ನವದೆಹಲಿ:ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುಲಿರುವ ಛತ್ತೀಸ್​ಗಢ ಹಾಗೂ ಮಧ್ಯಪ್ರದೇಶಕ್ಕೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಛತ್ತೀಸ್​ಗಢಕ್ಕೆ 21 ಹಾಗೂ ಮಧ್ಯಪ್ರದೇಶದಲ್ಲಿ 39 ಹುರಿಯಾಳುಗಳನ್ನು ಪಕ್ಷದಿಂದ ಕಣಕ್ಕಿಳಿಸಲಾಗಿದೆ.
ಬಿಡುಗಡೆಯಾಗಿರುವ ಪಟ್ಟಿಯಲ್ಲಿ ಪ್ರತಿ ರಾಜ್ಯದಲ್ಲಿ ಐವರು ಮಹಿಳೆಯರಿಗೆ ಟಿಕೆಟ್​ ನೀಡಲಾಗಿದ್ದು, ಇನ್ನಷ್ಟು ಅಭ್ಯರ್ಥಿಗಳ ಪಟ್ಟಿಯನ್ನು ಚುನಾವಣೆ ಘೋಷಣೆಯಾಗುವ ಮುನ್ನವೇ ಪ್ರಕಟಿಸುವ ಸಾಧ್ಯತೆ ಹೆಚ್ಚಿದೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನೇತೃತ್ವದಲ್ಲಿ ನಡೆದ ಕೇಂದ್ರ ಚುನಾವಣಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಹೆಸರುಗಳನ್ನು ಅಂತಿಮ ಮಾಡಲಾಗಿದೆ. ಸಭೆಯಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್​ ಷಾ, ರಕ್ಷಣಾ ಮಂತ್ರಿ ರಾಜನಾಥ್​ ಸಿಂಗ್​ ಸೇರಿದಂತೆ ಹಿರಿಯ ನಾಯಕರು ಉಪಸ್ಥಿತರಿದ್ದರು.
भाजपा केन्द्रीय चुनाव समिति ने छत्तीसगढ़ एवं मध्य प्रदेश में होने वाले आगामी विधानसभा चुनाव 2023 के लिए निम्नलिखित नामों पर अपनी स्वीकृति प्रदान की है। (2/2)pic.twitter.com/VsjOfj3DVe
ಇದನ್ನೂ ಓದಿ:ಚುನಾವಣಾ ಸಮಿತಿಗಳಿಂದ ರಾಜಸ್ಥಾನ ಮಾಜಿ ಸಿಎಂ ವಸುಂಧರಾ ರಾಜೆಯನ್ನು ಕೈಬಿಟ್ಟ ಬಿಜೆಪಿ
ವರ್ಷಾಂತ್ಯದಲ್ಲಿ ನಡೆಯುವ ಪಂಚರಾಜ್ಯ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸುವ ಬಿಜೆಪಿ ನಾಯಕರು ಮುಂಬರುವ ಲೋಕಸಭೆ ಎಲೆಕ್ಷನ್​ಗೆ ಪೂರ್ವಭಾವಿ ಸಿದ್ದತೆ ನಡೆಸುತ್ತಿದ್ದಾರೆ. ಪಂಚರಾಜ್ಯ ಚುನಾವಣೆಗಳ ಫಲಿತಾಂಶವು ಮುಂಬರುವ ಲೋಕಸಭೆ ಎಲೆಕ್ಷನ್​ ಮೇಲೆ ಪರಿಣಾಮ ಬೀರಲಿದ್ದು, ಈ ನಿಟ್ಟಿನಲ್ಲಿ ಬಿಜೆಪಿ ನಾಯಕರು ಈಗಿನಿಂದಲ್ಲೇ ಕಾರ್ಯಪ್ರವೃತ್ತರಾಗಿದ್ದಾರೆ.
ಛತ್ತೀಸ್​ಗಢ, ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ, ಮಿಜೋರಾಂಗೆ ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಐದು ರಾಜ್ಯಗಳ ಪೈಕಿ ಬಿಜೆಪಿ ಮಧ್ಯಪ್ರದೇಶದಲ್ಲಿ ಮಾತ್ರ ಅಧಿಕಾರದಲ್ಲಿದ್ದು, ಉಳಿದ ಕಡೆ ತನ್ನ ನೆಲೆಯನ್ನು ವಿಸ್ತರಿಸಲು ಭರದಿಂದ ಪ್ರಚಾರ ನಡೆಸುತ್ತಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 3 =
Remember me
