ನವದೆಹಲಿ:ಬಿಜೆಪಿ ಸಂಸದ ಜಗದಾಂಬಿಕ ಪಾಲ್ ಅವರು ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಮಂಡಿಸಿರುವ ವಕ್ಫ್​ (ತಿದ್ದುಪಡಿ) ಮಸೂದೆ-2024ರ ಜಂಟಿ ಸಂಸದೀಯ ಸಮಿತಿಯ (ಜೆಪಿಸಿ) ಅಧ್ಯಕ್ಷರಾಗಿರುತ್ತಾರೆ.
ಇದನ್ನೂ ಓದಿ:ಕೋಲ್ಕತ್ತಾ ಟ್ರೈನಿ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣ: ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ
ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಖಾತೆ ಸಚಿವ ಕಿರಣ್ ರಿಜಿಜು ಅವರು ಆಗಸ್ಟ್ 8ರಂದು ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯನ್ನು ಮಂಡಿಸಿದರು. ಸದನವು ಈ ಮಸೂದೆಯ ಉದ್ದೇಶಿತ ತಿದ್ದುಪಡಿಗಳ ಕುರಿತು ಸಂಕ್ಷಿಪ್ತ ಚರ್ಚೆಯನ್ನು ನಡೆಸಿತು. ಹೆಚ್ಚಿನ ಪರಿಶೀಲನೆಗಾಗಿ ಮಸೂದೆಯನ್ನು ಜಂಟಿ ಸಂಸದೀಯ ಸಮಿತಿಗೆ ಕಳುಹಿಸಲಾಗಿತ್ತು.
ವಕ್ಫ್​ (ತಿದ್ದುಪಡಿ) ಮಸೂದೆಯನ್ನು ಪರಿಶೀಲಿಸಲು ಲೋಕಸಭೆಯ ಸ್ಫೀಕರ್ ಓಂ ಬಿರ್ಲಾ ಅವರು 31 ಸದಸ್ಯರ ಜ ಜಂಟಿ ಸಮಿತಿ ಸಂಸದೀಯ ಸಮಿತಿಯನ್ನು ರಚಿಸಿದ್ದಾರೆ. 31 ಸದಸ್ಯರಲ್ಲಿ 21 ಸದಸ್ಯರು ಲೋಕಸಭೆಯಿಂದ ಮತ್ತು ಉಳಿದ 10 ಮಂದಿ ರಾಜ್ಯಸಭೆಯಿಂದ ಇದ್ದಾರೆ. ಈ ಸಮಿತಿ ಮುಂದಿನ ಅಧಿವೇಶನದ ವೇಳೆಗೆ ತನ್ನ ವರದಿಯನ್ನು ಸಲ್ಲಿಸಲಿದೆ.
ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮತ್ತು ಕಾಂಗ್ರೆಸ್​ ಸಂಸದ ಇಮ್ರಾನ್ ಮಸೂದ್​, ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರನ್ನು ಸಮಿತಿಯಲ್ಲಿ ಸೇರಿಸಲಾಗಿದೆ.
8.5 ಲಕ್ಷ ಆಸ್ತಿಗಳನ್ನು ಒಳಗೊಂಡಿರುವ ವಕ್ಫ್ ಕಾಯ್ದೆಯಲ್ಲಿ ಬದಲಾವಣೆ ಮಾಡಲು ಈ ಮಸೂದೆ ಶಿಫಾರಸು ಮಾಡಿದೆ. ಬಿಜೆಪಿಯ ಮಿತ್ರಪಕ್ಷಗಳಾದ ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ಜನತಾ ದಳ ಯುನೈಟೆಡ್ (ಜೆಡಿಯು) ಮಸೂದೆಗೆ ಸಂಪೂರ್ಣ ಬೆಂಬಲವನ್ನು ನೀಡಿತು. ಆದರೆ ಕಾಂಗ್ರೆಸ್, ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಎಐಎಂಐಎಂ ಸೇರಿದಂತೆ ಪ್ರತಿಪಕ್ಷಗಳು ಇದನ್ನು ಬಲವಾಗಿ ವಿರೋಧ ವ್ಯಕ್ತಪಡಿಸಿದ್ದವು.
ಆಗಸ್ಟ್​ 13ರಿಂದ 15ರವರೆಗೆ ಪೀಣ್ಯ ಇಂಡಸ್ಟ್ರೀ-ನಾಗಸಂದ್ರ ನಡುವೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 1 =
Remember me
