ಪಶ್ಚಿಮ ಬಂಗಾಳ:ಭಾರತೀಯ ಜನತಾ ಪಕ್ಷ (ಬಿಜೆಪಿ) ನಾಯಕ ರಾಜು ಝಾ ಅವರನ್ನು ಅಪರಿಚಿತರು ಗುಂಡಿಕ್ಕಿ ಕೊಂದಿದ್ದಾರೆ. ಪಶ್ಚಿಮ ಬಂಗಾಳದ ಪುರ್ಬಾ ಬರ್ಧಮಾನ್‌ನ ಶಕ್ತಿಗಢದಲ್ಲಿ ಈ ಘಟನೆ ನಡೆದಿದೆ.
ರಾಜು ಝಾ ಮೃತರು. ದುರ್ಗಾಪುರ ಮೂಲದ ಉದ್ಯಮಿಯಾಗಿರುವ ರಾಜು ಝಾ, ಸಂಜೆ ಕೋಲ್ಕತ್ತಾಗೆ ತೆರಳುತ್ತಿದ್ದಾಗ ಶಕ್ತಿಗಢ ಪ್ರದೇಶದ ಮಿಠಾಯಿ ಅಂಗಡಿಯೊಂದರ ಹೊರಗೆ ಅಪರಿಚಿತರು ದಾಳಿ ನಡೆಸಿದ್ದಾರೆ. ಘಟನೆಯ ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ರಾಜು ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು. ಘಟನೆಯಲ್ಲಿ ಅವರ ಜೊತೆಗಿದ್ದ ಇತರ ವ್ಯಕ್ತಿಗಳು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ:ಭೀಕರ ಅಪಘಾತ; ಅಂತರಾಷ್ಟ್ರೀಯ ತೊಗಲುಗೊಂಬೆ ಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ಮೃತ್ಯುರಾಜು ಝಾ ಅಕ್ರಮ ಕಲ್ಲಿದ್ದಲು ವ್ಯವಹಾರ ನಡೆಸುತ್ತಿದ್ದರು ಎಂದು ಆರೋಪಿಸಲಾಗಿತ್ತು. ತೃಣಮೂಲ ಕಾಂಗ್ರೆಸ್(ಟಿಎಂಸಿ) ಸರ್ಕಾರದಲ್ಲಿ ರಾಜು ಝಾ ವಿರುದ್ಧ ಹಲವಾರು ಪ್ರಕರಣಗಳು ದಾಖಲಾಗಿದ್ದವು. ಡಿಸೆಂಬರ್ 2021 ರಲ್ಲಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಅವರ ಸಮ್ಮುಖದಲ್ಲಿ ಕಳೆದ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಅವರು ಬಿಜೆಪಿ ಸೇರಿದ್ದರು.
ಕಾರ್​​ನಲ್ಲಿ ರಾಜು ಝಾ ಸೇರಿದಂತೆ ಮೂವರಿದ್ದರು. ಗಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿಗಳ ಉದ್ದೇಶ ಇನ್ನೂ ಪತ್ತೆಯಾಗಿಲ್ಲ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಿಷಕಾರಿ ಹುಲ್ಲು ತಿನ್ನುತ್ತಿದ್ದಂತೆ ಒಂದಾದ ಮೇಲೆ ಒಂದರಂತೆ 34 ಕುರಿಗಳು ದುರಂತ ಸಾವು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − six =
Remember me
