ನವದೆಹಲಿ:ಪ್ರವಾದಿ ಮುಹಮ್ಮದ್ ವಿರುದ್ಧ ವಿವಾದಿತ ಹೇಳಿಕೆ ನೀಡಿದ ಇಬ್ಬರು ವಕ್ತಾರರನ್ನು ಬಿಜೆಪಿ ಅಮಾನತುಗೊಳಿಸಿದೆ. ಪಕ್ಷದ ವಕ್ತಾರರಾದ ನೂಪುರ ಶರ್ಮಾ ಮತ್ತು ನವೀನ್​ ಜಿಂದಾಲ್ ಅವರ ಪ್ರಾಥಮಿಕ ಸದಸ್ಯತ್ವವನ್ನು ಅಮಾನತಿನಲ್ಲಿ ಇರಿಸಿದೆ.
ಪಕ್ಷದ ಸ್ಥಾನಕ್ಕೆ ವಿರುದ್ಧವಾದ ಅಭಿಪ್ರಾಯ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ ಎಂದು ಪಕ್ಷದ ಕೇಂದ್ರೀಯ ಶಿಸ್ತು ಸಮಿತಿ ತಿಳಿಸಿದೆ.
ಬಿಜೆಪಿ ಎಲ್ಲ ಧರ್ಮಗಳನ್ನು ಗೌರವಿಸುತ್ತಿದ್ದು, ಯಾವುದೇ ಧರ್ಮದ ಅವಹೇಳನವನ್ನು ಖಂಡಿಸುತ್ತದೆ ಎಂದು ಪಕ್ಷವು ಪ್ರಕಟಣೆ ಹೊರಡಿಸಿದ ಬೆನ್ನಿಗೆ ಈ ಕ್ರಮವನ್ನು ಕೈಗೊಂಡಿದೆ. ಯಾವುದೇ ಧರ್ಮವನ್ನು ಅವಹೇಳನ ಮಾಡುವಂತಹ ಹೇಳಿಕೆಯನ್ನು ಪಕ್ಷವು ವಿರೋಧಿಸುತ್ತದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ತಿಳಿಸಿದ್ದಾರೆ. ಅದಾಗ್ಯೂ ಪಕ್ಷವು ಯಾವ ಕಾರಣಕ್ಕೆ ಈ ನಿರ್ಧಾರವನ್ನು ಕೈಗೊಂಡಿದೆ ಎಂಬುದವನ್ನು ಸ್ಪಷ್ಟವಾಗಿ ಉಲ್ಲೇಖಿಸಿಲ್ಲ.
ನೂಪುರ ಶರ್ಮಾ ಅವರು ಟಿವಿ ಕಾರ್ಯಕ್ರಮದಲ್ಲಿ ಪ್ರವಾದಿ ಮುಹಮದ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದು, ಭಾರಿ ಆಕ್ಷೇಪಕ್ಕೆ ಗುರಿಯಾಗಿತ್ತು. ಹಾಗೆಯೇ ನವೀನ್ ಜಿಂದಾಲ್ ಟ್ವಿಟರ್​ನಲ್ಲಿ ಇಸ್ಲಾಂ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದರು. ನೂಪುರ ಶರ್ಮಾ ಹೇಳಿಕೆ ಹಿನ್ನೆಲೆಯಲ್ಲಿ ಈ ವಾರ ಕಾನ್ಪುರದಲ್ಲಿ ಗಲಭೆ ಉಂಟಾಗಿತ್ತು.
ಹೆಂಡತಿಯ ಅಜ್ಜಿಯ ಮೇಲೇ ಅತ್ಯಾಚಾರ ಮಾಡಿದ 60 ವರ್ಷದ ಕಾಮುಕ; ಆರೋಪಿಯ ಬಂಧನ..

ಹಿಂದೂ ಸಂಘಟನೆ ಕಾರ್ಯಕರ್ತನ ಕೊಲೆಗೆ ಪ್ರತೀಕಾರ; ಸೇಡಿಗಾಗಿ ಹಾಡಹಗಲೇ ಕೊಚ್ಚಿ ಕೊಂದರು..

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:one × three =
Remember me
