ಕಲ್ಕತ್ತಾ:ಮಹಿಳೆಯರ ಸುರಕ್ಷತೆಯ ವಿಚಾರವಾಗಿ ಪೊಲೀಸರು ಅಗತ್ಯಬಿದ್ದರೆ ಎನ್​ಕೌಂಟರ್​ಗಳನ್ನು ಮಾಡಬೇಕು ಎಂದು ಬಿಜೆಪಿ ಶಾಸಕ, ಪಶ್ಚಿಮ ಬಂಗಾಳ ವಿಧಾನಸಭೆಯ ವಿಪಕ್ಷ ನಾಯಕ ಸುವೆಂದು ಅಧಿಕಾರಿ ಹೇಳಿದ್ದಾರೆ.
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರಿಂದ ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಿಸಲು ಮಾತ್ರ ಸಾಧ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ದಿನದಿಂದ ದಿನಕ್ಕೆ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ರಾಜ್ಯ ಅಪರಾಧ ಪ್ರಕರಣಗಳ ದೊಡ್ಡ ತಾಣವಾಗಿ ಹೊರಹೊಮ್ಮಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜ್ಯದಲ್ಲಿ ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ:ಹತ್ತಿ ಇಳಿಯಲು ಕಾಂಗ್ರೆಸ್ ಪಕ್ಷ ಬಸ್ ಅಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್​
ಪಶ್ಚಿಮ ಬಂಗಾಲದಲ್ಲಿ ಅಪ್ರಾಪ್ತ ವಯಸ್ಕರ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತಿದ್ದು, ಮಹಿಳೆಯರ ಸುರಕ್ಷತೆ ವಿಚಾರವಾಗಿ ಅತ್ಯಬಿದ್ದರೆ ಅಂತಹ ಅಪರಾಧಿಗಳನ್ನು ಪೊಲೀಸರು ಎನ್​ಕೌಂಟರ್​ ಮಾಡಬೇಕು. ಇಂತಹ ಅಪರಾಧಿಗಳು ಮನುಷ್ಯರೊಂದಿಗೆ ವಾಸಿಸುವ ಯಾವುದೇ ಹಕ್ಕನ್ನು ಹೊಂದಿಲ್ಲ ಎಂದು ಹೇಳಿದ್ದಾರೆ.
ಸುವೆಂದು ಅಧಿಕಾರಿ ಹೇಳಿಕೆ ವೈರಲ್​ ಆಗುತ್ತಿದ್ದಂತೆ ಪ್ರತಿಕ್ರಿಯಿಸಿರುವ ತೃಣಮೂಲ ಕಾಂಗ್ರೆಸ್​ ಪಶ್ಚಿಮ ಬಂಗಾಳವನ್ನು ಉತ್ತರಪ್ರದೇಶ ಮಾಡಲು ಹೊರಟಿರುವವರು ಒಂದು ಅರ್ಥ ಮಾಡಿಕೊಳ್ಳಬೇಕಾಗಿರುವುದೇನೆಂದರೆ ಅದು ಎಂದಿಗೂ ಆಗದೇ ಇರುವ ಮಾತು ಎಂದು ತಿರುಗೇಟು ನೀಡಿದೆ.
ಅತ್ಯಾಚಾರ ಸಂತ್ರಸ್ತರಿಗೆ ನಾವು ಕಾನೂನಿನ ಮೂಲಕ ತ್ವರಿತ ವಿಚಾರಣೆ ಹಾಗೂ ನ್ಯಾಯವನ್ನು ಬಯಸುತ್ತೇವೆ. ನಾವು ಅತ್ಯಾಚಾರಿಗಳಿಗೆ ಕಾನೂನಿನ ಮೂಲಕ ಶಿಕ್ಷೆಯನ್ನು ಕೊಡಿಸಲು ಬಯಸುತ್ತೇವೆ. ಸುವೆಂದು ಅಧಿಕಾರಿ ಹೇಳುತ್ತಿರುವುದನ್ನು ರಾಜ್ಯದ ಜನತೆ ಬಯಸುತ್ತಿಲ್ಲ. ಇವರು ರಾಜ್ಯವನ್ನು ತಾಲಿಬಾನ್​ ಮಾಡಲು ಹೊರಟ್ಟಿದ್ದಾರೆ ಎಂದು ಟಿಎಂಸಿ ಕಿಡಿಕಾರಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + six =
Remember me
