ ಹೊಂದಿಲ್ಲ. ಕಳೆದ 10 ವರ್ಷಗಳ ಆಡಳಿತದಲ್ಲಿ ರಾಜ್ಯದಲ್ಲಿ ಯಾವುದೇ ದೊಡ್ಡ ಯೋಜನೆಯನ್ನು ಜಾರಿಗೆ ತಂದಿಲ್ಲ ಎಂದು ವಾಗ್ದಾಳಿ ನಡೆಸಿದರು.“ನಾವು ಜನರೊಂದಿಗೆ ಇದ್ದೇವೆ ಮತ್ತು ಜನರು ನಮ್ಮೊಂದಿಗಿದ್ದಾರೆ. ಇದು ನಮ್ಮ ಯಶಸ್ಸಿನ ಗುಟ್ಟು ಮತ್ತು ಇದು ತಮಿಳುನಾಡಿನ ಬೆಳವಣಿಗೆಯ ರಹಸ್ಯ ಎಂದು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ವಿಶ್ವಾಸ ವ್ಯಕ್ತಪಡಿಸಿದರು.
ಮೇ 7, 2021 ರಂದು ಅಧಿಕಾರ ವಹಿಸಿಕೊಂಡ ದಿನಾಂಕದಿಂದ ಇಲ್ಲಿಯವರೆಗೆ 68.30 ಲಕ್ಷ ಅರ್ಜಿಗಳಲ್ಲಿ 66.25 ಲಕ್ಷ ಅರ್ಜಿಗಳನ್ನು ತೆರವುಗೊಳಿಸಲಾಗಿದೆ ಮತ್ತು ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲಾಗಿದೆ. ಧರ್ಮಪುರಿ ಜಿಲ್ಲೆಯೊಂದರಲ್ಲೇ 72,438 ಅರ್ಜಿಗಳಲ್ಲಿರುವ ಸಮಸ್ಯೆಗಳನ್ನು ಪರಿಹರಿಸಲಾಗಿದೆ. ಅಂತಹ ಎಲ್ಲಾ ಮನವಿಗಳನ್ನು ಜನರು ಸರ್ಕಾರಿ ಅಧಿಕಾರಿಗಳಿಗೆ ಸಲ್ಲಿಸಿದ್ದಾರೆ ಎಂದು ಎಂದು ಸ್ಟಾಲಿನ್ ಹೇಳಿದರು.
ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ: ಡಿ.ಕೆ. ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 15 =
Remember me
