ಉತ್ತರಪ್ರದೇಶ:ಈ ಬಿಜೆಪಿ ನಾಯಕ, ಸಮಾಜವಾದಿ ಪಕ್ಷದ ನಾಯಕರೊಬ್ಬರ ಮಗಳೊಂದಿಗೆ ಓಡಿಹೋಗಿದ್ದಾನೆ! ಈ ಸಂಬಂಧ ಎಫ್‌ಐಆರ್ ದಾಖಲಾಗಿದ್ದು, ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದಕ್ಕಾಗಿ ಬಿಜೆಪಿ, ಈತನನ್ನು ಉಚ್ಚಾಟಿಸಿದೆ.
ಬಿಜೆಪಿ ನಾಯಕ ಆಶಿಶ್ ಶುಕ್ಲಾ (47), ಸಮಾಜವಾದಿ ಪಾರ್ಟಿ ನಾಯಕನ ಮಗಳ (26) ಜೊತೆ ಓಡಿ ಹೋಗಿದ್ದು ಅವರು 21 ವರ್ಷದ ಮಗ ಮತ್ತು ಏಳು ವರ್ಷದ ಮಗಳನ್ನು ಹೊಂದಿದ್ದಾರೆ. ಬಲ್ಲ ಮೂಲಗಳ ಪ್ರಕಾರ, ಹುಡುಗಿಯ ಮನೆಯವರು ಅವಳ ಮದುವೆಯನ್ನು ನಿಶ್ಚಯಿಸಿದಾಗ ಇಬ್ಬರೂ ಓಡಿಹೋಗಿದ್ದಾರೆ.
ಬಿಜೆಪಿಯ ಹರ್ದೋಯ್ ಜಿಲ್ಲಾ ಮಾಧ್ಯಮ ಉಸ್ತುವಾರಿ ಗಂಗೇಶ್ ಪಾಠಕ್ ಸುದ್ದಿಗಾರರೊಂದಿಗೆ ಮಾತನಾಡಿದ್ದು ‘ಆಶಿಶ್ ಶುಕ್ಲಾ, ಪಕ್ಷದ ಹರ್ದೋಯ್​ ನಗರ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಪಕ್ಷದ ನೀತಿಗೆ ವಿರುದ್ಧವಾಗಿ ಕೆಲಸ ಮಾಡಿದ್ದು ಅನುಚಿತ ನಡವಳಿಕೆಯ ಕಾರಣ, ಅವರನ್ನು ಹುದ್ದೆಯಿಂದ ಕಸಿದುಕೊಳ್ಳಲಾಗಿದ್ದು ಅವರ ಪ್ರಾಥಮಿಕ ಸದಸ್ಯತ್ವವನ್ನು ಸಹ ರದ್ದುಗೊಳಿಸಲಾಗಿದೆ. ಈಗ ಪಕ್ಷಕ್ಕೂ ಶುಕ್ಲಾಗೂ ಯಾವುದೇ ರೀತಿಯ ಸಂಬಂಧವಿಲ್ಲ. ಆಶಿಶ್ ಶುಕ್ಲಾ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ಸಂಪೂರ್ಣ ಸ್ವತಂತ್ರರು’ ಎಂದು ಹೇಳಿದ್ದಾರೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:11 + three =
Remember me
