ತಿರುವನಂತಪುರಂ: ಮುಂದಿನ ತಿಂಗಳು ಕೇರಳ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಬಿಜೆಪಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಮೆಟ್ರೊ ಮ್ಯಾನ್ ಇ ಶ್ರೀಧರನ್ ಅವರನ್ನು ಘೋಷಿಸಿದೆ. ಆದರೆ ಬಿಜೆಪಿಯ ಈ ನಿರ್ಧಾರವನ್ನು ಬಿಜೆಪಿ ಹಿರಿಯ ನಾಯಕರೇ ಆಗಿರುವ ಸುಬ್ರಮಣಿಯನ್ ಸ್ವಾಮಿ ಅವರು ವಿರೋಧಿಸಿದ್ದಾರೆ.
ಹೌದು, ಇ ಶ್ರೀಧರನ್ ಅವರು ಕೇರಳ ಬಿಜೆಪಿ ಸಿಎಂ ಅಭ್ಯರ್ಥಿ ಆಗುವುದಕ್ಕೆ ಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.
‘ಕೇರಳದ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಎಂದು 89 ವರ್ಷದ ಶ್ರೀಧರನ್ ಅವರನ್ನು ಬಿಜೆಪಿ ಘೋಷಿಸಿದೆ. ಇದರಿಂದ 75 ವರ್ಷ ಮೀರಿದ ಬಿಜೆಪಿ ನಾಯಕರನ್ನು ಮಾರ್ಗದರ್ಶನ ಮಂಡಳಿಯ ಹೆಸರಿನಲ್ಲಿ ನಿವೃತ್ತಿಯ ಅಂಚಿಗೆ ತಳ್ಳುವ ತನ್ನ ನಿರ್ಧಾರವನ್ನು ಬಿಜೆಪಿ ಬದಲಿಸಿಕೊಂಡಿದೆಯಾ? ಆ ರೀತಿ ಆದರೆ ಎಲ್.ಕೆ.ಅಡ್ವಾಣಿ, ಡಾ. ಮುರಳಿ ಮನೋಹರ್ ಜೋಶಿ ಅವರಂತಹ ಹಿರಿಯ ನಾಯಕರಿಗೆ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡಬೇಕು’ ಎಂದು ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ.
88ರ ವಯೋಮಾನದ ಶ್ರೀಧರನ್ ಅವರು ಮೂಲತಃ ಕೇರಳದ ಪಾಲಕ್ಕಾಡ್ ಜಿಲ್ಲೆಯವರು. ಭಾರತದ ದೆಹಲಿ ಮೆಟ್ರೋ ಸೇರಿದಂತೆ ಇತರ ನಗರಗಳ ಮೆಟ್ರೋ ಯೋಜನೆ ಹಾಗೂ ಮಹತ್ವದ ರೈಲು ಯೋಜನೆಗಳಲ್ಲಿ ಶ್ರೀಧರನ್ ಪಾತ್ರ ತುಂಬಾ ದೊಡ್ಡದಿದೆ. ಅದ್ಭುತ ಎಂಜಿನಿಯರ್ ಆಗಿರುವ ಅವರನ್ನು ಮೆಟ್ರೊ ಮ್ಯಾನ್ ಎಂದೇ ಕರೆಯಲಾಗುತ್ತಿದೆ.
ಪೆಟ್ರೋಲ್, ಡಿಸೇಲ್ ಬೆಲೆ ಇಳಿಯಬೇಕಾದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಚರ್ಚಿಸಬೇಕಿದೆ: ನಿರ್ಮಲಾ ಸೀತಾರಾಮನ್

20 ವರ್ಷಗಳ ಹಿಂದೆ ಪಾಕ್‌ ಗಡಿಹೊಕ್ಕ ಮೂಕ ಬಾಲಕಿಯ ಕಥೆಯಿದು… ಕೊನೆಗೂ ಸಿಕ್ಕಿತು ಅಮ್ಮನ ಮನೆ… ಕಣ್ಣೀರಧಾರೆ…

‘ಮೆಟ್ರೊ ಮ್ಯಾನ್’ ಇ ಶ್ರೀಧರನ್ ಇದೀಗ ಕೇರಳ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − 4 =
Remember me
