ನವದೆಹಲಿ:ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ವಿನೋದ್‌ ತಾವ್ಡೆ ಅವರು ದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದಾರೆ.
ಇದನ್ನೂ ಓದಿ:ಸನಾ ಜಾವೆದ್ ಕೈಹಿಡಿಯುತ್ತಿದ್ದಂತೆ ಕೈಕೊಟ್ಟ ಶೋಯೆಬ್ ಮಲಿಕ್ ಅದೃಷ್ಟ..! ಸಾನಿಯಾ ಶಾಪ ಇಷ್ಟು ಬೇಗ ತಟ್ಟಿತಾ ಎಂದ ನೆಟ್ಟಿಗರು
16 ರಾಜ್ಯ, 2 ಕೇಂದ್ರಾಡಳಿತ ಪ್ರದೇಶಗಳ ಲೋಕಸಭಾ ಕ್ಷೇತ್ರಗಳಿಗೆ ಟಿಕೆಟ್‌ ಘೋಷಣೆ ಮಾಡಲಾಗಿದೆ. 34 ಸಚಿವರನ್ನು ಲೋಕಸಭಾ ಚುನಾವಣೆಗೆ ಕಣಕ್ಕಿಳಿಸಲಾಗಿದೆ. ಇಬ್ಬರು ಮಾಜಿ ಸಿಎಂಗಳನ್ನು ಕೂಡ ಕಣಕ್ಕಿಳಿಸಲಾಗಿದೆ.
ಸಬ್ ಕಾ ಸಾಥ್​, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಮಾತಿನಂತೆಯೇ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ಸಿಕ್ಕಿದೆ ಎಂಬ ಮಾತುಗಳು ಬಿಜೆಪಿ ಅಂಗಳದಲ್ಲಿ ಕೇಳಿ ಬಂದಿವೆ. ಮಧ್ಯಪ್ರದೇಶದ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರು ವಿಧಿಶಾ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ. ಇನ್ನು ಅಸ್ಸಾಂ ಮಾಜಿ ಸಿಎಂ ಸರ್ಬಾನಂದ್ ಸೊನೊವಾಲಾ ಅವರು ದಿಬ್ರುಗಢ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.
ಕೇರಳ ಜಿಲ್ಲೆಯ ಮಲ್ಲಪುರಂ ಲೋಕಸಭಾ ಕ್ಷೇತ್ರದಿಂದ ಅಬ್ದುಲ್ ಸಲಾಮ್ ಎಂಬವರಿಗೆ ಬಿಜೆಪಿ ಟಿಕೆಟ್ ಸಿಕ್ಕಿದೆ. ಕರ್ನಾಟಕ, ತಮಿಳುನಾಡು ಹಾಗೂ ಓಡಿಶಾದ ಯಾವ ಕ್ಷೇತ್ರಗಳಿಗೂ ಬಿಜೆಪಿ ಅಭ್ಯರ್ಥಿಗಳನ್ನು ಮೊದಲ ಪಟ್ಟಿಯಲ್ಲಿ ಘೋಷಿಸಿಲ್ಲ.
ಉತ್ತರ ಪ್ರದೇಶದ 51 ಕ್ಷೇತ್ರಗಳಿಗೆ, ಪಶ್ಚಿಮ ಬಂಗಾಳದ 20 ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮಧ್ಯಪ್ರದೇಶದಿಂದ 24, ಗುಜರಾತ್‌ 15, ರಾಜಸ್ಥಾನ 15, ಕೇರಳ 12, ಅಸ್ಸಾಂ 11, ತೆಲಂಗಾಣ 9, ಜಾರ್ಖಂಡ್‌ 11, ಛತ್ತೀಸ್‌ಗಢ 11, ಹೊಸದಿಲ್ಲಿ 5, ಜಮ್ಮು ಕಾಶ್ಮೀರ 2, ಉತ್ತರಾಖಂಡ 3, ಅರುಣಾಚಲ ಪ್ರದೇಶ 2 ಹಾಗೂ ಗೋವಾ, ತ್ರಿಪುರ, ಅಂಡಮಾನ್‌ ಮತ್ತು ನಿಕೋಬಾರ್‌, ದಿಯು ಮತ್ತು ದಮನ್‌ಗಳ ತಲಾ ಒಂದು ಕ್ಷೇತ್ರಗಳಿಗೆ ಟಿಕೆಟ್‌ ನೀಡಲಾಗಿದೆ.
ಜಾತಿವಾರು ಟಿಕೆಟ್ ಹಂಚಿಕೆ ಹೀಗಿದೆ:ಓಬಿಸಿ ಅಭ್ಯರ್ಥಿಗಳು 57, ಹೊಸ ಅಭ್ಯರ್ಥಿಗಳು 47, ಕೇಂದ್ರ ಸಚಿವರು 34, ಮಹಿಳಾ ಅಭ್ಯರ್ಥಿಗಳು 28 ಎಸ್‌ಸಿ ಅಭ್ಯರ್ಥಿಗಳು 27, ಎಸ್‌ಟಿ ಅಭ್ಯರ್ಥಿಗಳು 18
ಬಿಜೆಪಿ ಟಿಕೆಟ್ ಪಡೆದ ಪ್ರಮುಖರು:ನರೇಂದ್ರ ಮೋದಿ – ವಾರಣಾಸಿ, ಅಮಿತ್ ಶಾ – ಗಾಂಧಿನಗರ, ರಾಜನಾಥ ಸಿಂಗ್ – ಲಖನೌ, ನಿತಿನ್ ಗಡ್ಕರಿ: ನಾಗ್ಪುರ, ಸ್ಮೃತಿ ಇರಾನಿ: ಅಮೇಥಿ, ರೀತೇಶ್ ಪಾಂಡೆ – ಅಂಬೇಡ್ಕರ್ ನಗರ, ಹೇಮಾ ಮಾಲಿನಿ – ಮಥುರಾ, ರವಿ ಕಿಶನ್ – ಗೋರಖ್ಪುರ, ಪ್ರದೀಪ್ ಕುಮಾರ್ – ಕೈರಾನಾ, ಓಂ ಬಿರ್ಲಾ – ಕೋಟ, ಬಂಡಿ ಸಂಜಯ್​​ಕುಮಾರ್ – ಕರೀಂನಗರ, ಅರವಿಂದ್ ಧರ್ಮಪುರಿ – ನಿಜಾಂಬಾದ್, ಬಿ.ಬಿ.ಪಾಟೀಲ್ – ಜಹೀರಾಬಾದ್, ಎಟೆಲ ರಾಜೇಂದರ್- ಮಲ್ಕಾಜಗಿರಿ, ಜಿ.ಕಿಶನ್ ರೆಡ್ಡಿ – ಸಿಕಂದರಾಬಾದ್.

ಸನಾ ಜಾವೆದ್ ಕೈಹಿಡಿಯುತ್ತಿದ್ದಂತೆ ಕೈಕೊಟ್ಟ ಶೋಯೆಬ್ ಮಲಿಕ್ ಅದೃಷ್ಟ..! ಸಾನಿಯಾ ಶಾಪ ಇಷ್ಟು ಬೇಗ ತಟ್ಟಿತಾ ಎಂದ ನೆಟ್ಟಿಗರು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + 8 =
Remember me
