ನವದೆಹಲಿ:ಮುಂಬರುವ ಲೋಕಸಭೆ ಹಾಗೂ ವರ್ಷಾಂತ್ಯದಲ್ಲಿ ಪಂಚರಾಜ್ಯಗಳ ಚುನಾವಣೆ​ ಸಂಬಂಧ ಬಿಜೆಪಿ ನಾಯಕರು ಬುಧವಾರ ತಡರಾತ್ರಿ ಸಭೆ ನಡೆಸಿದ್ದಾರೆ.
ಸುಮಾರು ಐದು ಘಂಟೆಗಳಿಗೂ ಹೆಚ್ಚು ಕಾಲ ಸಭೆ ನಡೆದಿದ್ದು, ಪಕ್ಷ ಸಂಘಟನೆಯಲ್ಲಿ ಕೆಲವು ಬದಲಾವಣೆಗಳನ್ನು ತರಲು ಬಿಜೆಪಿ ನಾಯಕರು ಯೋಜನೆ ರೂಪಿಸಿದ್ಧಾರೆ ಎಂದು ವರದಿಯಾಗಿದೆ.
ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್​ ಷಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಪ್ರಮುಖ ನಾಯಕರು ಬುಧವಾರ ತಡರಾತ್ರಿ ಮಹತ್ತರವಾದ ಚರ್ಚೆ ನಡೆಸಿದ್ಧಾರೆ ಎಂದು ಅಧಿಕೃತ ಸುದ್ದಿ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಏಕರೂ ನಾಗರೀಕ ಸಂಹಿತೆ(UCC) ಜಾರಿ, ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸೋಲು, ಕೇಂದ್ರ ಸಚಿವ ಸಂಪುಟ ಪುನಾರಚನೆ, ಮುಂಬರುವ ಪಂಚರಾಜ್ಯ ಚುನಾವಣೆಗಳ ಬಗ್ಗೆ ಪ್ರಮುಖವಾಗಿ ಚರ್ಚೆ ನಡೆಸಲಾಗಿದೆ. ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ಸಂಘಟನೆಯ ದೃಷ್ಟಿಯಿಂದ ಚರ್ಚೆ ನಡೆಸಲಾಗಿದೆ ಎಂದು ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ:VIDEO| ಹಾಡಹಗಲೇ ಯುವತಿ ಮೇಲೆ ಮಚ್ಚಿನಿಂದ ಅಟ್ಯಾಕ್​
ಮುಂಬರುವ ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಸಂಬಂಧ ಸಂಪುಟದಲ್ಲಿ ಹಲವು ಬದಲಾವಣೆಗಳನ್ನು ತರಲು ಬಿಜೆಪಿ ನಾಯಕರು ಉದ್ದೇಶಿಸಿದ್ಧಾರೆ ಎಂದು ಹೇಳಲಾಗಿದೆ. ಸಭೆಯಲ್ಲಿ ಪ್ರಮುಖವಾಗಿ ಕೇಂದ್ರ ಸಚಿವ ಸಂಪುಟ ಪುನಾರಚನೆ ಕುರಿತು ಮಾತುಕತೆ ನಡೆದಿದ್ದು, ಹೊಸ ಮುಖಗಳಿಗೆ ಅವಕಾಶ ನೀಡಲು ಯೋಜಿಸಲಾಗಿದೆ.
ಇನ್ನು ಸಭೆಯಲ್ಲಿ ವಿಪಕ್ಷಗಳ ಮಹಾಮೈತ್ರಿ ಕುರಿತು ಚರ್ಚಿಸಲಾಗಿದ್ದು, ಅದರ ವಿರುದ್ಧ ಪರಿಣಾಮಕಾರಿ ತಂತ್ರಗಾರಿಕೆ ಅನುಸರಿಸುವ ಬಗ್ಗೆ ಸಮಾಲೋಚನೆ ನಡೆಸಲಾಗಿದೆ. ಪಕ್ಷದ ಸಂಘಟನೆಯಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಕೆಲವು ದಿನಗಳ ಹಿಂದೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಪ್ರದಾನ ಕಾರ್ಯದರ್ಶಿ ಬಿ.ಎಲ್​. ಸಂತೋಷ್​ ಭೇಟಿಯಾಗಿ ಮಾತುಕತೆ ನಡೆಸಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − one =
Remember me
