ಕೋಲ್ಕತ:ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೆ ಇನ್ನೂ ತಿಂಗಳುಗಳು ಬಾಕಿಯಿವೆ. ಈಗಾಗಲೇ ಪಕ್ಷಗಳು ಪ್ರಚಾರ ಸಭೆಗಳನ್ನು ಆರಂಭಿಸಿದ್ದು, ನಾಯಕರುಗಳ ಪಕ್ಷಾಂತರವೂ ಆರಂಭವಾಗಿದೆ. ಇತ್ತೀಚೆಗಷ್ಟೇ ಟಿಎಂಸಿ ಪಕ್ಷದ ಹಲವು ಶಾಸಕರು ಪಕ್ಷಕ್ಕೆ ಗುಡ್​ ಬೈ ಹೇಳಿ ಬಿಜೆಪಿ ಸೇರಿದ್ದಾರೆ. ಇದೀಗ ಅದರ ಬೆನ್ನಲ್ಲೇ ಮತ್ತೊಂದು ರೋಚಕ ಪಕ್ಷಾಂತರ ರಾಜ್ಯದಲ್ಲಿ ಕಾಣಿಸಿಕೊಂಡಿದೆ. ಬಿಜೆಪಿ ಸಂಸದರೊಬ್ಬರ ಪತ್ನಿ ಟಿಎಂಸಿ ಸೇರುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.
ಇದನ್ನೂ ಓದಿ:ಮಕ್ಕಳಾಗಿಲ್ಲವೆಂದು ಇನ್ನೊಂದು ಮದ್ವೆಯಾದರೆ ಇಬ್ರಿಗೂ ಮಕ್ಕಳಾದವು: ಈಗ ಆಸ್ತಿಯ ಭಾಗ ಹೇಗೆ?
ಬಿಜೆಪಿ ಸಂಸದ ಸೌಮಿತ್ರ ಖಾನ್​ ಅವರ ಪತ್ನಿ ಸುಜಾತಾ ಮೊಂಡಾಲ್​ ಖಾನ್​ ಅವರು ಸೋಮವಾರ ಟಿಎಂಸಿ ಸೇರಿದ್ದಾರೆ. ಬಿಜೆಪಿಯಲ್ಲಿ ಮಹಿಳೆಯರಿಗೆ ಗೌರವವಿಲ್ಲ. ಅದೇ ಕಾರಣದಿಂದಾಗಿ ನಾನು ಟಿಎಂಸಿ ಸೇರ್ಪಡೆಗೊಳ್ಳುತ್ತಿದ್ದೇನೆ. ಇಲ್ಲಿ ಹೆಣ್ಣಿಗೆ ಗೌರವವಿದೆ ಎಂದು ಟಿಎಂಸಿ ಸೇರಿರುವ ಸುಜಾತ ಹೇಳಿದ್ದಾರೆ.
ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಯಾರೆನ್ನುವುದೇ ಗೊತ್ತಿಲ್ಲ. ಅಲ್ಲಿ ಆರು ಮುಖ್ಯಮಂತ್ರಿ ಅಭ್ಯರ್ಥಿಗಳಿದ್ದರೆ, 14 ಉಪಮುಖ್ಯಮಂತ್ರಿ ಅಭ್ಯರ್ಥಿಗಳಿದ್ದಾರೆ. ಯಾರಾದರೂ ನನ್ನನ್ನು ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂದು ಕೇಳಿದರೆ ನನ್ನ ಬಳಿ ಉತ್ತರವೇ ಇಲ್ಲ ಎಂದು ಅವರು ದೂರಿದ್ದಾರೆ. ಪತ್ನಿಯಂತೆ ಸಂಸದ ಸೌಮಿತ್ರ ಅವರೂ ಟಿಎಂಸಿ ಸೇರಲಿದ್ದಾರೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಮುಂದೆ ಆಗುವುದರ ಬಗ್ಗೆ ನನಗೆ ತಿಳಿದಿಲ್ಲ ಎಂದು ಉತ್ತರಿಸಿದ್ದಾರೆ.
ಇದನ್ನೂ ಓದಿ:ಬಿಜೆಪಿ ನಾಯಕರ ಕ್ರಿಮಿನಲ್​ ಕೇಸ್​ ವಾಪಸ್ ಪ್ರಕರಣ- ಸರ್ಕಾರಕ್ಕೆ ಶಾಕ್​ ಕೊಟ್ಟ ಹೈಕೋರ್ಟ್
ಸೌಮಿತ್ರ ಮತ್ತು ಸುಜಾತ ಅವರ ದಾಂಪತ್ಯದಲ್ಲಿ ಬಿರುಕಿದ್ದು, ಸದ್ಯದಲ್ಲೇ ದಂಪತಿ ವಿಚ್ಛೇದನ ಪಡೆಯಲಿದ್ದಾರೆ ಎನ್ನುವ ಸುದ್ದಿಗಳೂ ಹರಿದಾಡಿದೆ. ಆದರೆ ಈ ಕುರಿತಾಗಿ ಸಂಸದರು ಈವರೆಗೂ ಯಾವುದೇ ಹೇಳಿಕೆ ನೀಡಿಲ್ಲ. (ಏಜೆನ್ಸೀಸ್​​)
ಮಾರ್ಕ್ಸ್​ ಬೇಕೆಂದರೆ ನನ್ನ ಜತೆ ಸೆಕ್ಸ್​ ಮಾಡಿ! ಸರ್ಕಾರಿ ಶಾಲಾ ಶಿಕ್ಷಕನ ಬೇಡಿಕೆಗೆ ಬೆಚ್ಚಿದ ವಿದ್ಯಾರ್ಥಿನಿಯರು

ಸೆಕ್ಸ್​ ವರ್ಕರ್​ ಇರಲಿಲ್ಲ, ಹೋಟೆಲ್​ ಸಿಬ್ಬಂದಿಯನ್ನೇ ರೇಪ್​ ಮಾಡಿಬಿಟ್ಟರು! ವಿಚಾರಣೆ ವೇಳೆ ಹೊರಬಿತ್ತು ಭಯಾನಕ ರಹಸ್ಯ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × three =
Remember me
