ನವದೆಹಲಿ:ವರ್ಷಾಂತ್ಯದಲ್ಲಿ ನಡೆಯಲಿರುವ ಮಧ್ಯಪ್ರದೇಶ ರಾಜ್ಯ ವಿಧಾನಸಭೆ ಚುನವಣೆ ಭಾರೀ ಜಿದ್ದಿನಿಂದ ಕೂಡಿದ್ದು, ಆಡಳಿತರೂಢ ಬಿಜೆಪಿ ಹಾಗೂ ಕಾಂಗ್ರೆಸ್​ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಇನ್ನೂ ಚುನಾವಣೆಗೆ ಸಂಬಂಧಿಸಿದಂತೆ ಆಡಳಿತರೂಢ ಬಿಜೆಪಿ ಇಂದು ತನ್ನ ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಇಂದು (ಅಕ್ಟೋಬರ್ 21)ರಂದು ಬಿಡುಗಡೆಯಾಗಿರುವ ಐದನೇ ಪಟ್ಟಿಯಲ್ಲಿ ಬಿಜೆಪಿ 92 ಅಭ್ಯರ್ಥಿಗಳ ಹೆಸರನ್ನೂ ಘೋಷಿಸಿದೆ. ಈ ಮೂಲಕ 230 ಕ್ಷೇತ್ರಗಳ ಪೈಕಿ ಬಿಜೆಪಿ 228 ಅಭ್ಯರ್ಥಿಗಳನ್ನು ಘೋಷಿಸಿದೆ. ಗುಣ ಹಾಗೂ ವಿಧಿಶ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಬೇಕಿದೆ.
भारतीय जनता पार्टी की केंद्रीय चुनाव समिति ने मध्य प्रदेश में होने वाले आगामी विधानसभा चुनाव-2023 के लिए निम्नलिखित नामों पर अपनी स्वीकृति प्रदान की। (2/2)pic.twitter.com/CKGwe5vTrC
ಇದನ್ನೂ ಓದಿ:ನಕಲಿ ವೋಟರ್ ಐಡಿ ತಯಾರಿಕೆ ಪ್ರಕರಣ; ಕರ್ನಾಟಕದಲ್ಲಿ ಕಾಂಗ್ರೆಸ್​ ಗೆದ್ದ ಫಾರ್ಮುಲಾ ಈಗ ಬಯಲಾಗಿದೆ: ಬಿಜೆಪಿ
ಇಂದು (ಅಕ್ಟೋಬರ್ 21) ಬಿಡುಗಡೆಯಾದ ಐದನೇ ಪಟ್ಟಿಯಲ್ಲಿ 12 ಮಹಿಳೆಯರಿಗೆ ಟಿಕೆಟ್​ ನೀಡಲಾಗಿದ್ದು, ಹಲವು ಮಂದಿ ಹಾಲಿ ಶಾಸಕರಿಗೆ ಟಿಕೆಟ್​ ನಿರಾಕರಿಸಲಾಗಿದೆ. ಈ ಪೈಕಿ ಮಾಜಿ ಸಚಿವ ಜಯಂತ್ ಮಲೈಯಾ (75) ಬಿಜೆಪಿ ಟಿಕೆಟ್​ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದು, ಜ್ಯೋತಿರಾದಿತ್ಯ ಸಿಂಧಿಯಾ ಬೆಂಬಲಿಗರಿಗೆ ಬಿಜೆಪಿ ಹೈಕಮಾಂಡ್ ಮಣೆ ಹಾಕಿದೆ.
ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಪಂಚರಾಜ್ಯ ಚುನಾವಣೆ ಮುಂಬರುವ ಲೋಕಸಭೆ ಚುನಾವಣೆಗೆ ಸೆಮಿಫಿನಾಲೆ ಎಂದೇ ಬಿಂಬಿತವಾಗಿದೆ. 230 ಸದಸ್ಯಬಲದ ಮಧ್ಯಪ್ರದೇಶ ವಿಧಾನಸಭೆಗೆ ನವೆಂಬರ್ 17ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 3ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 1 =
Remember me
