ಕೋಲ್ಕತ:ಪಶ್ಚಿಮ ಬಂಗಾಳದ ಟಿಎಂಸಿ ಪಕ್ಷದಿಂದ ಬಿಜೆಪಿಗೆ ಬರಲಿಚ್ಛಿಸುವ ಎಲ್ಲ ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗದು ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ. ಟಿಎಂಸಿಯ ಹೊಲಸು ರಾಜಕಾರಣಿಗಳು ನಮಗೆ ಬೇಕಿಲ್ಲ, ಇನ್ನು ಮುಂದೆ ಅವರನ್ನು ಸಾಮೂಹಿಕ ಸೇರ್ಪಡೆ ಮಾಡಿಸಿಕೊಳ್ಳಲಾಗದು ಎಂದು ತಿಳಿಸಲಾಗಿದೆ.
ಬಿಜೆಪಿಯನ್ನು ಟಿಎಂಸಿ ಪಕ್ಷದ ಬಿ ಟೀಂ ಮಾಡಲು ನಾವು ಸಿದ್ಧರಿಲ್ಲ. ಅಲ್ಲಿ ದೇಶದ್ರೋಹದ ಕೆಲಸ ಮಾಡಿ ಈಗ ನಮ್ಮ ಪಕ್ಷಕ್ಕೆ ಸೇರಲಿಚ್ಛಿಸುತ್ತಿರುವವರನ್ನು ನಾವು ಕರೆದುಕೊಳ್ಳುವುದಿಲ್ಲ. ಹಾಗಾಗಿ ಇನ್ನು ಮುಂದೆ ಸಾಮೂಹಿಕ ಸೇರ್ಪಡೆಯನ್ನು ಮಾಡಿಕೊಳ್ಳುವುದಿಲ್ಲ. ವೈಯಕ್ತಿಕವಾಗಿ ಸೇರ್ಪಡಿಸಿಕೊಳ್ಳಲಾಗುವುದು. ಅವರನ್ನೂ ಸಹ ಸ್ಥಳೀಯ ನಾಯಕರೊಂದಿಗೆ ಚರ್ಚೆ ನಡೆಸಿ, ಪರಿಶೀಲನೆ ನಡೆಸಿದ ನಂತರವೇ ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್​ ವಿಜಯವರ್ಗೀಯ ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಇನ್ನು ಕೆಲವೇ ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಬಿಜೆಪಿ ಕನಿಷ್ಠ 200 ಸ್ಥಾನ ಗೆಲ್ಲುವುದಾಗಿ ಭರವಸೆ ವ್ಯಕ್ತಪಡಿಸಿದೆ. ಈಗಾಗಲೇ ಟಿಎಂಸಿಯ ಹತ್ತಾರು ನಾಯಕರು ಪಕ್ಷ ತೊರೆದು ಬಿಜೆಪಿ ಸೇರಲಾರಂಭಿಸಿದ್ದಾರೆ. (ಏಜೆನ್ಸೀಸ್​)
ಲವ್ ಜಿಹಾದ್ ಕುರಿತ ಕಾಯ್ದೆ ಬಗ್ಗೆ ತನ್ನ ನಿಲುವು ಸ್ಪಷ್ಟಪಡಿಸಿದ ಕೇಂದ್ರ ಗೃಹ ಸಚಿವಾಲಯ; ರಾಜ್ಯಗಳತ್ತ ಬೊಟ್ಟು…

ಲಿವ್​ ಇನ್​ ರಿಲೇಷನ್​ಶಿಪ್​ನಲ್ಲಿದ್ದ ಮಹಿಳೆ ಮತ್ತು ಆಕೆಯ ತಾಯಿಯ ಕೊಲೆ! ಅಪ್ರಾಪ್ತ ಮಗುವಿಗೂ ಲೈಂಗಿಕ ಕಿರುಕುಳ ನೀಡಿದ ಪಾಪಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + eleven =
Remember me
