ಕೋಲ್ಕತ:ಪಶ್ಚಿಮ ಬಂಗಾಳದಲ್ಲಿ ಮುಂದಿನ ವರ್ಷ ನಡೆಯಲಿರುವ ಚುನಾವಣೆಯ ಕಾವು ಈಗಾಗಲೇ ಆರಂಭವಾಗಿದೆ. ಆಡಳಿತದಲ್ಲಿರುವ ಟಿಎಂಸಿ ಮತ್ತು ಕೇಂದ್ರದ ಆಡಳಿತದಲ್ಲಿರುವ ಬಿಜೆಪಿ ಪಕ್ಷಕ್ಕೆ ರಾಜ್ಯದಲ್ಲಿ ನೇರ ಹಣಾಹಣಿ ಉಂಟಾಗಿದೆ. ರಾಜ್ಯದಲ್ಲಿ ರಾಜಕೀಯ ಪಕ್ಷಗಳ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚಾಗಿದ್ದು, ಈ ಸಮಯದಲ್ಲಿ ಬಿಜೆಪಿ ನಾಯಕರೊಬ್ಬರು ವಿವಾದಕ್ಕೀಡಾಗಿದ್ದಾರೆ.
ಇದನ್ನೂ ಓದಿ:ಅಪ್ರಾಪ್ತ ಮಗ ಕೊಲೆ ಮಾಡುತ್ತಿದ್ದರೆ, ಅಮ್ಮ ಹೀಗಾ ಮಾಡೋದು? ಇಷ್ಟೆಲ್ಲ ಆಗಿದ್ದು ಪುಟ್ಟ ಬಾಲಕಿಯಿಂದಾಗಿ
ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸುತ್ತಿರುವುದರ ವಿರೋಧವಾಗಿ ಪ್ರತಿಭಟನಾ ಸಭೆ ನಡೆಸಲಾಗುತ್ತಿತ್ತು. ಸಭೆಯಲ್ಲಿ ಭಾಗವಹಿಸಿದ್ದ ಬಿಜೆಪಿ ನಾಯಕ ರಾಜು ಬ್ಯಾನರ್ಜಿ ಅವರು ಹೇಳಿರುವ ಮಾತುಗಳು ಇದೀಗ ಅನೇಕರ ವಿರೋಧಕ್ಕೆ ಕಾರಣವಾಗಿದೆ.
‘ರಾಜ್ಯದಲ್ಲಿ ಏನು ನಡೆಯುತ್ತಿದೆ ಎನ್ನುವುದನ್ನು ನೀವೇ ನೋಡುತ್ತಿದ್ದೀರಿ. ಗೂಂಡಾ ರಾಜ್​ ಮೇಲುಗೈ ಸಾಧಿಸಲು ನೋಡುತ್ತಿದೆ. ಹಲ್ಲೆಗೆ ಒಳಗಾಗುತ್ತಿರುವವರಿಗೆ ಪೊಲೀಸರೂ ಏನೂ ರಕ್ಷಣೆ ನೀಡುತ್ತಿಲ್ಲ. ಇಂತಹ ಪೊಲೀಸರಿಗೆ ಏನು ಮಾಡಬೇಕು? ನಾವು ಅವರನ್ನು ನಮ್ಮ ಬೂಟು ನೆಕ್ಕಲು ಇಟ್ಟುಕೊಳ್ಳುತ್ತೇವೆ’ ಎಂದು ರಾಜು ಅವರು ತಮ್ಮ ಭಾಷಣದಲ್ಲಿ ಹೇಳಿದ್ದಾರೆ.
ಇದನ್ನೂ ಓದಿ:ನೇಣಿಗೆ ಶರಣಾಗುವ ಮುನ್ನ ತಮ್ಮ ಮಾಡಿದ ಕೆಲಸದಿಂದಾಗಿ ಅಣ್ಣನ ಕುಟುಂಬವೇ ನಾಶ
ರಾಜ್ಯದ ಬಿಜೆಪಿ ಅಧ್ಯಕ್ಷ ದಿಲೀಪ್​ ಘೋಷ್​ ಅವರ ಮೇಲೆ 15 ದಿನದಲ್ಲಿ ಎರಡು ಬಾರಿ ನಡೆಸಲಾಗಿದೆ. ಟಿಎಂಸಿ ಪಕ್ಷದ ಕಾರ್ಯಕರ್ತರೇ ಹಲ್ಲೆ ನಡೆಸಿರುವುದಾಗಿ ಅವರು ದೂರಿದ್ದಾರೆ. ರಾಜ್ಯ ಬಿಜೆಪಿ ಉಸ್ತುವಾರಿ ಕೈಲಾಶ್​ ವಿಜಯವರ್ಗೀಯ ಅವರ ಮೇಲೂ ಹಲ್ಲೆ ನಡೆಸಲು ಪ್ರಯತ್ನಿಸಲಾಗಿತ್ತು ಎಂದು ನಾಯಕರು ದೂರಿದ್ದಾರೆ. (ಏಜೆನ್ಸೀಸ್​)
VIDEO| ನಾನು ಸಾಯುವ ಸಾಧ್ಯತೆಯಿದೆ ಎಂದು ಭಾವುಕರಾದ ರಾಣಾ: ಕಣ್ಣೀರಿಟ್ಟ ಸಮಂತಾ, ವೀಕ್ಷಕರು!

ಕಾಡಿನ ಗುಡಿಸಲಿನಲ್ಲಿ ಕೂಡಿ 14 ದಿನ ಅತ್ಯಾಚಾರ ಮಾಡಿದ! ಕಾಮುಕನಿಂದ ಬಚಾವಾಗಿದ್ದೇ ಒಂದು ರೋಚಕ ಕಥೆ

ಆರು ಪತ್ನಿಯರನ್ನು ಏಕಕಾಲದಲ್ಲಿ ಗರ್ಭಿಣಿಯರನ್ನಾಗಿ ಮಾಡಿದ ಪತಿರಾಯ; ಮದುವೆಯಲ್ಲಿ ಟ್ರೆಂಡ್​ ಆದ ಕುಟುಂಬ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 12 =
Remember me
