ನವದೆಹಲಿ:ಬಿಜೆಪಿ ಮೈತ್ರಿಯಿಂದ ಹೊರಬಿದ್ದ ಶಿವಸೇನಾ ಸತತ ವಾಗಿ ತನ್ನ ಮಾಜಿ ಮಿತ್ರ ಪಕ್ಷದ ವಿರುದ್ಧ ವಾಗ್ದಾಳಿ, ಟೀಕೆ ಮಾಡುತ್ತಿದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಭಾರತಕ್ಕೆ ಭೇಟಿ ನೀಡುವ ಬಗ್ಗೆ, ಅದಕ್ಕಾಗಿ ಕೇಂದ್ರ ಸರ್ಕಾರ ನಡೆಸುತ್ತಿರುವ ಸಿದ್ಧತೆ ಬಗ್ಗೆ ಶಿವಸೇನಾ ತನ್ನ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಟೀಕೆ ಮಾಡಿತ್ತು.
ಈಗ ಮತ್ತೊಮ್ಮೆ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಶಿವಸೇನೆ ವ್ಯಂಗ್ಯಮಾಡಿದೆ. ಕೇಂದ್ರ ಸರ್ಕಾರ ಕಾಶ್ಮೀರದ ಆರ್ಟಿಕಲ್​ 370 ರದ್ದು, ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಮಾಡಿದ್ದರ ಬಗ್ಗೆಯೇ ಮಾತನಾಡುತ್ತ, ರಾಜಕೀಯ ಲಾಭ ಪಡೆಯುವ ಬದಲು ಮಾಡಬೇಕಾದ ಕೆಲಸದ ಬಗ್ಗೆ ಗಮನ ಹರಿಸಬೇಕು ಎಂದು ಹೇಳಿದೆ.
ಸಾಮ್ನಾ ಪತ್ರಿಕೆಯ ಸಂಪಾದಕೀಯದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ ಶಿವಸೇನೆ, ಪ್ರಧಾನಿ ನರೇಂದ್ರ ಮೋದಿಯವರು ವಾರಾಣಸಿಯಲ್ಲಿ ಮಾತನಾಡುವಾಗ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಾಪಸ್​ ಪಡೆಯುವುದಿಲ್ಲ ಎಂದು ಹೇಳಿದ್ದಾರೆ. ಹೋದಲ್ಲೆಲ್ಲ ಅದನ್ನೇ ಹೇಳಿ ರಾಜಕೀಯ ಲಾಭ ಪಡೆಯುತ್ತಿದ್ದಾರೆ. ಮೋದಿ ಹಾಗೂ ಅಮಿತ್ ಷಾ ಅವರು ದೆಹಲಿ ಚುನಾವಣಾ ಪ್ರಚಾರದ ವೇಳೆ ಎಲ್ಲೆಲ್ಲಿ ಭಾಷಣ ಮಾಡಿದ್ದಾರೋ ಅಲ್ಲೆಲ್ಲ ಇದನ್ನೇ ಹೇಳುತ್ತ ಬಂದಿದ್ದಾರೆ. ಆದರೆ ಏನಾಯಿತು?
ದೆಹಲಿ ಚುನಾವಣೆಯಲ್ಲಿ ಬಿಜೆಪಿ ಸೋತಿದ್ದಾಗಿದೆ. ಇನ್ನಾದರೂ ನರೇಂದ್ರ ಮೋದಿ ತಮ್ಮ ದಿಕ್ಕನ್ನು ಬದಲಿಸಿಕೊಳ್ಳಬೇಕು. ಭಾಷಣಗಳಿಗೆ ಚಪ್ಪಾಳೆ ಬರಬಹುದು. ಆದರೆ ಮತಗಳು ಬರುವುದಿಲ್ಲ. ಈಗ ವಾರಾಣಸಿಯಲ್ಲೂ ಅದನ್ನೇ ಪುನರುಚ್ಚರಿಸಿದ್ದಾರೆ. ಹೀಗೆ ಮುಂದುವರಿದು ವಾರಾಣಸಿಯ ಚುನಾವಣೆಯಲ್ಲೂ ಸೋತರೆ ಏನು ಮಾಡುತ್ತೀರಿ ಎಂದು ಶಿವಸೇನೆ ಪ್ರಶ್ನಿಸಿದೆ.
ನೀವು ನಿಮ್ಮ ನಿರ್ಧಾರಗಳಿಂದ ಹಿಂದೆ ಸರಿಯುವುದು ಬೇಡ. ಆದರೆ ಹೋದಲ್ಲೆಲ್ಲ ಮಾಡುತ್ತಿರುವ ಒಂದೇ ತರಹದ ಭಾಷಣದಿಂದ ಹಿಂದೆ ಸರಿಯಿರಿ ಎಂದು ಹೇಳಿದೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × three =
Remember me
