ನಾಗಪುರ:ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಅವರ ಪುತ್ರ ಸಚಿವ ಆದಿತ್ಯ ಠಾಕ್ರೆ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದ ಬಿಜೆಪಿ ಕಾರ್ಯಕರ್ತನನ್ನು ಮತ್ತೆ ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಬಂಧಿತನನ್ನು ಬಿಜೆಪಿಯ ಐಟಿ ಸೆಲ್​ನ ಸದಸ್ಯ ಸಮೀತ್ ಥಾಕ್ಕರ್ ಎಂದು ಗುರುತಿಸಲಾಗಿದೆ.ಕಳೆದ ತಿಂಗಳು ಈ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದ ಸಮೀತ್ ಥಾಕ್ಕರ್ ಅವರನ್ನು ಈ ಹಿಂದೆಯೇ ಬಂಧಿಸಿ ಪ್ರಕರಣ ದಾಖಲಿಸಲಾಗಿತ್ತು. ಕೋರ್ಟ್​ಗೆ ಹಾಜರುಪಡಿಸಿದ್ದ ವೇಳೆ ಅಕ್ಟೋಬರ್ 5ರಂದು ಮುಂಬೈನ ವಿಪಿ ರಸ್ತೆಯಲ್ಲಿರುವ ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಅಲ್ಲದೆ, ಮೊಬೈಲ್ ಮತ್ತು ಲ್ಯಾಪ್​ಟಾಪ್ ಅನ್ನು ಪೊಲೀಸರಿಗೆ ಹಸ್ತಾಂತರಿಸುವಂತೆಯೂ ಕೋರ್ಟ್ ಸೂಚಿಸಿತ್ತು.
ಇದನ್ನೂ ಓದಿ:ಉಪಸಮರ| ರಾಜರಾಜೇಶ್ವರಿ ನಗರದಲ್ಲಿ ರಾರಾಜಿಸುವವರ್ಯಾರು?
ಆದರೆ, ಥಾಕ್ಕರ್ ಪೊಲೀಸ್ ಠಾಣೆಗೆ ಹಾಜರಾಗಿಲ್ಲ.ಮೊಬೈಲ್ ಮತ್ತು ಲ್ಯಾಪ್​ಟಾಪ್ ಅನ್ನು ಪೊಲೀಸರಿಗೆ ಹಸ್ತಾಂತರಿಸಿಲ್ಲ. ಹೀಗಾಗಿ ಮತ್ತೆ ಅವರನ್ನು ಬಂಧಿಸಬೇಕಾಗಿ ಬಂದಿದೆ. ಸ್ಥಳೀಯ ಶಿವಸೇನೆ ಕಾರ್ಯಕರ್ತರೊಬ್ಬರು ನೀಡಿದ ದೂರಿನ ಅನ್ವಯ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್)
ಕೊಡಗಿನಲ್ಲಿ ಸರಳ ದಸರಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × four =
Remember me
