ಸಿಂಗ್ರೌಲಿ:ಬಿಜೆಪಿ ಶಾಸಕರ ಪುತ್ರನೊಬ್ಬ ಬುಡಕಟ್ಟು ಜನಾಗಂದ ವ್ಯಕ್ತಿಗೆ ಗುಂಡು ಹಾರಿಸಿರುವ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ನಡೆದಿದೆ.ವಿವೇಕಾನಂದ್ ವೈಶ್ಯ(40) ಗುಂಡು ಹಾರಿಸಿದ ಆರೋಪಿಯಾಗಿದ್ದು, ಆತ ಬಿಜೆಪಿ ಶಾಸಕ ರಾಮ್ ಲಲ್ಲು ವೈಶ್ಯರ ಪುತ್ರನಾಗಿದ್ದಾನೆ. ಗುರುವಾರ ಸಂಜೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, 34 ವರ್ಷದ ಸೂರ್ಯ ಕುಮಾರ್ ಖೈರ್ವಾರ್​​ ಎಂಬಾತನ ಬಲಗೈ ಮಣಿಕಟ್ಟಿಗೆ ಗಾಯವಾಗಿದೆ.ಇದನ್ನೂ ಓದಿ:ಅಪ್ರಾಪ್ತ ವಯಸ್ಸಿನ ಮಗನನ್ನು ಥಳಿಸಿದ ತಂದೆ: ಕೋಲು ಮುರಿದರೂ ಬಿಡಲಿಲ್ಲ..
ಪೊಲೀಸರ ಪ್ರಕಾರ, ಆರೋಪಿಯು ಸ್ಥಳೀಯ ದೇವಸ್ಥಾನದ ಬಳಿಯ ಕಿರಿದಾದ ರಸ್ತೆಯಲ್ಲಿ ಜನರ ಗುಂಪಿನೊಂದಿಗೆ ವಾಗ್ವಾದ ನಡೆಸಿದರು. ಈ ವೇಳೆ ಸೂರ್ಯ ಕುಮಾರ್ ಬುಡಕಟ್ಟು ಜನಾಂಗದ ಗುಂಪಿನೊಂದಿಗೆ ಸೇರಿಕೊಂಡು ಜಗಳವಾಡಲು ಪ್ರಾರಂಭಿಸಿದರು. ಆಗ ಆರೋಪಿಯು, ಸೂರ್ಯ ಕುಮಾರ್ ಮೇಲೆ ಗುಂಡು ಹಾರಿಸಿದ್ದು ಗುಂಡು ಆತನ ಬಲಗೈ ಮಣಿಕಟ್ಟಿಗೆ ತಗುಲಿದೆ.ಕೂಡಲೇ ಸೂರ್ಯ ಕುಮಾರ್​ನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಆರೋಗ್ಯ ಸ್ಥಿರವಾಗಿದೆ ಎಂದು ಇನ್ಸ್‌ಪೆಕ್ಟರ್ ಪರಿಹಾರ್ ತಿಳಿಸಿದ್ದಾರೆ. ಘಟನೆಯ ನಂತರ, ಶಾಸಕರ ಪುತ್ರನ ವಿರುದ್ಧ ಪ್ರಕರಣ ದಾಖಲಾಗಿದ್ದು, ಈಗಾಗಲೇ ಆರೋಪಿಯು ಈ ಹಿಂದೆ ಮತ್ತೊಂದು ಪ್ರಕರಣದಲ್ಲಿ ಪ್ರಸ್ತುತ ಜಾಮೀನಿನ ಮೇಲೆ ಹೊರಗಿದ್ದಾನೆ. ರಾಮ್ ಲಲ್ಲು ಸಿಂಗ್ರೌಲಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ ಎಂದು ಇನ್ಸ್‌ಪೆಕ್ಟರ್ ಅಶೋಕ್ ಸಿಂಗ್ ಪರಿಹಾರ್ ಹೇಳಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + eight =
Remember me
