ಲಖನೌ:ಉತ್ತರಪ್ರದೇಶದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡದ ದಿಗ್ವಿಜಯ ಸಾಧಿಸಿದ್ದು 600ಕ್ಕೂ ಹೆಚ್ಚು ವಾರ್ಡ್​​ಗಳಲ್ಲಿ ಜಯಭೇರಿ ಬಾರಿಸಿದೆ.
ಯೋಗಿ ಆದಿತ್ಯನಾಥ್​ ನೇತೃತ್ವದ ಬಿಜೆಪಿ ಪಕ್ಷವು ಪ್ರಮುಖವಾಗಿ 17 ನಗರಸಭೆಗಳ ಮೇಯರ್​ ಸ್ಥಾನವನ್ನು ಗೆದ್ದಿರುವುದು ಮತ್ತಷ್ಟು ವಿಶೇಷವಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ 2017ರಲ್ಲಿ ನಮ್ಮ ಪಕ್ಷವು 60 ಸ್ಥಾನಗಳನ್ನು ಗೆದ್ದಿತ್ತು. ಆದರೆ, ಈ ಭಾರಿ ನಿರೀಕ್ಷೆಗೂ ಮೀರಿ ಫಲಿತಾಂಶ ಬಂದಿರುವುದು ಸಂತಸ ತಂದಿದೆ.
ನಮ್ಮ ಮಿತ್ರ ಪಕ್ಷವಾದ ಅಪ್ನಾದಳ(ಸೋನೆಲಾಲ್​) ಪಕ್ಷವು ಸಹ ಸುವಾರ್ ಮತ್ತು ಚನ್ಬೆ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ವಿರುದ್ಧ ಜಯ ಗಳಿಸಿದೆ.
ಉತ್ತರ ಪ್ರದೇಶ ಸರ್ಕಾರವು ಅಭಿವೃದ್ದಿ ಹಾಗೂ ಜನರ ಸುರಕ್ಷತೆಯ ಹಿತದೃಷ್ಟಿಯಲ್ಲಿ ಕೆಲಸ ಮಾಡುವುದನ್ನು ಮುಂದುವರೆಸುತ್ತೇವೆ ಎಂದು ಮಾತನಾಡುವ ವೇಳೆ ಯುಪಿ ಸಿಎಂ ಯೋಗಿ ಆದಿತ್ಯನಾಥ್​ ಹೇಳಿದ್ದಾರೆ.
ಇದನ್ನೂ ಓದಿ:ಕರ್ನಾಟಕ ವಿಧಾನಸಭೆ ಫಲಿತಾಂಶ ಲೋಕಸಭಾ ಚುನಾವಣೆಗೆ ದಿಕ್ಸೂಚಿ: ಸಿದ್ದರಾಮಯ್ಯ
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಜಯ ಗಳಿಸುವ ಮೂಲಕ ಲಕ್ನೋ, ಪ್ರಯಾಗ್‌ರಾಜ್, ವಾರಣಾಸಿ, ಮೀರತ್, ಸಹರಾನ್‌ಪುರ, ಅಯೋಧ್ಯೆ, ಕಾನ್ಪುರ್, ಬರೇಲಿ, ಮೊರಾದಾಬಾದ್, ಆಗ್ರಾ, ಅಲಿಗಢ, ಫಿರೋಜಾಬಾದ್, ಗೋರಖ್‌ಪುರ, ಗಾಜಿಯಾಬಾದ್, ಝಾನ್ಸಿ, ಮಥುರಾ ಮತ್ತು ಶಹಜಹಾನ್‌ಪುರ ನಗರಸಬೆ ಮೇಯರ್​ ಸ್ಥಾನಗಳನ್ನು ಬಿಜೆಪಿ ತನ್ನ ತೆಕ್ಕೆಗೆ ಎಳೆದುಕೊಂಡಿದೆ.
ಸ್ಥಳೀಯ ಸಂಸ್ಥೆಗಳ ಚುನಾವನೆ ಘೋಷಣೆಯಾದ ಬಳಿಕ ಯುಪಿ ಸಿಎಂ ಯೋಗಿ ಆದುತ್ಯನಾಥ್​ 50ಕ್ಕೂ ಹೆಚ್ಚು ರ್‍ಯಾಲಿಗಳನ್ನು ನಡೆಸಿದ್ದರು ಮತ್ತು ಸುಭದ್ರ ಆಡಳಿತಕ್ಕಾಗಿ ಬಿಜೆಪಿಯನ್ನು ಬೆಂಬಲಿಸುವಂತೆ ಕರೆ ನೀಡಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + eight =
Remember me
