ನವದೆಹಲಿ:ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ದೇಶದ ಎಲ್ಲ ಭಾಗದಿಂದಲೂ ನಿಧಿ ಸಂಗ್ರಹ ಅಭಿಯಾನ ಆರಂಭವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಬಿಜೆಪಿ ವತಿಯಿಂದ ರಾಮ ಮಂದಿರ ನಿಧಿ ಸಂಗ್ರಹ ಅಭಿಯಾನ ಆರಂಭಿಸಲಾಗಿದ್ದು, ಮಾಜಿ ಕ್ರಿಕೆಟಿಗ ಹಾಗೂ ಬಿಜೆಪಿ ಸಂಸದ ಗೌತಮ್​ ಗಂಭೀರ್​ ಒಂದು ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.
ಇದನ್ನೂ ಓದಿ:ಇದು ಮಹಿಳೆಯರ ಮುಖಭಾವನೆಯನ್ನೇ ಗುರುತಿಸಿ ಪೊಲೀಸರಿಗೆ ಮಾಹಿತಿ ನೀಡುತ್ತದೆಯಂತೆ!
ಅಯೋಧ್ಯೆಯಲ್ಲಿ ಭವ್ಯವಾದ ದೇಗುಲ ನಿರ್ಮಾಣವಾಗುತ್ತಿದೆ. ಭಾರತೀಯರ ಕನಸು ನನಸಾಗುತ್ತಿದೆ. ಸಾಕಷ್ಟು ವರ್ಷಗಳ ವಿವಾದಕ್ಕೆ ತೆರೆ ಬಿದ್ದಿದೆ. ಇದು ಏಕತೆ ಮತ್ತು ಶಾಂತಿಗೆ ದಾರಿ ಮಾಡಿಕೊಡುತ್ತದೆ. ಈ ಪ್ರಯತ್ನದಲ್ಲಿ ನನ್ನ ಮತ್ತು ನನ್ನ ಕುಟುಂಬದಿಂದ ಒಂದು ಸಣ್ಣ ಕೊಡುಗೆಯಾಗಿ ಈ ಹಣವನ್ನು ಕೊಡುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ:VIDEO: ಐತಿಹಾಸಿಕ ಟೆಸ್ಟ್ ಸರಣಿ ಜಯಿಸಿ ತವರಿಗೆ ಮರಳಿದ ಅಜಿಂಕ್ಯ ರಹಾನೆಗೆ ಅದ್ದೂರಿ ಸ್ವಾಗತ..
ದೆಹಲಿಯಲ್ಲಿ ರಾಮ ಮಂದಿರ ನಿಧಿ ಸಂಗ್ರಹ ಅಭಿಯಾನವನ್ನು ಬಿಜೆಪಿ ಆರಂಭಿಸಿದೆ. 10, 100, 1000 ರೂಪಾಯಿಗಳ ಕೂಪನ್​ ನೀಡಿ ಮನೆ ಮನೆಗಳಿಂದ ನಿಧಿ ಸಂಗ್ರಹಿಸಲಾಗುತ್ತಿದೆ. ಒಂದು ಸಾವಿರ ರೂಪಾಯಿಗೂ ಅಧಿಕ ಹಣ ನೀಡುವವರ ಬಳಿ ಚೆಕ್​ ರೂಪದಲ್ಲಿ ನಿಧಿ ಸಂಗ್ರಹಿಸಲಾಗುತ್ತಿದೆ ಎಂದು ತಿಳಿಸಲಾಗಿದೆ. (ಏಜೆನ್ಸೀಸ್​)
ಫ್ರೀ ಇನ್ನರ್​ವೇರ್​ ಆಫರ್​ಗೆ ಮರುಳಾದ ಯುವತಿ! ಮುಂದೇನಾಯ್ತು ಕೇಳಿದರೆ ಶಾಕ್​ ಆಗೋದು ಗ್ಯಾರಂಟಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × two =
Remember me
