ತಮಿಳುನಾಡು:ಅಕ್ರಮ ಧ್ವಜಸ್ತಂಭ ತೆಗೆಯಲು ತಂದಿದ್ದ ಜೆಸಿಬಿ ಯಂತ್ರದ ಮೇಲೆ ದಾಳಿ ನಡೆಸಿ ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಬಿಜೆಪಿ ಮುಖಂಡ ಅಮರ್ ಪ್ರಸಾದ್ ರೆಡ್ಡಿ ಅವರನ್ನು ಶನಿವಾರ (ಅ.21) ಚೆನ್ನೈ ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ:ಕಮಿಷನ್ ಕಲೆಕ್ಷನ್‌ಗಾಗಿ ಕೃತಕ ವಿದ್ಯುತ್ ಅಭಾವ; ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪ
ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ.ಅಣ್ಣಾಮಲೈ ಅವರ ಚೆನ್ನೈ ನಿವಾಸದ ಹೊರಗೆ ಧ್ವಜಸ್ತಂಭವನ್ನು ತೆಗೆಯಬೇಕಿತ್ತು. ಈ ಹಿನ್ನೆಲೆ ಬಂದ ಆದೇಶದ ಮೇರೆಗೆ ಅಧಿಕಾರಿಗಳು ತೆರವು ಕಾರ್ಯಾಚರಣೆಗೆ ಮುಂದಾದ ವೇಳೆ ಬಿಜೆಪಿ ಮುಖಂಡ ಅಮರ್ ಪ್ರಸಾದ್ ರೆಡ್ಡಿ ಜೆಸಿಬಿ ಮೇಲೆ ದಾಳಿ ನಡೆಸಿದರು. ಈ ಹಿನ್ನೆಲೆ ಅವರನ್ನು ಪೊಲೀಸ್ ಅಧಿಕಾರಿಗಳು ಸದ್ಯ ಬಂಧನಕ್ಕೆ ಒಳಪಡಿಸಿದ್ದಾರೆ.
ತಾಂಬ್ರಮ್ ಪೊಲೀಸರ ಪ್ರಕಾರ, ಶುಕ್ರವಾರ ಸಂಜೆ ಅಣ್ಣಾಮಲೈ ಅವರ ಮನೆಯ ಕಾಂಪೌಂಡ್ ಗೋಡೆಯ ಹೊರಗಿದ್ದ 45 ಅಡಿ ಧ್ವಜ ಸ್ತಂಭವನ್ನು ಸ್ಥಾಪಿಸುವ ಮೊದಲು ಗ್ರೇಟರ್ ಚೆನ್ನೈ ಕಾರ್ಪೊರೇಷನ್‌ನಿಂದ ಯಾವುದೇ ಅನುಮತಿಯನ್ನು ಕೇಳಲಾಗಿಲ್ಲ. ಈ ಧ್ವಜ ಸ್ತಂಭವು ಹೈವೋಲ್ಟೇಜ್ ವಿದ್ಯುತ್ ಲೈನ್‌ಗಳಿಗೆ ಅಪಾಯಕಾರಿಯಾಗಿ ಸಮೀಪದಲ್ಲಿದೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದರು.
ಇದನ್ನೂ ಓದಿ:ಕಾಲುವೆ ಜಾಲಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಟಿ.ಭೂಬಾಲನ್ ಆದೇಶ
ನಂತರ ಅದನ್ನು ತೆಗೆದುಹಾಕಲು ಪಾಲಿಕೆ ಮತ್ತು ಪೊಲೀಸರು ನಿರ್ಧರಿಸಿದ್ದರು. ಸ್ಥಳಕ್ಕೆ ಬಂದ ಅಮರ್​ ಪ್ರಸಾದ್​ ರೆಡ್ಡಿ ಸೇರಿದಂತೆ ಇತರೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ಅಮರ್​ ಅವರನ್ನು ಬಂಧಿಸಿದ ಬೆನ್ನಲ್ಲೇ ಬಿಜೆಪಿ ನಾಯಕ ಕಪಿಲ್ ಮಿಶ್ರಾ ಇದನ್ನು ಖಂಡಿಸಿದ್ದಾರೆ.
ಹಲವು ಬಾರಿ ಮಾಡಿದ ವಿನಂತಿಗಳ ಹೊರತಾಗಿಯೂ, ಅವರು ಸರ್ಕಾರಿ ಅಧಿಕಾರಿಗಳೊಂದಿಗೆ ಜಗಳವಾಡುತ್ತಿದ್ದರು. ತದನಂತರ ಅವರಲ್ಲಿ ಕೆಲವರನ್ನು ಬಂಧಿಸಲಾಯಿತು ಮತ್ತು ಜಾಮೀನಿನ ಮೇಲೆ ಬಿಡಲಾಯಿತು. ರೆಡ್ಡಿ ಬಂಧನವಲ್ಲದೆ, ಪ್ರಕರಣದಲ್ಲಿ ಆರು ಮಂದಿಯ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿದೆ. ಅವರಲ್ಲಿ ಐವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ,(ಏಜೆನ್ಸೀಸ್).
ಟ್ರೇಲರ್​ನಲ್ಲಿ ಸದ್ದು ಮಾಡುತ್ತಿದೆ ಯತಿರಾಜ್ ನಿರ್ದೇಶನದ ‘ಸತ್ಯಂ ಶಿವಂ’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × five =
Remember me
