ಕೊಲ್ಕತ್ತ:ಅಪರಿಚಿತ ವ್ಯಕ್ತಿಗಳಿಬ್ಬರು ಬಿಜೆಪಿ ನಾಯಕನ ಮೆನೆಗೆ ನುಗ್ಗಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಶ್ಚಿಮ ಬಂಗಾಳದ ಕೂಚ್​ ಬೆಹಾರ್​ ಜಿಲ್ಲೆಯ ದಿನ್ಹಟಾದಲ್ಲಿ ನಡೆದಿದೆ.
ಮೃತರನ್ನು ಪ್ರಶಾಂತ್​ ಬಸುನಿಯಾ ಎಂದು ಗುರುತಿಸಲಾಗಿದ್ದು ಇವರು ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿದ್ದರು ಎಂದು ತಿಳಿದು ಬಂದಿದೆ.
ಮೃತ ದುರ್ದೈವಿ ಪ್ರಶಾಂತ್​ ಊಟಕ್ಕೆ ಕುಳಿತ್ತಿದ್ದ ವೇಳೆ ಅವರ ಮನೆಗೆ ನುಗ್ಗಿದ ಇಬ್ಬರು ಮುಸುಕುಧಾರಿಗಳು ಅವರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯೆ ಕೊನೆಯುಸಿರು ಎಳೆದಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಪೊಲೀಸ್​ ಅಧಿಕಾರಿ ಒಬ್ಬರು ಇಬ್ಬರು ಆರೋಪಿಗಳ ಪೈಕಿ ಓರ್ವನ ಮುಖಚಹರೆ ಗುರುತು ಹಿಡಿಯುವುದಾಗಿ ಮೃತರ ತಾಯಿ ತನಿಖಾಧಿಕಾರಿಗಳಿಗೆ ತಿಳಿಸಿದ್ದಾರೆ. ದಾಳಿಕೋರರನ್ನು ಪತ್ತೆ ಹಚ್ಚಲಾಗುತ್ತಿದ್ದು ಬಸುನಿಯಾ ಕುಟುಂಬ ಸದಸ್ಯರು, ಅವರ ನೆರಹೊರೆಯವರು ಹಾಗೂ ಪ್ರದೇಶದ ಸುತ್ತ ಅಳವಡಿಸಿರುವ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆಯಲ್ಲಿ ಅಧಿಕಾರಿಗಳು ತೊಡಗಿದ್ದಾರೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:VIDEO| ಕುಸ್ತಿಪಟುಗಳ ಪ್ರತಿಭಟನೆಗೆ ಬೆಂಬಲ ಸೂಚಿಸುವ ಸಭೆಯಲ್ಲಿ ಮಾತಿನ ಚಕಮಕಿ
ಪ್ರಶಾಂತ್ ಬಸುನಿಯಾ ಹತ್ಯೆ ಆಡಳಿತರೂಢ ಟಿಎಂಸಿ ಹಾಗೂ ವಿಪಕ್ಷ ಬಿಜೆಪಿ ನಡುವೆ ಕೆಸರೆರಚಾಟಕ್ಕ ಎಡೆ ಮಾಡಿಕೊಟ್ಟಿದ್ದು ಉಭಯ ಪಕ್ಷಗಳ ನಾಯಕರು ಆರೋಪ ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ತೃಣಮೂಲ ಕಾಂಗ್ರೆಸ್​ ಶಾಸಕ ಉದಯನ್​ ಗುಹಾ ಪೊಲೀಸರು ಇ ಕುರಿತು ತನಿಖೆ ನಡೆಸುತ್ತಿದ್ದು ಇದಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿ ಇದು ಆಡಳಿತರೂಢ ತೃಣಮೂಲ ಕಾಂಗ್ರೆಸ್​(TMC) ಪಕ್ಷ ಕಳುಹಿಸಿರುವ ಗೂಂಡಾಗಳು ಎಸಗಿರುವ ಕೃತ್ಯ. ಇದು ರಾಜಕೀಯ ಪ್ರೇರಿತವಾಗಿದ್ದು ಪಂಚಾಯತ್ ಚುನಾವಣೆಗೂ ಮುನ್ನ ಬಿಜೆಪಿಯ ಸಂಘಟನೆಯನ್ನು ದುರ್ಬಲಗೊಳಿಸಲು ಬಸುನಿಯಾರನ್ನು ಗುರಿಯಾಗಿಸಿ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಕೂಚ್​ ಬೆಹಾರ್​ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಕೆಲವು ದಿನಗಳಿಂದ ಟಿಎಂಸಿ ನಾಯಕರು ಬಿಜೆಪಿ ಸೇರ್ಪಡಯಾಗುತ್ತಿದ್ದಾರೆ. ಇದರಿಂದ ಹತಾಶೆಗೊಳಗಾಗಿರುವ ತೃಣಮೂಲ ಹೈಕಮಾಂಡ್​ ಈ ರೀತಿ ಕೊಲೆ ಮಾಡಿಸಿದೆ. ಪ್ರಶಾಂತ್ ಬಸುನಿಯಾ ಹತ್ಯೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ವಿಪಕ್ಷ ನಾಯಕ ಸುವೆಂದು ಅಧಿಕಾರಿ ಆಗ್ರಹಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:14 − twelve =
Remember me
