ತಿರುವನಂತಪುರಂ:ವಯನಾಡು ಭೂಕುಸಿತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ವಿವಿಧ ವಲಯಗಳ ಬೇಡಿಕೆಯನ್ನು ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಭಾನುವಾರ(ಆಗಸ್ಟ್​​4) ತಿರಸ್ಕರಿಸಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಅಡಿಯಲ್ಲಿ ಅಂತಹ ಯಾವುದೇ ನೀತಿ ಅಸ್ತಿತ್ವದಲ್ಲಿಲ್ಲ. ಯುಪಿಎ ಸರ್ಕಾರದ ಅವಧಿಯಿಂದಲೂ ನೀತಿ ಬದಲಾಗಿಲ್ಲ ಎಂದು ಹೇಳಿದೆ.
ಇದನ್ನು ಓದಿ:2029ರ ಚುನಾವಣೆಯಲ್ಲೂ ಗೆದ್ದು ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ; ಅಮಿತ್​ ಷಾ
ಬಿಜೆಪಿಯ ಹಿರಿಯ ನಾಯಕ ವಿ.ಮುರಳೀಧರನ್ ಅವರು ಸಾಮಾಜಿಕ ಜಾಲತಾಣದಲ್ಲಿ 2013ರ ಸಂಸತ್ತಿನ ದಾಖಲೆಯನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಆಗಿನ ಗೃಹ ಖಾತೆಯ ರಾಜ್ಯ ಸಚಿವ ಮುಲ್ಲಪ್ಪಲ್ಲಿ ರಾಮಚಂದ್ರನ್ ಅವರು ನೈಸರ್ಗಿಕ ವಿಕೋಪವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಯಾವುದೇ ಅವಕಾಶವಿಲ್ಲ ಎಂದು ಹೇಳಿದ್ದಾರೆ.
ರಾಷ್ಟ್ರೀಯ ವಿಪತ್ತು ಎಂಬ ಪರಿಕಲ್ಪನೆಯು ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಅಡಿಯಲ್ಲಿ ಅಸ್ತಿತ್ವದಲಿಲ್ಲ. ಇದು ಯುಪಿಎ ಸರ್ಕಾರದ ಅವಧಿಯಿಂದಲೂ ಇದೆ. ಇದನ್ನು ಆಗಿನ ಕೇಂದ್ರ ಗೃಹ ಸಚಿವ ಮುಲ್ಲಪ್ಪಲ್ಲಿ ರಾಮಚಂದ್ರನ್ ಅವರು 2013 ಆಗಸ್ಟ್ 6ರಂದು ಲೋಕಸಭೆಯಲ್ಲಿ ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸುವಾಗ ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದು ಮುರಳೀಧರನ್​ ಹೇಳಿದರು.
ರಾಷ್ಟ್ರೀಯ ವಿಪತ್ತು ಎಂಬ ಅಧಿಕೃತ ಹೆಸರಿಲ್ಲದಿದ್ದರೂ, ಪ್ರತಿ ದುರಂತವನ್ನು ಅದರ ತೀವ್ರತೆಗೆ ಅನುಗುಣವಾಗಿ ಪರಿಹರಿಸಲಾಗುತ್ತದೆ. ಈ ದುರಂತದ ಸಮಯದಲ್ಲಿ ಆಧಾರರಹಿತ ವಿವಾದಗಳನ್ನು ಸೃಷ್ಟಿಸಲು ಪ್ರಯತ್ನಿಸಬೇಡಿ. ಸಂತ್ರಸ್ತ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಎಲ್ಲಾ ಅಗತ್ಯ ನೆರವು ನೀಡಲಿದೆ ಎಂದು ಭರವಸೆ ನೀಡಿದರು. (ಏಜೆನ್ಸೀಸ್​​)
ಧಾರ್ಮಿಕ ಸಮಾರಂಭದಲ್ಲಿ ದೇವಾಲಯದ ಗೋಡೆ ಕುಸಿದು 9 ಮಕ್ಕಳು ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + twelve =
Remember me
