ನವದೆಹಲಿ:ಭಾರತ-ಚೀನಾ ಗಡಿಯಲ್ಲಿ ಬಿಕ್ಕಟ್ಟು ಉಂಟಾಗಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ಚೀನಾ ವಸ್ತುಗಳ ಬಹಿಷ್ಕಾರದ ಕೂಗು ಕೇಳಿಬರುತ್ತಿದೆ. ಈ ಮಧ್ಯೆ ಕೇಂದ್ರ ಸರ್ಕಾರ ಚೀನಾದ 59 ಆ್ಯಪ್​ಗಳನ್ನು ನಿಷೇಧಿಸಿದೆ.
ಈಗ ಇದೇ ವಿಚಾರವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿ ಟ್ವೀಟ್​ ಮೂಲಕ ಕೇಂದ್ರ ಸರ್ಕಾರ ಮತ್ತು ಪ್ರಧಾನಮಂತ್ರಿ ಮೋದಿಯವರ ವಿರುದ್ಧ ವ್ಯಂಗ್ಯವಾಡಿದ್ದಾರೆ. ಹೇಳುವುದು ಒಂದು, ಮಾಡುವುದು ಮತ್ತೊಂದು ಎಂದು ಟೀಕಿಸಿದ್ದಾರೆ.ಕಾಂಗ್ರೆಸ್​ ನೇತೃತ್ವದ ಯುಪಿಎ ಸರ್ಕಾರದ ಆಡಳಿತವಿದ್ದಾಗಿಕಿಂತ, ಈಗ ಎನ್​ಡಿಎ ಸರ್ಕಾರದ ಅವಧಿಯಲ್ಲೇ ಚೀನಾ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುವ ಪ್ರಮಾಣ ಹೆಚ್ಚಾಗಿದೆ ಎಂದು ಒಂದು ಗ್ರಾಫ್​ ಫೋಟೋವನ್ನು ಪೋಸ್ಟ್ ಮಾಡುವ ಮೂಲಕ ಹೇಳಿದ್ದಾರೆ.ಬಿಜೆಪಿ ಬಾಯಲ್ಲಿ ಮೇಕ್​ ಇನ್​ ಇಂಡಿಯಾ ಎನ್ನುತ್ತದೆ. ಆದರೆ ಅನೇಕ ವಸ್ತುಗಳನ್ನು ಚೀನಾದಿಂದ ಖರೀದಿಸುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.ಇದನ್ನೂ ಓದಿ:ಪಾಕ್​​​ನಿಂದ 38 ಭಾರತೀಯ ಅಧಿಕಾರಿಗಳು ವಾಪಸ್; ಬಸ್​, ಟ್ರಕ್​​ನಲ್ಲಿ ಗಡಿ ತಲುಪಿದ ಸಿಬ್ಬಂದಿ
ಯುಪಿಎ ಸರ್ಕಾರವಿದ್ದಾಗ ಚೀನಾದಿಂದ ವಸ್ತುಗಳನ್ನು ಆಮದು ಮಾಡಿಕೊಳ್ಳುವ ಪ್ರಮಾಣ ಶೇ.12-13ರಷ್ಟು ಇತ್ತು. 2014ರ ನಂತರ, ಅಂದರೆ ಎನ್​ಡಿಎ ಸರ್ಕಾರ ಆಡಳಿತಕ್ಕೆ ಬಂದ ನಂತರ ಆಮದು ಪ್ರಮಾಣ ಹೆಚ್ಚುತ್ತ ಹೋಗಿ, ಈಗ ಶೇ.17-18ಕ್ಕೆ ಬಂದು ತಲುಪಿದೆ ಎಂದು ರಾಹುಲ್​ ಗಾಂಧಿಯವರು ಪೋಸ್ಟ್​ ಮಾಡಿದ ಗ್ರಾಫ್​ನಲ್ಲಿ ತೋರಿಸಲಾಗಿದೆ.ಇದನ್ನೂ ಓದಿ:ಕಾಗೆಗಳ ತಂಟೆಗೆ ಹೋಗಬೇಡಿ..ಅದನ್ನು ಹಿಡಿದು ಹಿಂಸಿಸುವ ಮುನ್ನ ಈ ಸ್ಟೋರಿ ಓದಿ…
ಭಾರತದ 20 ಯೋಧರನ್ನು ಚೀನಾ ಹತ್ಯೆಗೈದ ದಿನದಿಂದಲೂ ರಾಹುಲ್​ ಗಾಂಧಿ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿಯವರ ವಿರುದ್ಧ ಟ್ವೀಟ್​ ಮೂಲಕ ವಾಗ್ದಾಳಿ ನಡೆಸುತ್ತಲೇ ಇದ್ದಾರೆ. (ಏಜೆನ್ಸೀಸ್​)
VIDEO| ನೋಡ ನೋಡುತ್ತಿದಂತೆಯೇ ನಡುರಸ್ತೆಯಲ್ಲೇ ಕಬ್ಬಿನ ಲಾರಿ ಪಲ್ಟಿ: ಚಾಲಕ, ಕ್ಲೀನರ್ ಪಾರಾಗಿದ್ಹೇಗೆ?​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
