ಭೋಪಾಲ್​:ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಮಧ್ಯಪ್ರದೇಶದಲ್ಲಿ ದಿನದಿಂದ ದಿನಕ್ಕೆ ಪಕ್ಷಾಂತರ ಪರ್ವ ಜೋರಾಗುತ್ತಿದ್ದು, ಹೊಸ ಬೆಳವಣಿಗೆಯೊಂದರಲ್ಲಿ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅತ್ಯಾಪ್ತ ಸಮಂದರ್​ ಪಟೇಲ್​ ಬಿಜೆಪಿ ತೊರೆದು ಕಾಂಗ್ರೆಸ್​ ಸೇರಿದ್ದಾರೆ.
ನೀಮುಚ್​ನ ಜವಾದ್​ನಿಂದ 1,200ಕ್ಕೂ ಹೆಚ್ಚು ಬೆಂಗಾವಲು ವಾಹನಗಳೊಂದಿಗೆ ಭೋಪಾಲ್​ನಲ್ಲಿರುವ ಕಾಂಗ್ರೆಸ್​ ಕಚೇರಿಗೆ ಆಗಮಿಸಿದ ಸಮಂದರ್ ಪಟೇಲ್​​ ರಾಜ್ಯ ಘಟಕದ ಅಧ್ಯಕ್ಷ , ಮಾಜಿ ಸಿಎಂ ಕಮಲ್​ನಾಥ್​ ನೇತೃತ್ವದಲ್ಲಿ ಪಕ್ಷ ಸೇರ್ಪಡೆಯಾಗಿದ್ದಾರೆ.
ಸಮಂದರ್​ ಪಟೇಲ್​ ತಮ್ಮ ಬೆಂಬಲಿಗರೊಂದಿಗೆ 1,200ಕ್ಕೂ ಹೆಚ್ಚು ವಾಹನಗಳಲ್ಲಿ ಭೋಪಾಲ್​ಗೆ ತೆರಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ನೀಮುಚ್​ ಪ್ರದೇಶದಲ್ಲಿ ತಮ್ಮದೇ ಆದ ಹಿಡಿತ ಹೊಂದಿರುವ ಸಮಂದರ್​ ಕಾಂಗ್ರೆಸ್​ಗೆ ಸೇರ್ಪಡೆಯಾಗಿರುವುದರಿಂದ ಬಿಜೆಪಿಗೆ ದೊಡ್ಡ ಹಿನ್ನಡೆಯಾಗಿದೆ ಎಂದು ತಿಳಿದು ಬಂದಿದೆ.
Massive boost for Congress and set back for BJP in Madhya Pradesh as close Scindia confidante Sh. Samandar Patel on the way to Bhopal to join congress party.Sh. Patel alongwith his 5000 supporters are coming from over 1200 vehicles to show his strength and join congress.pic.twitter.com/2lezg0Vnxg
ಇದನ್ನೂ ಓದಿ:ಕೇರಳದಲ್ಲಿ ಆಫ್ರಿಕನ್​ ಹಂದಿ ಜ್ವರ ಉಲ್ಬಣ; ವ್ಯಾಪಕ ಕಟ್ಟೆಚ್ಚೆರ
ಸಮಂದರ್​ ಪಕ್ಷ ಸೇರ್ಪಡೆಯ ನಂತರ ಮಾತನಾಡಿದ ಮಧ್ಯಪ್ರದೇಶ ಮಾಜಿ ಸಿಎಂ ಕಮಲ್​ನಾಥ್​​ ಪಟೇಲ್​ ಅವರು ಯಾವುದೇ ಷರತ್ತನ್ನು ವಿಧಿಸದೆ, ಪಕ್ಷದ ತತ್ವ ಸಿದ್ಧಾಂತವನ್ನು ಒಪ್ಪಿ ಕಾಂಗ್ರೆಸ್​ಗೆ ತಮ್ಮ ಅಪಾರ ಬೆಂಬಲಿಗರೊಂದಿಗೆ ಸೇರ್ಪಡೆಯಾಗಿದ್ದಾರೆ. ಅವರು ಸತ್ಯವನ್ನು ಒಪ್ಪಿಕೊಂಡು ಕಾಂಗ್ರೆಸ್​ ಪಕ್ಷಕ್ಕೆ ಬಂದಿದ್ದಾರೆ. ಮುಂದಿನ ದಿನಗಳಲ್ಲಿ ಬಿಜೆಪಿ ಬಗ್ಗೆ ಸತ್ಯಾಂಶವನ್ನು ಜನತೆಗೆ ಸ್ವತಃ ಅವರೇ ತಿಳಿಸಲಿದ್ದಾರೆ.
2018ರಲ್ಲಿ ಕಾಂಗ್ರೆಸ್​ ಪಕ್ಷ ಸಂಪೂರ್ಣ ಜನಾದೇಶದೊಂದಿಗೆ ಅಧಿಕಾರಕ್ಕೇರಿತ್ತು. ಆದರೆ, ಶಿವರಾಜ್​ ಸಿಂಗ್​ ಚೌಹಾಣ್​ ನೇತೃತ್ವದ ಬಿಜೆಪಿ ಹಣ ಹಾಗೂ ಅಧಿಕಾರ ಬಲದ ಮೂಲಕ ಶಾಸಕರಿಗೆ ಆಮಿಷವೊಡ್ಡಿ ಅವರನ್ನು ಖರೀದಿಸಿ ಸರ್ಕಾರವನ್ನು ರಚಿಸಿತ್ತು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 18 ವರ್ಷಗಳು ಕಳೆದರೂ ಹಗರಣಗಳು ಬಿಟ್ಟರೆ ಯಾವುದೇ ರೀತಿಯ ಅಭಿವೃದ್ಧಿಯಾಗಿಲ್ಲ ಎಂದು ಆರೋಪಿಸಿದ್ದಾರೆ.
ಶಿವರಾಜ್​ ಸಿಂಗ್​ ನೇತೃತ್ವದ ಬಿಜೆಪಿ ಸರ್ಕಾರವು ಭ್ರಷ್ಟಾಚಾರ ಮಾತ್ರವಲ್ಲದೆ ಮಹಿಳೆಯರು, ರೈತರು, ಮಕ್ಕಳು ಹಾಗೂ ಯುವಕರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿಯೂ ರಾಜ್ಯವನ್ನು ನಂಬರ್​ ಒನ್​ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಜನತೆ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಸರ್ಕಾರಕ್ಕೆ ವಿದಾಯ ಹೇಳಲು ಸಿದ್ದರಾಗಿದ್ದು ಕಾಂಗ್ರೆಸ್​ ಅಧಿಕಾರಕ್ಕೇರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:2 × 5 =
Remember me
