ನವದೆಹಲಿ:ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಪಶ್ಚಿಮ ಬಂಗಾಳಕ್ಕೆ ಪ್ರವಾಸ ತೆರಳಿದ್ದಾಗ, ಅವರ ಬೆಂಗಾವಲು ಪಡೆಯ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿರುವ ವಿಚಾರ ನಿಮಗೆಲ್ಲರಿಗೂ ಗೊತ್ತಿದೆ. ಒಂದು ದಾಳಿಯಿಂದ ಸುಧಾರಿಸಿಕೊಳ್ಳುತ್ತಿರುವ ನಡ್ಡಾ ಅವರಿಗೆ ಇದೀಗ ಮತ್ತೊಂದು ಸಮಸ್ಯೆ ಎದುರಾಗಿದೆ.
ಇದನ್ನೂ ಓದಿ:‘ಸಂಜನಾಗೆ ಬಲವಂತವಾಗಿ ಮತಾಂತರ ಮಾಡಿಸಲಾಗಿತ್ತು!’ ದಾಖಲಾಯ್ತು ಹೊಸ ದೂರು
ನಡ್ಡಾ ಅವರಿಗೆ ಕರೊನಾ ಸೋಂಕು ದೃಢವಾಗಿದೆ. ಈ ಕುರಿತಾಗಿ ಟ್ವಿಟ್ಟರ್​ನಲ್ಲಿ ಅವರು ಮಾಹಿತಿ ನೀಡಿದ್ದಾರೆ. ‘ನನಗೆ ಕರೊನಾ ಸೋಂಕಿನ ಆರಂಭಿಕ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿಕೊಂಡಿದ್ದೇನೆ. ಸೋಂಕಿರುವುದು ವರದಿಯಲ್ಲಿ ದೃಢವಾಗಿದೆ. ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲೇ ಕ್ವಾರಂಟೈನ್​ ಆಗಿದ್ದೇನೆ. ಕಳೆದ ಕೆಲ ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕರೊನಾ ಪರೀಕ್ಷೆ ಮಾಡಿಸಿಕೊಳ್ಳಿ’ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ:ಧರ್ಮಪುರಿಯಲ್ಲಿ ಭೀಕರ ಅಪಘಾತ; ಎಂಟುಕ್ಕೂ ಹೆಚ್ಚು ವಾಹನ ನುಜ್ಜುಗುಜ್ಜು, ನಾಲ್ವರು ಬಲಿ
ಇತ್ತೀಚೆಗೆ ನಡ್ಡಾ ಅವರು ಪಶ್ಚಿಮ ಬಂಗಾಳಕ್ಕೆ ಎರಡು ದಿನದ ಪ್ರವಾಸದ ಮೇಲೆ ತೆರಳಿದ್ದರು. ಈ ಸಂದರ್ಭದಲ್ಲಿ ಅವರು ಡೈಮಂಡ್​ ಹಾರ್ಬರ್​ ಪ್ರದೇಶಕ್ಕೆ ತೆರಳುತ್ತಿದ್ದಾಗ ಅವರ ಬೆಂಗಾವಲು ಪಡೆಯ ಮೇಲೆ ಕಿಡಿಗೇಡಿಗಳು ದಾಳಿ ಇಟ್ಟಿಗೆ ಮತ್ತು ಕಲ್ಲಿನಿಂದ ದಾಳಿ ನಡೆಸಿದ್ದಾರೆ. ಈ ಹಿಂದೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಮತ್ತು ಪಶ್ಚಿಮ ಬಂಗಾಳ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಸೇರಿದಂತೆ ಪಕ್ಷದ ಹಲವು ನಾಯಕರ ಮೇಲೆ ಇದೆ ರೀತಿಯ ದಾಳಿ ನಡೆದಿದೆ. ಇದು ಆಡಳಿತದಲ್ಲಿರುವ ಟಿಎಂಸಿ ಪಕ್ಷದ ಗೂಂಡಾಗಳು ಕೆಲಸ ಎಂದು ಬಿಜೆಪಿ ಆರೋಪಿಸಿದೆ. (ಏಜೆನ್ಸೀಸ್)
कोरोना के शुरूआती लक्षण दिखने पर मैंने टेस्ट करवाया और रिपोर्ट पॉजिटिव आई है। मेरी तबीयत ठीक है, डॉक्टर्स की सलाह पर होम आइसोलेशन में सभी दिशा- निर्देशो का पालन कर रहा हूँ। मेरा अनुरोध है, जो भी लोग गत कुछ दिनों में संपर्क में आयें हैं, कृपया स्वयं को आइसोलेट कर अपनी जाँच करवाएं।
— Jagat Prakash Nadda (@JPNadda)December 13, 2020

ಇನ್​ಸ್ಟಾಗ್ರಾಂ ಸ್ಟಾರ್​ಗೆ 10 ವರ್ಷ ಜೈಲು! ವಿಚಿತ್ರವಾಗಿ ಕಾಣಲು ಹೋಗಿ ಜೈಲು ಸೇರಿದ ಯುವತಿ

ಮದುವೆಗೆ ಮೂರು ದಿನವಿದ್ದಾಗ ಮರ್ಮಾಂಗವೇ ಕಟ್! 1 ಲಕ್ಷಕ್ಕಾಗಿ ಜೀವನವನ್ನೇ ಹಾಳು ಮಾಡಿಕೊಂಡ ಯುವಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + 18 =
Remember me
