ನವದೆಹಲಿ:ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗಲೇ ಬಿಜೆಪಿ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದು, ಮಾಜಿ ಐಪಿಎಸ್​ ಅಧಿಕಾರಿ ಅಣ್ಣಾಮಲೈ ಸೇರಿದಂತೆ ಪ್ರಮುಖರಿಗೆ ಟಿಕೆಟ್​ ಘೋಷಿಸಿದೆ.
ಬಿಡುಗಡೆ ಮಾಡಲಾಗಿರುವ ಮೂರನೇ ಪಟ್ಟಿಯಲ್ಲಿ ತಮಿಳುನಾಡಿನ 9 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದ್ದು, ಕರ್ನಾಟಕದ ಯಾವ ಕ್ಷೇತ್ರಗಳಿಗೂ ಈ ಪಟ್ಟಿಯಲ್ಲಿ ಅಭ್ಯರ್ಥಿ ಘೋಷಣೆಯಾಗಿಲ್ಲ.
ಇದನ್ನೂ ಓದಿ:ಸಿಎಸ್​ಕೆ ನಾಯಕತ್ವ ಹಸ್ತಾಂತರಿಸಿದ ಧೋನಿ; ನೂತನ ಸಾರಥಿ ಯಾರು ಗೊತ್ತಾ
ಮೂರನೇ ಪಟ್ಟಿಯೊಂದಿಗೆ ಬಿಜೆಪಿ ಇಲ್ಲಿವರೆಗೆ ಒಟ್ಟು 276 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸುದಂತಾಗುತ್ತದೆ. ಇನ್ನೂ 267 ಕ್ಷೇತ್ರಗಳ ಟಿಕೆಟ್ ಘೋಷಣೆ ಬಾಕಿಯಿದೆ. ಕರ್ನಾಟಕದ 20 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿ ಘೋಷಿಸಿದ್ದು, 5 ಕ್ಷೇತ್ರಗಳನ್ನು ಬಾಕಿ ಉಳಿಸಿಕೊಂಡಿದೆ.
ಚೆನ್ನೈ ದಕ್ಷಿಣದಿಂದ ಇತ್ತೀಚೆಗೆ ತೆಲಂಗಾಣ ರಾಜ್ಯಪಾಲ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದ ತಮಿಳಿಸೈ ಸೌಂದರರಾಜನ್ ಸ್ಪರ್ಧಿಸಲಿದ್ದಾರೆ. ಉಳಿದಂತೆ ಚೆನ್ನೈ ಉತ್ತರ, ಕೃಷ್ಣಗಿರಿ, ವೆಲ್ಲೂರು, ನೀಲಗಿರಿಸ್, ಕೊಯಮತ್ತೂರು, ಪೆರಂಬದೂರು. ತೂತುಕುಡಿ, ಕನ್ಯಾಕುಮಾರಿ ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 5 =
Remember me
